ಕ್ರಿಶ್ಚಿಯನ್ ಧರ್ಮ
ಹಿಂದೆ

ಕೀರ್ತನೆಗಳು 9

ನಿಮ್ಮ ಭಾಷೆಯಲ್ಲಿ ಇನ್ನೂ ಯಾವುದೇ ಅನುವಾದವಿಲ್ಲ — ಇಂಗ್ಲಿಷ್ ತೋರಿಸಲಾಗುತ್ತಿದೆ

1ಯೆಹೋವನೇ, ಮನಃಪೂರ್ವಕವಾಗಿ ನಿನ್ನನ್ನು ಕೊಂಡಾಡುವೆನು; ನೀನು ಮಾಡಿದ ಅದ್ಭುತಕಾರ್ಯಗಳನ್ನೆಲ್ಲಾ ವರ್ಣಿಸುವೆನು.

2ಪರಾತ್ಪರನಾದ ದೇವರೇ, ನಾನು ನಿನ್ನಲ್ಲಿ ಸಂತೋಷಿಸಿ ಉತ್ಸಾಹಗೊಳ್ಳುವೆನು; ನಿನ್ನ ಹೆಸರನ್ನು ಕೀರ್ತಿಸುವೆನು.

3ನನ್ನ ಹಗೆಗಳು ನಿನ್ನ ಎದುರಿನಿಂದ ಹಿಂದಿರುಗಿ ಎಡವಿಬಿದ್ದು ಹಾಳಾದರಲ್ಲಾ.

4ನನ್ನ ವ್ಯಾಜ್ಯದಲ್ಲಿ ನೀನು ನ್ಯಾಯವನ್ನು ಸ್ಥಾಪಿಸಿದಿ; ನೀನು ಆಸನಾರೂಢನಾಗಿ ನೀತಿಯಿಂದ ನ್ಯಾಯವನ್ನು ನಿರ್ಣಯಿಸುತ್ತಿ.

5ನೀನು ಜನಾಂಗಗಳನ್ನು ಹೆದರಿಸಿ ದುಷ್ಟರನ್ನು ನಾಶ ಮಾಡಿದ್ದಿ, ಅವರ ಹೆಸರನ್ನು ಯುಗಯುಗಾಂತರಕ್ಕೂ ಅಳಿಸಿಬಿಟ್ಟಿದ್ದಿ.

6ಶತ್ರುಗಳು ನಿಶ್ಶೇಷವಾದರು; ನೀನು ಕೆಡವಿದ ಅವರ ಪಟ್ಟಣಗಳು ಸಂಪೂರ್ಣವಾಗಿ ಹಾಳಾದವು. ಅವರ ಸ್ಮರಣೆಯೇ ಇಲ್ಲವಾಯಿತು.

7ಯೆಹೋವನಾದರೋ ಯಾವಾಗಲೂ ನೆಲೆಗೊಂಡಿದ್ದು, ನ್ಯಾಯವಿಚಾರಿಸುವುದಕ್ಕಾಗಿ ತನ್ನ ಸಿಂಹಾಸನವನ್ನು ಸ್ಥಾಪಿಸಿದ್ದಾನೆ.

8ಆತನೇ ನೀತಿಗನುಸಾರವಾಗಿ ಲೋಕಕ್ಕೆ ನ್ಯಾಯ ತೀರಿಸುವವನು; ಆತನು ಜನಾಂಗಗಳಿಗೆ ಸತ್ಯಕ್ಕನುಸಾರವಾಗಿ ತೀರ್ಪುಕೊಡುವನು.

9ಯೆಹೋವನು ಕುಗ್ಗಿದವರಿಗೆ ಆಶ್ರಯವೂ, ಆಪತ್ಕಾಲದಲ್ಲಿ ದುರ್ಗವೂ ಆಗಿರುವನು.

10ಯೆಹೋವನೇ, ನಿನ್ನ ನಾಮಮಹಿಮೆಯನ್ನು ಬಲ್ಲವರು ನಿನ್ನಲ್ಲಿ ಭರವಸವಿಡುವರು; ಏಕೆಂದರೆ ನಿನ್ನ ಮೊರೆಹೋಗುವವರನ್ನು ನೀನು ಕೈಬಿಡುವವನಲ್ಲ.

11ಚೀಯೋನಿನಲ್ಲಿ ವಾಸಿಸುವ ಯೆಹೋವನನ್ನು ಕೀರ್ತಿಸಿರಿ; ಆತನ ಮಹತ್ಕಾರ್ಯಗಳನ್ನು ಜನಾಂಗಗಳಲ್ಲಿ ಪ್ರಕಟಿಸಿರಿ.

12ಆತನು ಕುಗ್ಗಿದವರ ಮೊರೆಯನ್ನು ಮರೆಯದೆ ಪ್ರಾಣಾಪರಾಧಕ್ಕೆ ಮುಯ್ಯಿತೀರಿಸುವವನಾಗಿ ಅವರನ್ನು ಜ್ಞಾಪಕಮಾಡಿಕೊಳ್ಳುವನು.

13ಯೆಹೋವನೇ, ಮರಣದ್ವಾರದೊಳಗೆ ಸೇರದಂತೆ; ನನ್ನನ್ನು ಉದ್ಧರಿಸುವವನೇ, ಕನಿಕರಿಸು; ಹಗೆಗಳಿಂದ ನನಗುಂಟಾದ ಬಾಧೆಯನ್ನು ಲಕ್ಷ್ಯಕ್ಕೆ ತಂದುಕೋ.

14ಆಗ ನಾನು ನಿನ್ನ ಸ್ತೋತ್ರವನ್ನು ಪ್ರಸಿದ್ಧಪಡಿಸುವೆನು; ನಿನ್ನಿಂದಾದ ರಕ್ಷಣೆಗಾಗಿ ಚೀಯೋನೆಂಬ ಕುಮಾರಿಯ ಬಾಗಿಲುಗಳಲ್ಲಿ ಹರ್ಷಿಸುವೆನು.

15ಜನಾಂಗಗಳವರು ತಾವು ಮಾಡಿದ ಕುಣಿಯಲ್ಲಿ ತಾವೇ ಬಿದ್ದು ಹೋದರು; ಅವರು ಹಾಸಿದ ಬಲೆಯಲ್ಲಿ ಅವರ ಕಾಲೇ ಸಿಕ್ಕಿಕೊಂಡಿತು.

16ಯೆಹೋವನು ನ್ಯಾಯತೀರಿಸುವವನಾಗಿ ತನ್ನನ್ನು ಪ್ರಕಟಿಸಿಕೊಂಡಿದ್ದಾನೆ; ದುಷ್ಟರು ತಾವೇ ಕಲ್ಪಿಸಿದ ಕುಯುಕ್ತಿಯಲ್ಲಿ ಸಿಕ್ಕಿಕೊಂಡಿದ್ದಾರಲ್ಲಾ. ಹಿಗ್ಗಾಯೋನ್ ಸೆಲಾ

17ದುಷ್ಟರು ಅಂದರೆ ದೇವರನ್ನು ಅಲಕ್ಷ್ಯಮಾಡುವ ಜನಾಂಗಗಳವರೆಲ್ಲಾ ಪಾತಾಳಕ್ಕೆ ಇಳಿದುಹೋಗುವರು.

18ದಿಕ್ಕಿಲ್ಲದವರು ಕಡೆಯವರೆಗೆ ಮರೆಯಲ್ಪಡುವುದಿಲ್ಲ; ದೀನರ ನಿರೀಕ್ಷೆಯು ಕೆಡುವುದೇ ಇಲ್ಲ.

19ಯೆಹೋವನೇ, ಏಳು; ಮನುಷ್ಯಮಾತ್ರದವರು ಬಲಗೊಳ್ಳಬಾರದು. ಜನಾಂಗಗಳಿಗೆ ನಿನ್ನ ಸನ್ನಿಧಿಯಲ್ಲಿ ತೀರ್ಪು ಉಂಟಾಗಲಿ.

20ಯೆಹೋವನೇ, ಅವರಿಗೆ ಭಯವನ್ನು ಹುಟ್ಟಿಸು; ಜನಾಂಗಗಳು ತಾವು ಮನುಷ್ಯಮಾತ್ರದವರೆಂದು ತಿಳಿದುಕೊಳ್ಳಲಿ. ಸೆಲಾ.

ಮೂಲ: ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

WEBREATH · 11:11

«He himself gives everyone life and breath and everything else» — Acts 17:25

Breath is one for all: everyone lives by it, whoever they are and whatever they believe. Every day at 11:11 local time people stop for sixty seconds, breathe, and thank GOD for the breath — each in their own words, each within themselves. In that minute we are One Breath.

WEBREATH — the Minute at 11:11, your own local time — we are One Breath