ಕ್ರಿಶ್ಚಿಯನ್ ಧರ್ಮ
ಹಿಂದೆ

ಪ್ರಕಟಣೆ 13

ನಿಮ್ಮ ಭಾಷೆಯಲ್ಲಿ ಇನ್ನೂ ಯಾವುದೇ ಅನುವಾದವಿಲ್ಲ — ಇಂಗ್ಲಿಷ್ ತೋರಿಸಲಾಗುತ್ತಿದೆ

1ಸಮುದ್ರದಿಂದ ಒಂದು ಮೃಗವು ಏರಿಬರುವುದನ್ನು ಕಂಡೆನು. ಅದಕ್ಕೆ ಏಳು ತಲೆಗಳೂ, ಹತ್ತು ಕೊಂಬುಗಳೂ, ಕೊಂಬುಗಳ ಮೇಲೆ ಹತ್ತು ಕಿರೀಟಗಳೂ, ಹಣೆಗಳ ಮೇಲೆ ದೇವದೂಷಣೆಯ ನಾಮಗಳೂ ಇದ್ದವು.

2ನಾನು ಕಂಡ ಮೃಗವು ಚಿರತೆಯಂತಿತ್ತು ಅದರ ಕಾಲುಗಳು ಕರಡಿಯ ಕಾಲುಗಳಂತೆಯೂ ಅದರ ಬಾಯಿ ಸಿಂಹದ ಬಾಯಿಯಂತೆಯೂ ಇದ್ದವು. ಅದಕ್ಕೆ ಘಟಸರ್ಪನು ಶಕ್ತಿಯನ್ನೂ, ಸಿಂಹಾಸನವನ್ನೂ, ಮಹಾ ಅಧಿಕಾರವನ್ನೂ ಕೊಟ್ಟನು.

3ಅದರ ತಲೆಗಳಲ್ಲಿ ಒಂದು ತಲೆ ಗಾಯಹೊಂದಿ ಸಾಯುವ ಹಾಗಿರುವುದನ್ನು ಕಂಡೆನು. ಆ ಮರಣಕರವಾದ ಗಾಯವು ವಾಸಿಯಾಯಿತು, ಭೂಲೋಕದವರೆಲ್ಲರು ಆ ಮೃಗವನ್ನು ನೋಡುತ್ತಾ ಆಶ್ಚರ್ಯಪಟ್ಟರು.

4ಘಟಸರ್ಪನು ಆ ಮೃಗಕ್ಕೆ ಅಧಿಕಾರವನ್ನು ಕೊಟ್ಟವನಾದ್ದರಿಂದ ಅವರು ಆ ಘಟಸರ್ಪನಿಗೆ ಆರಾಧನೆ ಮಾಡಿದರು. ಇದಲ್ಲದೆ ಆ ಮೃಗಕ್ಕೂ ಆರಾಧನೆ ಮಾಡಿ, “ಈ ಮೃಗಕ್ಕೆ ಸಮಾನರು ಯಾರು? ಇದರ ವಿರುದ್ಧ ಯುದ್ಧ ಮಾಡುವುದಕ್ಕೆ ಯಾರು ಶಕ್ತರು?” ಎಂದರು.

5ಬಡಾಯಿಮಾತುಗಳನ್ನೂ ದೂಷಣೆಯ ಮಾತುಗಳನ್ನೂ ಆಡುವ ಬಾಯಿ ಅದಕ್ಕೆ ಕೊಡಲ್ಪಟ್ಟಿತು ಮತ್ತು ನಲವತ್ತೆರಡು ತಿಂಗಳ ಪರ್ಯಂತರ ತನ್ನ ಕಾರ್ಯಗಳನ್ನು ನಡಿಸುವ ಅಧಿಕಾರವೂ ಅದಕ್ಕೆ ಕೊಡಲ್ಪಟ್ಟಿತು.

6ಆ ಮೃಗವು ಬಾಯಿದೆರೆದು ದೇವರನ್ನು ದೂಷಿಸಿದ್ದಲ್ಲದೆ ಆತನ ನಾಮವನ್ನೂ, ಆತನು ವಾಸಿಸುವ ನಿವಾಸವನ್ನೂ, ಪರಲೋಕ ನಿವಾಸಿಗಳನ್ನೂ ದೂಷಿಸಿತು.

7ಇದಲ್ಲದೆ ದೇವಜನರ ಮೇಲೆ ಯುದ್ಧ ಮಾಡಿ ಅವರನ್ನು ಜಯಿಸುವುದಕ್ಕೆ ಅದಕ್ಕೆ ಅಧಿಕಾರ ಕೊಡಲ್ಪಟ್ಟಿತು ಮತ್ತು ಸಕಲ ಕುಲ, ಜನ, ಭಾಷೆ, ಜನಾಂಗಗಳ ಮೇಲೆ ಅದಕ್ಕೆ ಅಧಿಕಾರವು ಕೊಡಲ್ಪಟ್ಟಿತು.

8ಜಗದುತ್ಪತ್ತಿಗೆ ಮೊದಲೇ ಕೊಯ್ಯಲ್ಪಟ್ಟ ಕುರಿಮರಿಯಾದಾತನ ಬಳಿಯಲ್ಲಿರುವ ಜೀವಬಾಧ್ಯರ ಪುಸ್ತಕದಲ್ಲಿ ಯಾರಾರ ಹೆಸರುಗಳು ಬರೆದಿರುವುದಿಲ್ಲವೋ ಆ ಭೂನಿವಾಸಿಗಳೆಲ್ಲರೂ ಅದಕ್ಕೆ ಆರಾಧನೆ ಮಾಡುವರು.

9ಕಿವಿಯುಳ್ಳವನು ಕೇಳಲಿ,

10ಸೆರೆಹಿಡಿಯುವವನು ತಾನೇ ಸೆರೆಗೆ ಹೋಗುವನು, ಕತ್ತಿಯಿಂದ ಕೊಲ್ಲುವವನು ಕತ್ತಿಯಿಂದಲೇ ಸಾಯುವನು. ಇದರಲ್ಲಿ ದೇವಜನರಿಗೆ ತಾಳ್ಮೆಯೂ ನಂಬಿಕೆಯೂ ಅಗತ್ಯವಾಗಿರಬೇಕಾಗಿದೆ.

11ಮತ್ತೊಂದು ಮೃಗವು ಭೂಮಿಯೊಳಗಿಂದ ಬರುವುದನ್ನು ಕಂಡೆನು. ಇದಕ್ಕೆ ಕುರಿಮರಿಗಿರುವಂತೆ ಎರಡು ಕೊಂಬುಗಳಿದ್ದವು, ಅದು ಘಟಸರ್ಪದಂತೆ ಮಾತನಾಡಿತು.

12ಈ ಮೃಗವು ಮೊದಲನೆಯ ಮೃಗದ ಎದುರು ತನ್ನ ಅಧಿಕಾರವನ್ನೆಲ್ಲಾ ನಡೆಸಿ, ಮರಣಕರವಾದ ಗಾಯ ವಾಸಿಯಾದ ಮೊದಲನೆಯ ಮೃಗಕ್ಕೆ ಭೂಲೋಕವೂ ಭೂನಿವಾಸಿಗಳೂ ಆರಾಧಿಸುವಂತೆ ಮಾಡಿತು.

13ಇದು ಜನರ ಮುಂದೆ ಬೆಂಕಿ ಆಕಾಶದಿಂದ ಭೂಮಿಗೆ ಇಳಿದುಬರುವಂತಹ ಅದ್ಭುತಕಾರ್ಯಗಳನ್ನು ಮಾಡುತ್ತಾ,

14ಆ ಮೊದಲನೆಯ ಮೃಗದ ಸನ್ನಿಧಿಯಲ್ಲಿ ಮಹತ್ಕಾರ್ಯಗಳನ್ನು ಮಾಡುವ ಅಧಿಕಾರವಿರುವುದರಿಂದ ಭೂನಿವಾಸಿಗಳನ್ನು ಮರಳುಗೊಳಿಸಿತ್ತು. ಅವರಿಗೆ, ಕತ್ತಿಯಿಂದ ಗಾಯಹೊಂದಿ ಸಾಯದೆ ಬದುಕಿದ ಮೃಗದ ಘನಕ್ಕಾಗಿ ವಿಗ್ರಹವನ್ನು ಮಾಡಿಸಿಕೊಳ್ಳಬೇಕೆಂದು ಬೋಧಿಸಿತು.

15ಇದಲ್ಲದೆ ಆ ಮೃಗದ ವಿಗ್ರಹಕ್ಕೆ ಜೀವಕೊಡುವ ಸಾಮರ್ಥ್ಯವು ಇದಕ್ಕೆ ದೊರೆಯಿತು. ಆ ಮೃಗದ ವಿಗ್ರಹವು ಮಾತನಾಡುವುದಲ್ಲದೆ, ತನ್ನನ್ನು ಆರಾಧಿಸದವರೆಲ್ಲರಿಗೂ ಮರಣದಂಡನೆಯಾಗುವಂತೆ ಮಾಡುವ ಶಕ್ತಿಯು ಆದಕ್ಕಿತ್ತು.

16ಈ ಎರಡನೆಯ ಮೃಗವು, ದೊಡ್ಡವರು, ಚಿಕ್ಕವರು, ಐಶ್ವರ್ಯವಂತರು, ಬಡವರು, ಸ್ವತಂತ್ರರು, ದಾಸರು ಎಲ್ಲರೂ ತಮ್ಮತಮ್ಮ ಬಲಗೈಯ ಮೇಲಾಗಲಿ, ಹಣೆಯ ಮೇಲಾಗಲಿ ಗುರುತನ್ನು ಹೊಂದಬೇಕೆಂದು ಒತ್ತಾಯ ಮಾಡಿತ್ತು.

17ಆ ಗುರುತು ಯಾರಿಗಿಲ್ಲವೋ ಅವರು ಕ್ರಯ ವಿಕ್ರಯಗಳನ್ನು ನಡೆಸಲು ಸಾಧ್ಯವಿರಲಿಲ್ಲ. ಆ ಗುರುತು ಯಾವುದೆಂದರೆ ಮೊದಲನೆಯ ಮೃಗದ ಹೆಸರು ಅಥವಾ ಅದರ ಹೆಸರನ್ನು ಸೂಚಿಸುವ ಸಂಖ್ಯೆ.

18ಇದನ್ನು ಗ್ರಹಿಸಲು ಜ್ಞಾನವು ಅಗತ್ಯವಾಗಿದೆ. ಬುದ್ಧಿವಂತನು ಆ ಮೃಗದ ಸಂಖ್ಯೆಯನ್ನು ಎಣಿಸಲಿ, ಅದು ಒಬ್ಬ ಮನುಷ್ಯನನ್ನು ಸೂಚಿಸುವ ಸಂಖ್ಯೆಯಾಗಿದೆ. ಅದರ ಸಂಖ್ಯೆಯು 666.

ಮೂಲ: ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

WEBREATH · 11:11

«He himself gives everyone life and breath and everything else» — Acts 17:25

Breath is one for all: everyone lives by it, whoever they are and whatever they believe. Every day at 11:11 local time people stop for sixty seconds, breathe, and thank GOD for the breath — each in their own words, each within themselves. In that minute we are One Breath.

WEBREATH — the Minute at 11:11, your own local time — we are One Breath