ಕ್ರಿಶ್ಚಿಯನ್ ಧರ್ಮ
ಹಿಂದೆ

ಪ್ರಕಟಣೆ 22

ನಿಮ್ಮ ಭಾಷೆಯಲ್ಲಿ ಇನ್ನೂ ಯಾವುದೇ ಅನುವಾದವಿಲ್ಲ — ಇಂಗ್ಲಿಷ್ ತೋರಿಸಲಾಗುತ್ತಿದೆ

1ಆ ಮೇಲೆ ಅವನು ಸ್ಫಟಿಕದಂತೆ ಅತಿಶುದ್ಧವಾಗಿದ್ದ ಜೀವಜಲದ ನದಿಯನ್ನು ನನಗೆ ತೋರಿಸಿದನು. ಅದು ದೇವರ ಮತ್ತು ಯಜ್ಞದ ಕುರಿಮರಿಯಾದಾತನ ಸಿಂಹಾಸನದಿಂದ ಹೊರಟು,

2ಪಟ್ಟಣದ ಬೀದಿಯ ಮಧ್ಯದಲ್ಲಿ ಹರಿಯುತ್ತಿತ್ತು. ಆ ನದಿಯ ಎರಡು ದಡಗಳಲ್ಲಿ ಜೀವವೃಕ್ಷವಿತ್ತು. ಅದು ಪ್ರತಿ ತಿಂಗಳು ಒಂದೊಂದ್ದು ತರಹದ ಫಲವನ್ನು ಬಿಡುತ್ತಾ ಹನ್ನೆರಡು ತರಹದ ಫಲಗಳನ್ನು ಕೊಡುತ್ತದೆ. ಆ ಮರದ ಎಲೆಗಳು ಜನಾಂಗಗಳವರನ್ನು ವಾಸಿಮಾಡುವಂಥದಾಗಿದ್ದವು.

3ಇನ್ನೂ ಯಾವ ಶಾಪವು ಇರುವುದಿಲ್ಲ. ಆ ಪಟ್ಟಣದಲ್ಲಿ ದೇವರ ಮತ್ತು ಯಜ್ಞದ ಕುರಿಮರಿಯಾದಾತನ ಸಿಂಹಾಸನವಿರುವುದು. ಆತನ ಸೇವಕರು ಆತನಿಗೆ ಸೇವೆ ಮಾಡುವರು.

4ಅವರು ಆತನ ಮುಖವನ್ನು ನೋಡುವರು. ಅವರ ಹಣೆಯ ಮೇಲೆ ಆತನ ಹೆಸರು ಇರುವುದು.

5ಇನ್ನು ರಾತ್ರಿಯೇ ಇರುವುದಿಲ್ಲ. ಅವರಿಗೆ ದೀಪದ ಬೆಳಕೂ ಸೂರ್ಯನ ಬೆಳಕೂ ಬೇಕಾಗಿರುವುದಿಲ್ಲ. ದೇವರಾದ ಕರ್ತನೇ ಅವರಿಗೆ ಬೆಳಕಾಗಿರುವನು. ಅವರು ಯುಗಯುಗಾಂತರಗಳಲ್ಲಿಯೂ ಆಳುವರು.

6ಆ ಮೇಲೆ ದೇವದೂತನು ನನಗೆ, “ಈ ಮಾತುಗಳು ನಂಬತಕ್ಕವುಗಳೂ ಸತ್ಯವಾದವುಗಳೂ ಆಗಿವೆ. ಪ್ರವಾದಿಗಳ ಆತ್ಮಗಳನ್ನು ಪ್ರೇರೇಪಿಸುವ ದೇವರಾದ ಕರ್ತನು ಅತಿಶೀಘ್ರದಲ್ಲಿ ಸಂಭವಿಸತಕ್ಕ ಸಂಗತಿಗಳನ್ನು ತನ್ನ ದಾಸರಿಗೆ ತೋರಿಸುವುದಕ್ಕಾಗಿ ತನ್ನ ದೇವದೂತನನ್ನು ಕಳುಹಿಸಿಕೊಟ್ಟನು.

7“ಇಗೋ ನೋಡು! ನಾನು ಅತಿಬೇಗನೆ ಬರುತ್ತೇನೆ! ಈ ಪುಸ್ತಕದಲ್ಲಿ ಬರೆದಿರುವ ಪ್ರವಾದನಾ ವಾಕ್ಯಗಳನ್ನು ಕೈಕೊಂಡು ನಡೆಯುವವನು ಧನ್ಯನು” ಎಂದು ಹೇಳಿದನು.

8ಯೋಹಾನನೆಂಬ ನಾನೇ, ಈ ಸಂಗತಿಗಳನ್ನು ಕೇಳಿದವನೂ ನೋಡಿದವನೂ ಆಗಿದ್ದೇನೆ. ನಾನು ಈ ಸಂಗತಿಗಳನ್ನು ಕೇಳಿ ಕಂಡಾಗ, ಈ ಸಂಗತಿಗಳನ್ನು ನನಗೆ ತೋರಿಸಿದ ದೇವದೂತನನ್ನು ಆರಾಧಿಸಬೇಕೆಂದು ಅವನ ಪಾದಕ್ಕೆ ಬಿದ್ದೆನು.

9ಆದರೆ ಅವನು ನನಗೆ, “ನೀನು ಹಾಗೆ ಮಾಡಬೇಡ! ನೋಡು. ನಾನು ನಿನಗೂ ಪ್ರವಾದಿಗಳಾಗಿರುವ ನಿನ್ನ ಸಹೋದರರಿಗೂ, ಈ ಪುಸ್ತಕದಲ್ಲಿ ಬರೆದಿರುವ ವಾಕ್ಯಗಳನ್ನು ಕೈಕೊಂಡು ನಡೆಯುವವರಿಗೂ ಸೇವೆಯನ್ನು ಮಾಡುವ ಸೇವಕನಾಗಿದ್ದೇನೆ. ದೇವರನ್ನೇ ಆರಾಧಿಸು” ಎಂದು ಹೇಳಿದನು.

10ಇದಲ್ಲದೆ ಅವನು ನನಗೆ ಈ ಪುಸ್ತಕದಲ್ಲಿರುವ “ಪ್ರವಾದನಾ ವಾಕ್ಯಗಳಿಗೆ ಮುದ್ರೆಹಾಕಬೇಡ. ಏಕೆಂದರೆ ಇವು ನೆರವೇರುವ ಕಾಲವು ಸಮೀಪವಾಗಿದೆ.

11ಅನ್ಯಾಯ ಮಾಡುವವನು ಇನ್ನೂ ಅನ್ಯಾಯ ಮಾಡಲಿ. ಮೈಲಿಗೆಯಾಗಿರುವವನು ತನ್ನನ್ನು ಇನ್ನು ಮೈಲಿಗೆಯ ಮಾಡಿಕೊಳ್ಳಲಿ, ನೀತಿವಂತನು ಇನ್ನೂ ನೀತಿವಂತನಾಗಲಿ ಮತ್ತು ಪವಿತ್ರನು ತನ್ನನ್ನು ಇನ್ನೂ ಪವಿತ್ರ ಮಾಡಿಕೊಳ್ಳಲಿ.”

12“ನೋಡು! ನಾನು ಬೇಗನೇ ಬರುತ್ತೇನೆ. ನಾನು ಪ್ರತಿಯೊಬ್ಬನಿಗೂ ಅವನವನ ನಡತೆಗೆ ತಕ್ಕಂತೆ ಕೊಡತಕ್ಕ ಪ್ರತಿಫಲವು ನನ್ನಲ್ಲಿದೆ.

13ನಾನೇ ಆದಿಯೂ, ಅಂತ್ಯವೂ, ಮೊದಲನೆಯವನೂ, ಕಡೆಯವನೂ, ಪ್ರಾರಂಭವೂ, ಸಮಾಪ್ತಿಯೂ ಆಗಿದ್ದೇನೆ.

14“ತಮ್ಮ ನಿಲುವಂಗಿಗಳನ್ನು ತೊಳೆದುಕೊಂಡು ಶುದ್ಧರಾಗಿರುವವರು ಧನ್ಯರು. ಅವರಿಗೆ ಜೀವವೃಕ್ಷದ ಹಕ್ಕು ಇರುವುದು. ಅವರು ಬಾಗಿಲುಗಳ ಮೂಲಕ ಆ ಪಟ್ಟಣದೊಳಗೆ ಬಂದು ಸೇರುವರು.

15ಆದರೆ ನಾಯಿಗಳಂತಿರುವವರೂ, ಮಾಟಗಾರರೂ, ಜಾರರೂ, ಕೊಲೆಗಾರರೂ, ವಿಗ್ರಹಾರಾಧಕರೂ, ಸುಳ್ಳನ್ನು ಪ್ರೀತಿಸಿ ಅದನ್ನು ಅಭ್ಯಾಸಮಾಡುವವರೆಲ್ಲರೂ ಹೊರಗಿರುವರು” ಎಂದು ಹೇಳಿದನು.

16“ಯೇಸುವೆಂಬ ನಾನು ನನ್ನ ಸಭೆಗಳ ವಿಷಯವಾಗಿ ನಿಮಗೆ ಸಾಕ್ಷಿ ಹೇಳುವುದಕ್ಕೆ ನನ್ನ ದೂತನನ್ನು ಕಳುಹಿಸಿಕೊಟ್ಟೆನು. ನಾನು ದಾವೀದನ ವಂಶವೆಂಬ ಬುಡದಿಂದ ಹುಟ್ಟಿದ ಬೇರೂ ಅವನ ಸಂತತಿಯೂ ಪ್ರಕಾಶಮಾನವಾದ ಉದಯ ನಕ್ಷತ್ರವೂ ಆಗಿದ್ದೇನೆ.”

17ಆತ್ಮನು ಮತ್ತು ಮದಲಗಿತ್ತಿಯು, “ಬಾ” ಎನ್ನುತ್ತಾರೆ. ಕೇಳುವವನು, “ಬಾ” ಎನ್ನಲಿ. ಬಾಯಾರಿದವನು ಬರಲಿ, ಇಷ್ಟವುಳ್ಳವನು ಜೀವಜಲವನ್ನು ಕ್ರಯವಿಲ್ಲದೆ ಉಚಿತವಾಗಿ ತೆಗೆದುಕೊಳ್ಳಲಿ.

18ಈ ಪುಸ್ತಕದ ಪ್ರವಾದನಾ ವಾಕ್ಯಗಳನ್ನು ಕೇಳುವ ಪ್ರತಿಯೊಬ್ಬನಿಗೆ ನಾನು ಹೇಳುವ ಸಾಕ್ಷಿ ಏನೆಂದರೆ, ಇವುಗಳಿಗೆ ಯಾವನಾದರೂ ಹೆಚ್ಚು ಮಾತುಗಳನ್ನು ಕೂಡಿಸಿದರೆ, ದೇವರು ಅವನ ಮೇಲೆ ಈ ಪುಸ್ತಕದಲ್ಲಿ ಬರೆದಿರುವ ಉಪದ್ರವಗಳನ್ನು ಕೊಡುವನು.

19ಯಾವನಾದರೂ ಈ ಪ್ರವಾದನಾ ಪುಸ್ತಕದಲ್ಲಿರುವ ಮಾತುಗಳಲ್ಲಿ ಒಂದನ್ನಾದರೂ ತೆಗೆದುಬಿಟ್ಟರೆ ಈ ಪುಸ್ತಕದಲ್ಲಿ ಬರೆದಿರುವ ಪರಿಶುದ್ಧ ಪಟ್ಟಣದಲ್ಲಿಯೂ ಜೀವವೃಕ್ಷದಲ್ಲಿಯೂ ಅವನಿಗಿರುವ ಪಾಲನ್ನು ದೇವರು ತೆಗೆದುಬಿಡುವನು.

20ಈ ವಿಷಯಗಳಲ್ಲಿ ಸಾಕ್ಷಿ ಹೇಳುವವನು, “ಹೌದು ನಾನು ನಿಜವಾಗಿ ಬೇಗನೇ ಬರುತ್ತೇನೆ!” ಎಂದು ಹೇಳುತ್ತಾನೆ. ಆಮೆನ್. ಕರ್ತನಾದ ಯೇಸುವೇ ಬಾ.

21ಕರ್ತನಾದ ಯೇಸುವಿನ ಕೃಪೆಯು ಎಲ್ಲರೊಂದಿಗೆ ಇರಲಿ. ಆಮೆನ್!

ಮೂಲ: ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

WEBREATH · 11:11

«He himself gives everyone life and breath and everything else» — Acts 17:25

Breath is one for all: everyone lives by it, whoever they are and whatever they believe. Every day at 11:11 local time people stop for sixty seconds, breathe, and thank GOD for the breath — each in their own words, each within themselves. In that minute we are One Breath.

WEBREATH — the Minute at 11:11, your own local time — we are One Breath