ಪ್ರಕಟಣೆ 15
ನಿಮ್ಮ ಭಾಷೆಯಲ್ಲಿ ಇನ್ನೂ ಯಾವುದೇ ಅನುವಾದವಿಲ್ಲ — ಇಂಗ್ಲಿಷ್ ತೋರಿಸಲಾಗುತ್ತಿದೆ
1ಪರಲೋಕದಲ್ಲಿ ಆಶ್ಚರ್ಯಕರವಾದ ಮತ್ತೊಂದು ಮಹಾ ಚಿಹ್ನೆಯನ್ನು ನಾನು ನೋಡಿದೆನು. ಏಳು ಮಂದಿ ದೇವದೂತರ ಕೈಯಲ್ಲಿ ಏಳು ಉಪದ್ರವಗಳಿದ್ದವು, ಇವು ಕಡೇ ಉಪದ್ರವಗಳು. ಇವುಗಳೊಂದಿಗೆ ದೇವರ ರೌದ್ರವು ಸಂಪೂರ್ಣವಾಗುವುದು.
2ನಾನು ನೋಡಲಾಗಿ ಬೆಂಕಿ ಬೆರೆತ ಗಾಜಿನ ಸಮುದ್ರವೋ ಎಂಬಂತೆ ಏನೋ ಒಂದು ನನಗೆ ಕಾಣಿಸಿತು. ಆಗ ಮೃಗಕ್ಕೆ ಮತ್ತು ಅದರ ವಿಗ್ರಹಕ್ಕೆ ಆರಾಧಿಸದೆಯೂ ಅದರ ಹೆಸರನ್ನು ಪ್ರತಿನಿಧಿಸುವ ಸಂಖ್ಯೆಯ ಮುದ್ರೆಯನ್ನು ಹಾಕಿಸಿಕೊಳ್ಳದೆ ಜಯ ಹೊಂದಿದವರು ದೇವರಿಂದ ಕೊಡಲ್ಪಟ್ಟ ವೀಣೆಗಳನ್ನು ತಮ್ಮ ಕೈಗಳಲ್ಲಿ ಹಿಡಿದುಕೊಂಡು ಗಾಜಿನ ಸಮುದ್ರದ ಬಳಿಯಲ್ಲಿ ನಿಂತಿದ್ದರು.
3ಅವರು ದೇವರ ದಾಸನಾದ ಮೋಶೆಯ ಹಾಡನ್ನೂ, ಯಜ್ಞದ ಕುರಿಮರಿಯಾದಾತನ ಹಾಡನ್ನೂ ಹಾಡುತ್ತಾ, “ಕರ್ತನಾದ ದೇವರೇ ಸರ್ವಶಕ್ತನೇ, ನಿನ್ನ ಕೃತ್ಯಗಳು ಮಹತ್ತಾದವುಗಳೂ, ಆಶ್ಚರ್ಯಕರವಾದವುಗಳೂ ಆಗಿವೆ. ಸರ್ವಜನಾಂಗಗಳ ಅರಸನೇ. ನಿನ್ನ ಮಾರ್ಗಗಳು ನ್ಯಾಯವೂ ಸತ್ಯವೂ ಆಗಿವೆ.
4ಕರ್ತನೇ, ನಿನಗೆ ಭಯಪಡದವರು ಮತ್ತು ನಿನ್ನ ನಾಮವನ್ನು ಮಹಿಮೆ ಪಡಿಸದವರು ಯಾರಾದರು ಇದ್ದಾರೆಯೇ? ನೀನೊಬ್ಬನೇ ಪರಿಶುದ್ಧನು. ನಿನ್ನ ನೀತಿಯುಳ್ಳ ನ್ಯಾಯತೀರ್ಪು ಬೆಳಕಿಗೆ ಬಂದುದರಿಂದ ಸರ್ವಜನಾಂಗಗಳು ನಿನ್ನ ಸನ್ನಿಧಾನಕ್ಕೆ ಬಂದು ನಿನ್ನನ್ನು ಆರಾಧಿಸುವರು.”
5ಇದಾದ ನಂತರ ನಾನು ನೋಡಿದಾಗ ಪರಲೋಕದಲ್ಲಿರುವ ದೇವದರ್ಶನ ಗುಡಾರದ ಪವಿತ್ರ ಸ್ಥಾನವು ತೆರೆಯಲ್ಪಟ್ಟಿತು.
6ಆ ಆಲಯದೊಳಗಿಂದ ಏಳು ಉಪದ್ರವಗಳನ್ನು ಕೈಯಲ್ಲಿ ಹಿಡಿದಿರುವ ಆ ಏಳು ಮಂದಿ ದೇವದೂತರು ಬಂದರು. ಅವರು ಶುಭ್ರವೂ, ಪ್ರಕಾಶವೂ ಆದ ನಾರುಮಡಿಯನ್ನು ಧರಿಸಿಕೊಂಡಿದ್ದರು. ಮತ್ತು ತಮ್ಮ ಎದೆಗಳ ಮೇಲೆ ಚಿನ್ನದ ಪಟ್ಟಿಯನ್ನು ಕಟ್ಟಿಕೊಂಡಿದ್ದರು.
7ನಾಲ್ಕು ಜೀವಿಗಳಲ್ಲಿ ಒಂದು ಆ ಏಳು ಮಂದಿ ದೇವದೂತರಿಗೆ ಯುಗಯುಗಾಂತರಗಳಲ್ಲಿಯೂ ಜೀವಿಸುವಾತನಾದ ದೇವರ ರೌದ್ರದಿಂದ ತುಂಬಿದ್ದ ಏಳು ಚಿನ್ನದ ಬಟ್ಟಲುಗಳನ್ನು ಕೊಟ್ಟಿತು.
8ದೇವರ ಮಹಿಮೆಯಿಂದಲೂ, ಆತನ ಶಕ್ತಿಯಿಂದಲೂ ಉಂಟಾದ ಹೊಗೆಯಿಂದ ಆ ಆಲಯ ತುಂಬಿತ್ತು. ಆ ಏಳು ಮಂದಿ ದೇವದೂತರ ಕೈಯಲ್ಲಿದ್ದ ಏಳು ಉಪದ್ರವಗಳು ತೀರುವ ತನಕ ಆ ಆಲಯವನ್ನು ಪ್ರವೇಶಿಸುವುದಕ್ಕೆ ಯಾರಿಂದಲೂ ಸಾಧ್ಯವಾಗಲಿಲ್ಲ.
WEBREATH · 11:11
«He himself gives everyone life and breath and everything else» — Acts 17:25
Breath is one for all: everyone lives by it, whoever they are and whatever they believe. Every day at 11:11 local time people stop for sixty seconds, breathe, and thank GOD for the breath — each in their own words, each within themselves. In that minute we are One Breath.
WEBREATH — the Minute at 11:11, your own local time — we are One Breath