ಕ್ರಿಶ್ಚಿಯನ್ ಧರ್ಮ
ಹಿಂದೆ

ಪ್ರಕಟಣೆ 20

ನಿಮ್ಮ ಭಾಷೆಯಲ್ಲಿ ಇನ್ನೂ ಯಾವುದೇ ಅನುವಾದವಿಲ್ಲ — ಇಂಗ್ಲಿಷ್ ತೋರಿಸಲಾಗುತ್ತಿದೆ

1ಆಗ ಒಬ್ಬ ದೇವದೂತನು ಅಧೋಲೋಕದ ಬೀಗದ ಕೈಯನ್ನೂ ಮತ್ತು ದೊಡ್ಡ ಸರಪಣಿಯನ್ನೂ ಕೈಯಲ್ಲಿ ಹಿಡಿದುಕೊಂಡು ಪರಲೋಕದಿಂದ ಇಳಿದು ಬರುವುದನ್ನು ಕಂಡೆನು.

2ಅವನು ಪಿಶಾಚಿಯೂ ಸೈತಾನನೂ ಆಗಿರುವ ಪುರಾತನ ಸರ್ಪವೆಂಬ ಘಟಸರ್ಪವನ್ನು ಹಿಡಿದು ಸಾವಿರ ವರ್ಷ ಬಂಧನದಲ್ಲಿಟ್ಟನು.

3ಆ ಸಾವಿರ ವರ್ಷ ಮುಗಿಯುವ ತನಕ ಸೈತಾನನು ಇನ್ನೂ ಜನಾಂಗಗಳನ್ನು ಮೋಸಗೊಳಿಸದಂತೆ ದೇವದೂತನು ಅವನನ್ನು ಅಧೋಲೋಕಕ್ಕೆ ತಳ್ಳಿ ಬಾಗಿಲು ಮುಚ್ಚಿ ಅದಕ್ಕೆ ಮುದ್ರೆಹಾಕಿದನು. ಆ ಸಾವಿರ ವರ್ಷಗಳಾದ ಮೇಲೆ ಅವನಿಗೆ ಸ್ವಲ್ಪಕಾಲ ಬಿಡುಗಡೆ ಆಗುವುದು.

4ತರುವಾಯ ಸಿಂಹಾಸನಗಳನ್ನು ಕಂಡೆನು. ಅವುಗಳ ಮೇಲೆ ಕುಳಿತಿದ್ದವರಿಗೆ ನ್ಯಾಯ ತೀರಿಸುವ ಅಧಿಕಾರವು ಕೊಡಲ್ಪಟ್ಟಿತು. ಇದಲ್ಲದೆ ಯೇಸುವಿನ ಸಾಕ್ಷಿಯ ನಿಮಿತ್ತವಾಗಿಯೂ, ದೇವರ ವಾಕ್ಯದ ನಿಮಿತ್ತವಾಗಿಯೂ ಶಿರಚ್ಛೇದನಗೊಂಡವರ ಆತ್ಮಗಳನ್ನೂ ಮೃಗಕ್ಕೂ ಅದರ ವಿಗ್ರಹಕ್ಕೂ ಆರಾಧನೆ ಮಾಡದೇ ತಮ್ಮ ಹಣೆಯ ಮೇಲೆ ಮತ್ತು ಕೈಗಳ ಮೇಲೆ ಅದರ ಗುರುತು ಹಾಕಿಸಿಕೊಳ್ಳದವರನ್ನೂ ಕಂಡೆನು. ಅವರು ಪುನಃ ಜೀವಿತರಾಗಿ ಎದ್ದು ಸಾವಿರ ವರ್ಷ ಕ್ರಿಸ್ತನೊಂದಿಗೆ ಆಳಿದರು.

5ಸತ್ತವರಲ್ಲಿ ಉಳಿದವರು ಆ ಸಾವಿರ ವರ್ಷಗಳ ಮುಗಿಯುವವರೆಗೂ ಜೀವಿತರಾಗಿ ಏಳಲಿಲ್ಲ. ಇದೇ ಮೊದಲನೇಯ ಪುನರುತ್ಥಾನವು.

6ಮೊದಲನೇಯ ಪುನರುತ್ಥಾನದಲ್ಲಿ ಸೇರಿದವರು ಧನ್ಯರೂ ಮತ್ತು ಪರಿಶುದ್ಧರೂ ಆಗಿದ್ದಾರೆ. ಇಂಥವರ ಮೇಲೆ ಎರಡನೆಯ ಮರಣಕ್ಕೆ ಅಧಿಕಾರವಿಲ್ಲ. ಆದರೆ ಅವರು ದೇವರಿಗೂ ಕ್ರಿಸ್ತನಿಗೂ ಯಾಜಕರಾಗಿ ಕ್ರಿಸ್ತನೊಂದಿಗೆ ಆ ಸಾವಿರ ವರ್ಷ ಆಳುವರು.

7ಆ ಸಾವಿರ ವರ್ಷಗಳು ಮುಗಿದ ಮೇಲೆ ಸೈತಾನನಿಗೆ ಸೆರೆಯಿಂದ ಬಿಡುಗಡೆಯಾಗುವುದು.

8ಅವನು ಹೊರಗೆ ಬಂದು ಭೂಮಿಯ ನಾಲ್ಕು ದಿಕ್ಕುಗಳಲ್ಲಿರುವ ದೇಶಗಳನ್ನು ಮೋಸಗೊಳಿಸಿ, ಗೋಗ್ ಮತ್ತು ಮಾಗೋಗ್ ಎಂಬ ಜನಾಂಗಗಳನ್ನು ಮರುಳುಗೊಳಿಸಿ ಯುದ್ಧಕ್ಕೆ ಸೇರಿಸುವನು. ಅವರ ಸಂಖ್ಯೆಯು ಸಮುದ್ರದ ಮರಳಿನಷ್ಟಿರುವುದು.

9ಅವರು ಭೂಮಿಯಲ್ಲೆಲ್ಲಾ ಹರಡಿಕೊಂಡು ದೇವಜನರ ಪಾಳೆಯಕ್ಕೂ ಆ ಪ್ರಿಯ ಪಟ್ಟಣಕ್ಕೂ ಮುತ್ತಿಗೆ ಹಾಕುವರು. ಆದರೆ ಪರಲೋಕದಿಂದ ಬೆಂಕಿ ಇಳಿದು ಬಂದು ಅವರನ್ನು ದಹಿಸಿಬಿಡುವುದು.

10ಇದಲ್ಲದೆ ಅವರನ್ನು ಮೋಸಗೊಳಿಸಿದ ಪಿಶಾಚನು ಬೆಂಕಿ ಗಂಧಕಗಳು ಉರಿಯುವ ಕೆರೆಯಲ್ಲಿ ದೊಬ್ಬಲ್ಪಟ್ಟನು. ಅಲ್ಲಿ ಮೃಗವೂ, ಸುಳ್ಳುಪ್ರವಾದಿಯೂ ಸಹ ಇದ್ದಾರೆ. ಅವರು ಹಗಲಿರುಳು ಯುಗಯುಗಾಂತರಗಳಲ್ಲಿಯೂ ಯಾತನೆ ಪಡುತ್ತಿರುವರು.

11ಆ ಮೇಲೆ ಬೆಳ್ಳಗಿರುವ ಮಹಾ ಸಿಂಹಾಸನವನ್ನೂ ಅದರ ಮೇಲೆ ಕುಳಿತಿದ್ದಾತನನ್ನೂ ಕಂಡೆನು. ಆತನೆದುರಿನಿಂದ ಭೂಮ್ಯಾಕಾಶಗಳು ಓಡಿಹೋದವು, ಆದರೆ ಹೋಗುವುದಕ್ಕೆ ಅವುಗಳಿಗೆ ಸ್ಥಳವಿರಲಿಲ್ಲ.

12ಇದಲ್ಲದೆ ಸತ್ತವರಾದ, ಶ್ರೇಷ್ಠರು ಮತ್ತು ಕನಿಷ್ಠರೆಲ್ಲರು ಸಿಂಹಾಸನದ ಮುಂದೆ ನಿಂತಿರುವುದನ್ನು ಕಂಡೆನು. ಆಗ ಪುಸ್ತಕಗಳು ತೆರೆಯಲ್ಪಟ್ಟವು. ಜೀವಬಾಧ್ಯರ ಪಟ್ಟಿ ಎಂಬ ಇನ್ನೊಂದು ಪುಸ್ತಕವು ತೆರೆಯಲ್ಪಟ್ಟಿತು. ಆ ಪುಸ್ತಕಗಳಲ್ಲಿ ಬರೆದಿರುವ ಪ್ರಕಾರ, ಅವರವರ ಕೃತ್ಯಗಳಿಗೆ ತಕ್ಕಂತೆ ಸತ್ತವರಿಗೆ ನ್ಯಾಯತೀರ್ಪಾಯಿತು.

13ಸಮುದ್ರವು ತನ್ನೊಳಗಿದ್ದ ಸತ್ತವರನ್ನು ಒಪ್ಪಿಸಿತು. ಮೃತ್ಯುವೂ ಪಾತಾಳವೂ ತಮ್ಮ ವಶದಲ್ಲಿದ್ದ ಸತ್ತವರನ್ನು ಒಪ್ಪಿಸಿದವು. ಅವರಲ್ಲಿ ಪ್ರತಿಯೊಬ್ಬನಿಗೆ ಅವನವನ ಕೃತ್ಯಗಳ ಪ್ರಕಾರ ನ್ಯಾಯತೀರ್ಪಾಯಿತು.

14ಆ ಮೇಲೆ ಮೃತ್ಯುವೂ ಪಾತಾಳವೂ ಬೆಂಕಿಯ ಕೆರೆಗೆ ದೊಬ್ಬಲ್ಪಟ್ಟವು. ಆ ಬೆಂಕಿಯ ಕೆರೆಯೇ ಎರಡನೆಯ ಮರಣವು.

15ಯಾರ ಹೆಸರು ಜೀವಬಾಧ್ಯರ ಪುಸ್ತಕದಲ್ಲಿ ಬರೆದದ್ದಾಗಿ ಕಾಣಲಿಲ್ಲವೋ ಅವನು ಬೆಂಕಿಯ ಕೆರೆಗೆ ದೊಬ್ಬಲ್ಪಟ್ಟನು.

ಮೂಲ: ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

WEBREATH · 11:11

«He himself gives everyone life and breath and everything else» — Acts 17:25

Breath is one for all: everyone lives by it, whoever they are and whatever they believe. Every day at 11:11 local time people stop for sixty seconds, breathe, and thank GOD for the breath — each in their own words, each within themselves. In that minute we are One Breath.

WEBREATH — the Minute at 11:11, your own local time — we are One Breath