ಕ್ರಿಶ್ಚಿಯನ್ ಧರ್ಮ
ಹಿಂದೆ

ಕೀರ್ತನೆಗಳು 98

ನಿಮ್ಮ ಭಾಷೆಯಲ್ಲಿ ಇನ್ನೂ ಯಾವುದೇ ಅನುವಾದವಿಲ್ಲ — ಇಂಗ್ಲಿಷ್ ತೋರಿಸಲಾಗುತ್ತಿದೆ

1ಯೆಹೋವನಿಗೆ ಹೊಸ ಕೀರ್ತನೆಯನ್ನು ಹಾಡಿರಿ; ಆತನು ಅದ್ಭುತಕೃತ್ಯಗಳನ್ನು ನಡೆಸಿದ್ದಾನೆ. ಆತನ ಬಲಗೈಯೂ, ಪರಿಶುದ್ಧಬಾಹುವೂ ಜಯವನ್ನು ಉಂಟುಮಾಡಿವೆ.

2ಯೆಹೋವನು ತನ್ನ ರಕ್ಷಣೆಯನ್ನು ಪ್ರಕಟಿಸಿದ್ದಾನೆ; ಜನಾಂಗಗಳೆದುರಿಗೆ ತನ್ನ ನೀತಿಯನ್ನು ತೋರ್ಪಡಿಸಿದ್ದಾನೆ.

3ಆತನು ಇಸ್ರಾಯೇಲನ ಮನೆತನದವರ ಬಗ್ಗೆ ಇದ್ದ, ತನ್ನ ಪ್ರೀತಿ, ಸತ್ಯತೆಗಳನ್ನು ನೆನಪುಮಾಡಿಕೊಂಡಿದ್ದಾನೆ. ಭೂಲೋಕದ ಎಲ್ಲಾ ಕಡೆಯವರೂ, ನಮ್ಮ ದೇವರ ರಕ್ಷಣಾಕಾರ್ಯವನ್ನು ನೋಡಿದ್ದಾರೆ.

4ಸಮಸ್ತ ಭೂನಿವಾಸಿಗಳೇ, ಯೆಹೋವನಿಗೆ ಜಯಘೋಷಮಾಡಿರಿ; ಹರ್ಷಿಸಿರಿ, ಉತ್ಸಾಹಧ್ವನಿಮಾಡಿ ಹಾಡಿರಿ.

5ಕಿನ್ನರಿಯೊಡನೆ ಯೆಹೋವನನ್ನು ಸ್ತುತಿಸಿರಿ; ಕಿನ್ನರಿಯನ್ನು ನುಡಿಸುತ್ತಾ ಭಜಿಸಿರಿ.

6ತುತ್ತೂರಿಗಳನ್ನೂ, ಕೊಂಬನ್ನೂ ಊದುತ್ತಾ, ಯೆಹೋವರಾಜನಿಗೆ ಜಯಘೋಷಮಾಡಿರಿ.

7ಯೆಹೋವನ ಮುಂದೆ ಸಮುದ್ರವೂ, ಅದರಲ್ಲಿರುವುದೆಲ್ಲವೂ, ಭೂಮಿಯೂ, ಅದರ ನಿವಾಸಿಗಳೂ ಘೋಷಿಸಲಿ.

8ನದಿಗಳು ಚಪ್ಪಾಳೆ ಹೊಡೆಯಲಿ; ಪರ್ವತಗಳೆಲ್ಲಾ ಉತ್ಸಾಹಧ್ವನಿಮಾಡಲಿ.

9ಆತನು ಭೂನಿವಾಸಿಗಳಿಗೆ ನ್ಯಾಯತೀರಿಸಲಿಕ್ಕೆ ಬರುತ್ತಾನೆ; ಆತನು ಲೋಕಕ್ಕೆ ನೀತಿಗನುಸಾರವಾಗಿಯೂ, ಜನಾಂಗಗಳಿಗೆ ಯಥಾರ್ಥವಾಗಿಯೂ ತೀರ್ಪುಕೊಡುವನು.

ಮೂಲ: ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

WEBREATH · 11:11

«He himself gives everyone life and breath and everything else» — Acts 17:25

Breath is one for all: everyone lives by it, whoever they are and whatever they believe. Every day at 11:11 local time people stop for sixty seconds, breathe, and thank GOD for the breath — each in their own words, each within themselves. In that minute we are One Breath.

WEBREATH — the Minute at 11:11, your own local time — we are One Breath