ಕೀರ್ತನೆಗಳು 97
ನಿಮ್ಮ ಭಾಷೆಯಲ್ಲಿ ಇನ್ನೂ ಯಾವುದೇ ಅನುವಾದವಿಲ್ಲ — ಇಂಗ್ಲಿಷ್ ತೋರಿಸಲಾಗುತ್ತಿದೆ
1ಯೆಹೋವನು ರಾಜ್ಯಾಧಿಕಾರವನ್ನು ವಹಿಸಿದ್ದಾನೆ; ಭೂಲೋಕವು ಸಂತೋಷಿಸಲಿ; ಸಮುದ್ರದ ತೀರಪ್ರದೇಶಗಳೆಲ್ಲಾ ಹರ್ಷಿಸಲಿ.
2ಮೋಡಗಳೂ, ಕಾರ್ಗತ್ತಲೆಯೂ ಆತನ ಸುತ್ತಲೂ ಇರುತ್ತವೆ; ಯೆಹೋವನು ನೀತಿ ಮತ್ತು ನ್ಯಾಯಗಳಿಂದ ಆಳುತ್ತಾನೆ .
3ಬೆಂಕಿಯು ಆತನ ಮುಂದೆ ಹೋಗಿ, ಸುತ್ತಲೂ ಆವರಿಸಿ ಆತನ ವೈರಿಗಳನ್ನು ದಹಿಸಿಬಿಡುತ್ತದೆ.
4ಆತನ ಮಿಂಚುಗಳು ಲೋಕವನ್ನು ಬೆಳಗಿಸಿದವು; ಭೂಮಿಯು ಅದನ್ನು ಕಂಡು ನಡುಗಿತು.
5ಸಾರ್ವಭೌಮನಾದ ಯೆಹೋವನ ಎದುರಿನಲ್ಲಿ ಪರ್ವತಗಳು ಮೇಣದಂತೆ ಕರಗಿಹೋದವು.
6ಗಗನಮಂಡಲವು ಆತನ ನೀತಿಯನ್ನು ಪ್ರಸಿದ್ಧಪಡಿಸಿತು; ಎಲ್ಲಾ ಜನರು ಆತನ ಮಹಿಮೆಯನ್ನು ಕಂಡರು.
7ವಿಗ್ರಹಗಳಲ್ಲಿ ಹಿಗ್ಗುವವರೂ, ಮೂರ್ತಿಪೂಜಕರೆಲ್ಲರೂ ನಾಚಿಕೆಗೆ ಒಳಪಡುವರು; ದೇವರುಗಳೆಂದು ಕರೆಯಲ್ಪಡುವವರೇ, ನೀವೆಲ್ಲರೂ ಆತನಿಗೆ ಅಡ್ಡಬೀಳಿರಿ.
8ಯೆಹೋವನೇ, ನೀನು ನ್ಯಾಯಸ್ಥಾಪಿಸಿದ ವಾರ್ತೆಯನ್ನು ಕೇಳಿ ಚೀಯೋನ್ ಪಟ್ಟಣವು ಹರ್ಷಿಸಿತು; ಯೆಹೂದ ಪ್ರಾಂತ್ಯದ ಊರುಗಳು ಸಂತೋಷಿಸಿದವು.
9ಯೆಹೋವನೇ, ನೀನು ಭೂಲೋಕದ ಸರ್ವಾಧಿಕಾರಿ; ಎಲ್ಲಾ ದೇವರುಗಳಲ್ಲಿ ಮಹೋನ್ನತನು ನೀನೇ.
10ಕೆಟ್ಟತನವನ್ನು ಹಗೆಮಾಡುವವರನ್ನು, ಯೆಹೋವನನ್ನು ಪ್ರೀತಿಸುತ್ತಾನೆ. ಆತನು ತನ್ನ ಭಕ್ತರ ಪ್ರಾಣಗಳನ್ನು ಕಾಯುವವನಾಗಿ, ದುಷ್ಟರ ಕೈಯೊಳಗಿಂದ ಅವರನ್ನು ಬಿಡಿಸುವನು.
11ನೀತಿವಂತರಿಗೋಸ್ಕರ ಬೆಳಕು ಪ್ರಕಾಶಿಸುವುದು , ಯಥಾರ್ಥಹೃದಯವುಳ್ಳವರಿಗೆ ಸಂತೋಷವೂ ಕೊಡಲ್ಪಟ್ಟಿವೆ.
12ನೀತಿವಂತರೇ, ಯೆಹೋವನಲ್ಲಿ ಆನಂದಿಸಿರಿ; ಆತನ ಪರಿಶುದ್ಧನಾಮವನ್ನು ಕೊಂಡಾಡಿರಿ.
WEBREATH · 11:11
«He himself gives everyone life and breath and everything else» — Acts 17:25
Breath is one for all: everyone lives by it, whoever they are and whatever they believe. Every day at 11:11 local time people stop for sixty seconds, breathe, and thank GOD for the breath — each in their own words, each within themselves. In that minute we are One Breath.
WEBREATH — the Minute at 11:11, your own local time — we are One Breath