ಕ್ರಿಶ್ಚಿಯನ್ ಧರ್ಮ
ಹಿಂದೆ

ರೋಮಾಪುರದವರಿಗೆ 11

ನಿಮ್ಮ ಭಾಷೆಯಲ್ಲಿ ಇನ್ನೂ ಯಾವುದೇ ಅನುವಾದವಿಲ್ಲ — ಇಂಗ್ಲಿಷ್ ತೋರಿಸಲಾಗುತ್ತಿದೆ

1ಹಾಗಾದರೆ ದೇವರು ತನ್ನ ಸ್ವಂತ ಜನರನ್ನು ಬೇಡವೆಂದು ತಿರಸ್ಕರಿಸಿದನೋ ಎಂದು ಕೇಳುತ್ತೇನೆ ಎಂದಿಗೂ ಇಲ್ಲ. ನಾನು ಸಹ ಇಸ್ರಾಯೇಲ್ಯನು, ಅಬ್ರಹಾಮನ ಸಂತತಿಯವನು, ಬೆನ್ಯಾಮೀನನ ಕುಲದವನು ಆಗಿದ್ದೇನಲ್ಲಾ.

2ದೇವರು ತಾನು ಮುಂದಾಗಿ ತನ್ನ ಜನರಾಗುವುದಕ್ಕೆ ಗೊತ್ತುಮಾಡಿಕೊಂಡಿದ್ದ ಪ್ರಜೆಗಳನ್ನು ತಳ್ಳಿಬಿಡಲಿಲ್ಲ. ಎಲೀಯನ ಬಗ್ಗೆ ಧರ್ಮಶಾಸ್ತ್ರವು ಹೇಳುವ ಮಾತು ನಿಮಗೆ ತಿಳಿಯದೋ?

3ಅವನು ದೇವರ ಮುಂದೆ, “ಕರ್ತನೇ ಅವರು ನಿನ್ನ ಪ್ರವಾದಿಗಳನ್ನು ಸಂಹರಿಸಿದ್ದಾರೆ, ನಿನ್ನ ಯಜ್ಞವೇದಿಗಳನ್ನು ಒಡೆದು ಹಾಕಿದ್ದಾರೆ. ನಾನೊಬ್ಬನೇ ಉಳಿದಿದ್ದೇನೆ. ಅವರು ನನ್ನ ಪ್ರಾಣವನ್ನು ತೆಗೆಯಬೇಕೆಂದಿದ್ದಾರೆ” ಎಂದು ಇಸ್ರಾಯೇಲ್ಯರ ಮೇಲೆ ದೂರು ಹೇಳಿದ್ದಕ್ಕೆ.

4ದೇವರ ಉತ್ತರವೇನೆಂದರೆ, “ಬಾಳನ ವಿಗ್ರಹಕ್ಕೆ ಅಡ್ಡಬೀಳದೆ ಇರುವ ಏಳುಸಾವಿರ ಪುರುಷರನ್ನು ನನಗಾಗಿ ಉಳಿಸಿಕೊಂಡಿದ್ದೇನೆ” ಎಂಬುದೇ.

5ಅದರಂತೆ ಈಗಿನ ಕಾಲದಲ್ಲಿಯೂ ದೇವರ ಕೃಪೆಯಿಂದ ಆರಿಸಿಕೊಂಡವರಾದ ಒಂದು ಭಾಗವು ಉಳಿದಿದ್ದಾರೆ.

6ಕೃಪೆಯಿಂದ ಆರಿಸಿಕೊಂಡನು ಅಂದ ಮೇಲೆ ಒಳ್ಳೆಯ ಕಾರ್ಯದಿಂದಲ್ಲ. ಹಾಗಲ್ಲದ ಪಕ್ಷಕ್ಕೆ ಕೃಪೆಯನ್ನು ಇನ್ನು ಕೃಪೆಯನ್ನುವುದಕ್ಕಾಗುವುದಿಲ್ಲ.

7ಇದರಿಂದ ತಿಳಿಯತಕ್ಕದ್ದೇನು? ಇಸ್ರಾಯೇಲ್ಯರು ಹುಡುಕಿದ್ದನ್ನು ಅವರು ಹೊಂದಲಿಲ್ಲ. ಅವರೊಳಗೆ ಆರಿಸಲ್ಪಟ್ಟವರಿಗೆ ಅದು ದೊರೆಯಿತು. ಉಳಿದವರು ಮೊಂಡರಾದರು.

8“ದೇವರು ಅವರಿಗೆ ಮಂದಬುದ್ಧಿಯ ಆತ್ಮನನ್ನು, ಅಂದರೆ ಕಾಣದ ಕಣ್ಣುಗಳನ್ನೂ, ಕೇಳದ ಕಿವಿಗಳನ್ನೂ ಕೊಟ್ಟನು. ಈ ಭಾವವು ಈ ಹೊತ್ತಿನವರೆಗೂ ಹಾಗೆಯೇ ಇದೆ” ಎಂದು ಬರೆದ ಪ್ರಕಾರ ಅವರಿಗೆ ಆಯಿತು.

9ಇದಲ್ಲದೆ “ಅವರ ಭೋಜನವೇ ಅವರಿಗೆ ಬಲೆಯೂ, ಜಾಲವೂ, ಅಡೆತಡೆಯೂ, ಪ್ರತಿಕಾರವೂ ಆಗಲಿ;

10ಅವರ ಕಣ್ಣು ಮೊಬ್ಬಾಗಿ ಕಾಣದೆಹೋಗಲಿ ಅವರ ಬೆನ್ನು ಯಾವಾಗಲೂ ಬೊಗ್ಗಿಕೊಂಡಿರುವಂತೆ ಮಾಡು” ಎಂದು ದಾವೀದನು ಹೇಳುತ್ತಾನೆ.

11ಹಾಗಾದರೆ “ಅವರು ಬಿದ್ದೇಹೋಗುವಂತೆ ಎಡವಿದರೇನು” ಎಂದು ಕೇಳುತ್ತೇನೆ. ಹಾಗೆ ಎಂದಿಗೂ ಆಗಬಾರದು ಅವರು ಬಿದ್ದುಹೋದದ್ದರಿಂದ ಕ್ರಿಸ್ತನಿಂದ ಉಂಟಾಗುವ ರಕ್ಷಣೆಯು ಅನ್ಯಜನರಿಗೆ ಉಂಟಾಯಿತು. ಇದರಿಂದ ದೇವರು ಅವರಲ್ಲಿ ಅಸೂಯೆ ಹುಟ್ಟಿಸುತ್ತಾನೆ.

12ಅವರು ಬಿದ್ದುಹೋದದ್ದು ಸರ್ವಲೋಕದ ಸೌಭಾಗ್ಯಕ್ಕೂ, ಅವರು ಸೋತುಹೋದದ್ದು ಅನ್ಯಜನಗಳ ಸಂಪತ್ತಿಗೂ ಮಾರ್ಗವಾಗಿರಲಾಗಿ ಅವರ ಪೂರ್ಣ ಪುನಃಸ್ಥಾಪನೆಯು ಪ್ರಪಂಚಕ್ಕೆ ಎಷ್ಟೋ ಹೆಚ್ಚಾದ ಭಾಗ್ಯಕ್ಕೆ ಕಾರಣವಾಗುವುದು.

13ಅನ್ಯಜನರಾಗಿರುವ ನಿಮಗೆ ನಾನು ಹೇಳುವುದೇನಂದರೆ, ನಾನು ಅನ್ಯಜನರಿಗೆ ಅಪೊಸ್ತಲನಾಗಿರಲಾಗಿ ನನ್ನ ಸೇವೆಯ ಬಗ್ಗೆ ಹೊಗಳಿಕೊಳ್ಳುತ್ತಿದ್ದೇನೆ.

14ಇದರಿಂದಾಗಿ ಸ್ವಜನರಲ್ಲಿ ಅಸೂಯೆಯನ್ನು ಕೆರಳಿಸಿ ಅವರಲ್ಲಿ ಕೆಲವರನ್ನು ರಕ್ಷಣೆಯ ಮಾರ್ಗಕ್ಕೆ ತಂದೇನು.

15ಯಾಕೆಂದರೆ ಇಸ್ರಾಯೇಲ್ಯರನ್ನು ನಿರಾಕರಿಸುವುದರಿಂದ ಲೋಕವು ದೇವರ ಸಂಗಡ ಸಂಧಾನವಾಗುವುದಕ್ಕೆ ಮಾರ್ಗವಾದ ಮೇಲೆ ಅವರನ್ನು ಸೇರಿಸಿಕೊಳ್ಳುವುದರಿಂದ ಏನಾಗುವುದು? ಸತ್ತವರು ಜೀವಿತರಾಗಿ ಎದ್ದುಬಂದತಾಗುವುದಿಲ್ಲವೇ.

16ಕಣಕದಲ್ಲಿ ಪ್ರಥಮಫಲವನ್ನು ದೇವರಿಗರ್ಪಿಸಿದ ಮೇಲೆ ಕಣಕವೆಲ್ಲಾ ಪವಿತ್ರವಾಯಿತು. ಬೇರು ಶುದ್ಧವಾಗಿದ್ದ ಮೇಲೆ ಕೊಂಬೆಗಳೂ ಹಾಗೆಯೇ.

17ಆದರೆ ಕೆಲವು ಕೊಂಬೆಗಳನ್ನು ಮುರಿದುಹಾಕಿ ಕಾಡೆಣ್ಣೆ ಮರದಂತಿರುವ ನಿನ್ನನ್ನು ಅವುಗಳ ಜಾಗದಲ್ಲಿ ಕಸಿಮಾಡಿರಲಾಗಿ ಊರೆಣ್ಣೇಮರದ ರಸವತ್ತಾದ ಬೇರಿನಲ್ಲಿ ಅದು ಪಾಲುಹೊಂದಿದ್ದರೂ ಆ ಕೊಂಬೆಗಳನ್ನು ಕಡೆಗಣಿಸಿ ನಿನ್ನನ್ನು ಅಂಟಿಸಿದ ಮೇಲೆ ನೀನು ಕೊಂಬೆಯ ಕುರಿತು ಹೆಚ್ಚಿಸಿಕೊಳ್ಳಬೇಡ.

18ಹೆಚ್ಚಿಸಿಕೊಂಡರೂ ಆ ಬೇರಿಗೆ ನೀನು ಆಧಾರವಲ್ಲ. ಅದು ನಿನಗೆ ಆಧಾರವಾಗಿದೆ.

19ಈ ಮಾತಿಗೆ, “ನನ್ನನ್ನು ಕಸಿಮಾಡುವುದಕ್ಕಾಗಿ ಕೊಂಬೆಗಳು ಮುರಿದುಹಾಕಲ್ಪಟ್ಟವಲ್ಲಾ” ಎಂದು ನೀನು ಒಂದು ವೇಳೆ ಹೇಳಬಹುದು.

20ನೀನು ಹೇಳುವುದು ನಿಜ. ಅವರು ನಂಬದೇ ಹೋದ್ದದರಿಂದ ಮುರಿದುಹಾಕಲ್ಪಟ್ಟರು. ನೀನು ನಿಂತಿರುವುದು ನಂಬಿಕೆಯಿಂದಲೇ.

21ಗರ್ವಪಡಬೇಡ, ಭಯದಿಂದಿರು. ದೇವರು ಹುಟ್ಟುಕೊಂಬೆಗಳನ್ನು ಉಳಿಸದೆ ಇದ್ದ ಮೇಲೆ ನಿನ್ನನ್ನೂ ಉಳಿಸುವುದಿಲ್ಲ.

22ಆದ್ದರಿಂದ ದೇವರ ದಯೆಯನ್ನೂ, ದಂಡನೆಯನ್ನು ನೋಡು; ಬಿದ್ದವರಿಗೆ ದಂಡನೆಯನ್ನೂ, ನೀನು ದೇವರ ದಯೆಯನ್ನು ಆಶ್ರಯಿಸಿಕೊಂಡೇ ಇದ್ದರೆ ಆತನ ದಯೆಯನ್ನು ಹೊಂದುವಿ. ಇಲ್ಲವಾದರೆ ನಿನ್ನನ್ನೂ ಕಡಿದುಹಾಕುವನು.

23ಇಸ್ರಾಯೇಲ್ಯರ ಕೂಡ ಇನ್ನು ಅಪನಂಬಿಕೆಯಲ್ಲಿ ನಿಲ್ಲದ ಪಕ್ಷಕ್ಕೆ ಅವರನ್ನೂ ಕಸಿಮಾಡುವನು. ದೇವರು ಅವರನ್ನು ತಿರುಗಿ ಕಸಿಕಟ್ಟುವುದಕ್ಕೆ ಸಮರ್ಥನಾಗಿದ್ದಾನೆ.

24ನೀನು ಹುಟ್ಟು ಕಾಡುಮರದಿಂದ ಕಡಿದು ತೆಗೆಯಲ್ಪಟ್ಟು ನಿನಗೆ ಸಂಬಂಧಪಡದ ಊರು ಮರದಲ್ಲಿ ಕಸಿಕಟ್ಟಿಸಿಕೊಂಡವನಾದ ಮೇಲೆ ಅದರಲ್ಲಿ ಹುಟ್ಟಿದ ಕೊಂಬೆಗಳಾಗಿರುವ ಅವರು ಸ್ವಂತ ಮರದಲ್ಲಿ ಕಸಿಕಟ್ಟಲ್ಪಡುವುದು ಎಷ್ಟೋ ಯುಕ್ತವಾಗಿದೆಯಲ್ಲವೇ.

25ಸಹೋದರರೇ, ನಿಮ್ಮನ್ನು ನೀವೇ ಬುದ್ಧಿವಂತರೆಂಬುದಾಗಿ ಎಣಿಸಿಕೊಳ್ಳದೆ ಇರಲು ಇದುವರೆಗೆ ಗುಪ್ತವಾಗಿದ್ದ ಒಂದು ಸಂಗತಿ ನಿಮಗೆ ತಿಳಿಸಬೇಕೆಂದು ಅಪೇಕ್ಷಿಸುತ್ತೇನೆ ಅದೇನೆಂದರೆ ಇಸ್ರಾಯೇಲ್ಯರಲ್ಲಿ ಒಂದು ಪಾಲು ಜನರಿಗೆ ಉಂಟಾದ ಮೊಂಡತನವು ಯಾವಾಗಲೂ ಇರದೆ ಅನ್ಯಜನಗಳ ಸಮುದಾಯವು ದೇವರ ರಾಜ್ಯದಲ್ಲಿ ಸೇರುವ ತನಕ ಮಾತ್ರ ಇರುವುದು.

26ಆ ನಂತರ ಇಸ್ರಾಯೇಲ್ ಜನರೆಲ್ಲರೂ ರಕ್ಷಣೆಹೊಂದುವರು. ಇದಕ್ಕೆ ಆಧಾರವಾಗಿ ಧರ್ಮಶಾಸ್ತ್ರದಲ್ಲಿ ಬಿಡಿಸುವವನು “ಚೀಯೋನಿನೊಳಗಿಂದ ಹೊರಟು ಬಂದು ಯಾಕೋಬನಲ್ಲಿರುವ ಭಕ್ತಿಹೀನತೆಯನ್ನು ನಿವಾರಣೆಮಾಡುವನು.

27ನಾನು ಅವರ ಸಂಗಡ ಮಾಡಿಕೊಂಡ ಈ ಒಡಂಬಡಿಕೆಯು ನಾನು ಅವರ ಪಾಪಗಳನ್ನು ಪರಿಹರಿಸುವಾಗ ನೆರವೇರುವುದು.” ಎಂದು ಬರೆದಿದೆ.

28ಅವರು ಸುವಾರ್ತೆಯನ್ನು ಬೇಡವೆಂದದ್ದರಿಂದ ದೇವರು ನಿಮಗೆ ಹಿತವನ್ನು ಉಂಟುಮಾಡಿ ಅವರನ್ನು ಶತ್ರುಗಳೆಂದೆಣಿಸಿದ್ದಾನೆ. ಆದರೂ ಅವರು ತಾನು ಆರಿಸಿಕೊಂಡ ಪೂರ್ವಿಕರ ವಂಶಸ್ಥರಾಗಿರುವುದರಿಂದ ಅವರನ್ನು ಪ್ರಿಯರೆಂದು ಎಣಿಸಿದ್ದಾನೆ.

29ದೇವರು ವರಗಳನ್ನು ಅನುಗ್ರಹಿಸುವುದಕ್ಕೆ ಜನರನ್ನು ಕರೆಯುವುದ್ದಕ್ಕೂ ಮನಸ್ಸು ಬದಲಾಯಿಸುವವನಲ್ಲ.

30ಯಾವ ಪ್ರಕಾರ ನೀವು ಪೂರ್ವದಲ್ಲಿ ಅವಿಧೇಯರಾಗಿದ್ದರೂ ಈಗ ಅವರ ಅವಿಧೇಯತೆಯ ದೆಸೆಯಿಂದ ಕರುಣೆ ಹೊಂದಿದ್ದೀರೋ,

31ಅದೇ ಪ್ರಕಾರವಾಗಿ ಇಸ್ರಾಯೇಲ್ಯರೂ ಈಗ ಅವಿಧೇಯರಾಗಿದ್ದರೂ ನಿಮಗೆ ದೊರಕಿದ ಕರುಣೆಯನ್ನು ಅವರು ಹೊಂದುವರು.

32ಯಾಕೆಂದರೆ ದೇವರು ಎಲ್ಲರಿಗೂ ಕರುಣೆಯನ್ನು ತೋರಿಸಬೇಕೆಂಬ ಉದ್ದೇಶವುಳ್ಳವನಾಗಿದ್ದು ಎಲ್ಲರನ್ನೂ ಅವಿಧೇಯತೆಯೆಂಬ ದುಸ್ಥಿತಿಯಲ್ಲಿ ಮುಚ್ಚಿಹಾಕಿದ್ದಾನೆ.

33ಆಹಾ ದೇವರ ಐಶ್ವರ್ಯವೂ, ಜ್ಞಾನವೂ, ವಿವೇಕವೂ ಅಗಾಧ. ಆತನ ನ್ಯಾಯತೀರ್ಪುಗಳು ಎಷ್ಟೋ ಆಗಮ್ಯವಾದದ್ದು. ಆತನ ಮಾರ್ಗಗಳು ಆಗೋಚರವಾದವುಗಳೂ ಆಗಿವೆ.

34“ಕರ್ತನ ಮನಸ್ಸನ್ನು ತಿಳಿದುಕೊಂಡವರಾರು? ಆತನಿಗೆ ಆಲೋಚನಾಕರ್ತನಾಗಿದ್ದವನು ಯಾರು?

35ಮುಂಗಡವಾಗಿ ಆತನಿಗೆ ಕೊಟ್ಟು ಆನಂತರ ಪ್ರತಿಫಲವನ್ನು ತೆಗೆದುಕೊಳ್ಳುವವನು ಯಾರು?”

36ಸಮಸ್ತವೂ ಆತನಿಂದ ಉತ್ಪತ್ತಿಯಾಗಿ, ಆತನಿಂದ ನಡೆಯುತ್ತಾ, ಇರುವುದೆಲ್ಲವೂ ಅತನಿಗೋಸ್ಕರವೇ. ಆತನಿಗೇ ಸದಾಕಾಲವೂ ಮಹಿಮೆಯುಂಟಾಗಲಿ ಸ್ತೋತ್ರ. ಅಮೆನ್.

ಮೂಲ: ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

WEBREATH · 11:11

«He himself gives everyone life and breath and everything else» — Acts 17:25

Breath is one for all: everyone lives by it, whoever they are and whatever they believe. Every day at 11:11 local time people stop for sixty seconds, breathe, and thank GOD for the breath — each in their own words, each within themselves. In that minute we are One Breath.

WEBREATH — the Minute at 11:11, your own local time — we are One Breath