ಕೀರ್ತನೆಗಳು 99
ನಿಮ್ಮ ಭಾಷೆಯಲ್ಲಿ ಇನ್ನೂ ಯಾವುದೇ ಅನುವಾದವಿಲ್ಲ — ಇಂಗ್ಲಿಷ್ ತೋರಿಸಲಾಗುತ್ತಿದೆ
1ಯೆಹೋವನು ರಾಜ್ಯಾಧಿಕಾರವನ್ನು ವಹಿಸಿದ್ದಾನೆ; ಜನಾಂಗಗಳು ನಡುಗಲಿ. ಕೆರೂಬಿಯರ ಮಧ್ಯದಲ್ಲಿ ಆಸೀನನಾಗಿರುವಾತನು ಆಳುತ್ತಾನೆ; ಭೂಮಿಯು ಕಂಪಿಸಲಿ.
2ಚೀಯೋನಿನಲ್ಲಿರುವ ಯೆಹೋವನು ದೊಡ್ಡವನು; ಆತನು ಎಲ್ಲಾ ಜನಾಂಗಗಳಲ್ಲಿ ಮಹೋನ್ನತನು.
3ಅವರು ಯೆಹೋವನ ಭಯಂಕರವಾದ ಮಹಾನಾಮವನ್ನು ಕೊಂಡಾಡಲಿ; ಆತನು ಪರಿಶುದ್ಧನು.
4ಪರಾಕ್ರಮಿಯಾದ ಅರಸನು ನೀತಿಯನ್ನು ಪ್ರೀತಿಸುತ್ತಾನೆ ; ಯಥಾರ್ಥವಾದದ್ದನ್ನು ಸ್ಥಾಪಿಸಿದವನೂ, ಯಾಕೋಬ್ಯರಲ್ಲಿ ನ್ಯಾಯ, ನೀತಿಗಳನ್ನು ಸಿದ್ಧಿಗೆ ತಂದವನೂ ನೀನೇ.
5ನಮ್ಮ ಯೆಹೋವ ದೇವರನ್ನು ಘನಪಡಿಸಿರಿ; ಆತನ ಪಾದಪೀಠದ ಮುಂದೆ ಅಡ್ಡಬೀಳಿರಿ. ಆತನು ಪರಿಶುದ್ಧನು.
6ಆತನ ಯಾಜಕರಲ್ಲಿ ಮೋಶೆ ಮತ್ತು ಆರೋನರೂ, ಆತನ ಹೆಸರಿನಲ್ಲಿ ಪ್ರಾರ್ಥಿಸುವವರೊಳಗೆ ಸಮುವೇಲನೂ ಪ್ರಾರ್ಥಿಸಿದಾಗೆಲ್ಲ, ಯೆಹೋವನು ಅವರಿಗೆ ಸದುತ್ತರವನ್ನು ದಯಪಾಲಿಸುತ್ತಿದ್ದನು.
7ಆತನು ಮೇಘಸ್ತಂಭದಲ್ಲಿದ್ದು ಅವರೊಡನೆ ಮಾತನಾಡುತ್ತಿದ್ದನು; ಅವರು ಆತನ ವಿಧಿನಿಯಮಗಳನ್ನು ಕೈಕೊಂಡವರು.
8ನಮ್ಮ ಯೆಹೋವ ದೇವರೇ, ಅವರಿಗೆ ಸದುತ್ತರ ಕೊಟ್ಟವನು ನೀನೇ. ನೀನು ದುಷ್ಕೃತ್ಯಗಳಿಗಾಗಿ ಅವರನ್ನು ದಂಡಿಸುತ್ತಿದ್ದರೂ, ಕ್ಷಮಿಸುವ ದೇವರಾಗಿದ್ದಿ.
9ನಮ್ಮ ಯೆಹೋವ ದೇವರನ್ನು ಘನಪಡಿಸಿರಿ; ಆತನ ಪರಿಶುದ್ಧಪರ್ವತದ ಕಡೆಗೆ ಅಡ್ಡಬೀಳಿರಿ. ನಮ್ಮ ಯೆಹೋವ ದೇವರು ಪರಿಶುದ್ಧನು.
WEBREATH · 11:11
«He himself gives everyone life and breath and everything else» — Acts 17:25
Breath is one for all: everyone lives by it, whoever they are and whatever they believe. Every day at 11:11 local time people stop for sixty seconds, breathe, and thank GOD for the breath — each in their own words, each within themselves. In that minute we are One Breath.
WEBREATH — the Minute at 11:11, your own local time — we are One Breath