ರೋಮಾಪುರದವರಿಗೆ 13
ನಿಮ್ಮ ಭಾಷೆಯಲ್ಲಿ ಇನ್ನೂ ಯಾವುದೇ ಅನುವಾದವಿಲ್ಲ — ಇಂಗ್ಲಿಷ್ ತೋರಿಸಲಾಗುತ್ತಿದೆ
1ಪ್ರತಿ ಮನುಷ್ಯನು ತನ್ನ ಮೇಲಿರುವ ಅಧಿಕಾರಿಗಳಿಗೆ ಅಧೀನನಾಗಿರಲಿ. ಯಾಕೆಂದರೆ ದೇವರಿಂದ ಹೊರತು ಒಬ್ಬರಿಗೂ ಅಧಿಕಾರವು ದೊರೆತಿರುವುದಿಲ್ಲ. ಇರುವ ಅಧಿಕಾರಿಗಳಾದರೋ ದೇವರಿಂದ ನೇಮಿಸಲ್ಪಟ್ಟವರು.
2ಆದುದರಿಂದ ಅಧಿಕಾರಕ್ಕೆ ಎದುರುಬೀಳುವವನು ದೇವರ ನೇಮವನ್ನು ಎದುರಿಸುತ್ತಾನೆ. ಎದುರಿಸುವವರು ಶಿಕ್ಷೆಗೊಳಗಾಗುವರು.
3ಕೆಟ್ಟಕೆಲಸ ಮಾಡುವವನಿಗೆ ಅಧಿಪತಿಯಿಂದ ಭಯವಿರುವುದೇ ಹೊರತು ಒಳ್ಳೆಕೆಲಸ ಮಾಡುವವನಿಗೆ ಭಯವೇನೂ ಇರುವುದಿಲ್ಲ. ನೀನು ಅಧಿಕಾರಿಗೆ ಭಯಪಡದೇ ಇರಬೇಕೆಂದು ಅಪೇಕ್ಷಿಸುತ್ತೀಯೋ ಒಳ್ಳೆಯದನ್ನು ಮಾಡು. ಆಗ ಆ ಅಧಿಕಾರಿಯೇ ನಿನ್ನನ್ನು ಹೊಗಳುವನು.
4ಅವನು ನಿನ್ನ ಹಿತಕ್ಕೋಸ್ಕರ ದೇವರ ಸೇವಕನಾಗಿದ್ದಾನಲ್ಲಾ. ಆದರೆ ನೀನು ಕೆಟ್ಟದ್ದನ್ನು ಮಾಡಿದರೆ ಭಯಪಡಬೇಕು. ಅವನು ಸುಮ್ಮನೆ ಕೈಯಲ್ಲಿ ಅಧಿಕಾರದ ದಂಡವನ್ನು ಹಿಡಿದಿಲ್ಲ. ಅವನು ದೇವರ ಸೇವಕನಾಗಿದ್ದು ಕೆಟ್ಟದ್ದನ್ನು ಮಾಡುವವನಿಗೆ ದೇವರ ದಂಡನೆಯನ್ನು ವಿಧಿಸುತ್ತಾನೆ.
5ಆದಕಾರಣ ದಂಡನೆಯಾದೀತೆಂದು ಮಾತ್ರವಲ್ಲದೆ ಮನಸ್ಸಾಕ್ಷಿಗೆ ಒಪ್ಪುವಂತೆಯು ಅವನಿಗೆ ಅಧೀನನಾಗಿರು.
6ಈ ಕಾರಣದಿಂದಲೇ ನೀವು ಕಂದಾಯವನ್ನು ಕೂಡ ಕೊಡುತ್ತೀರಿ. ಯಾಕೆಂದರೆ ಕಂದಾಯ ಸಂಗ್ರಹಿಸುವವರು ದೇವರ ಸೇವಕರಾಗಿದ್ದು ಆ ಕೆಲಸದಲ್ಲಿಯೇ ನಿರತರಾಗಿರುತ್ತಾರೆ.
7ಅವರವರಿಗೆ ಸಲ್ಲಿಸತಕ್ಕದ್ದನ್ನು ಸಲ್ಲಿಸಿರಿ. ಯಾರಿಗೆ ಕಂದಾಯವೋ ಅವರಿಗೆ ಕಂದಾಯವನ್ನು ಯಾರಿಗೆ ಸುಂಕವೋ ಅವರಿಗೆ ಸುಂಕವನ್ನು ಸಲ್ಲಿಸಿರಿ. ಯಾರಿಗೆ ಭಯಪಡಬೇಕೋ ಅವರಿಗೆ ಭಯಪಡಿರಿ ಯಾರಿಗೆ ಮರ್ಯಾದೆ ತೋರಿಸಬೇಕೋ ಅವರಿಗೆ ಗೌರವವನ್ನು ಸಲ್ಲಿಸಿರಿ.
8ಒಬ್ಬರನ್ನೊಬ್ಬರು ಪ್ರೀತಿಸಬೇಕೆಂಬ ಋಣವೇ ಹೊರತು ಬೇರೆ ಯಾವ ಸಾಲವೂ ನಿಮ್ಮ ಮೇಲೆ ಇರಬಾರದು. ತನ್ನ ನೆರೆಹೊರೆಯವರನ್ನು ಪ್ರೀತಿಸುವವನು ಧರ್ಮಶಾಸ್ತ್ರವನ್ನೆಲ್ಲಾ ನೆರವೇರಿಸಿದ್ದಾನೆ.
9ಹೇಗೆಂದರೆ “ವ್ಯಭಿಚಾರ ಮಾಡಬಾರದು, ನರಹತ್ಯ ಮಾಡಬಾರದು, ಕದಿಯಬಾರದು, ಪರರ ಸೊತ್ತನ್ನು ಆಶಿಸಬಾರದು.” ಈ ಮೊದಲಾದ ಎಲ್ಲಾ ಕಟ್ಟಳೆಗಳು “ನಿನ್ನ ನೆರೆಯವನನ್ನು ನಿನ್ನಂತೆಯೇ ಪ್ರೀತಿಸಬೇಕು” ಎಂಬ ಒಂದೇ ಮಾತಿನಲ್ಲಿ ಅಡಕವಾಗಿದೆ.
10ಪ್ರೀತಿಯು ಮತ್ತೊಬ್ಬರಿಗೆ ಯಾವ ಕೇಡನ್ನೂ ಮಾಡುವುದಿಲ್ಲ. ಆದಕಾರಣ ಪ್ರೀತಿಯಿಂದಲೇ ಧರ್ಮಶಾಸ್ತ್ರವು ನೆರವೇರುತ್ತದೆ.
11ಈಗಿನ ಕಾಲವು ನಿದ್ದೆಯಿಂದ ಎಚ್ಚರವಾಗಿರತಕ್ಕ ಕಾಲವೆಂದು ಅರಿತು ಇದನ್ನೆಲ್ಲಾ ಮಾಡಿರಿ. ನಾವು ಕ್ರಿಸ್ತನನ್ನು ಮೊದಲು ನಂಬಿದ ಕಾಲದಲ್ಲಿ ಇದ್ದುದಕ್ಕಿಂತ ಈಗ ನಮ್ಮ ವಿಮೋಚನೆಯ ಕಾಲವು ಹತ್ತಿರವಾಗಿದೆ.
12ಇರುಳು ಬಹಳ ಮಟ್ಟಿಗೆ ಕಳೆಯಿತು; ಹಗಲು ಸಮೀಪವಾಯಿತು. ಕತ್ತಲೆಗೆ ಅನುಗುಣವಾದ ಕೃತ್ಯಗಳನ್ನು ಬಿಟ್ಟು ಬೆಳಕಿಗೆ ಅನುಗುಣವಾದ ರಕ್ಷಣೆಯ ಆಯುಧಗಳನ್ನು ಧರಿಸಿಕೊಳ್ಳೋಣ.
13ದುಂದೌತಣ ಕುಡಿಕತನಗಳಲ್ಲಾಗಲಿ, ಕಾಮವಿಲಾಸ, ನಿರ್ಲಜ್ಜಾಕೃತ್ಯಗಳಲ್ಲಿಯಾಗಲಿ ಜಗಳ ಹೊಟ್ಟೆಕಿಚ್ಚುಗಳಲ್ಲಿಯಾಗಲಿ ಕಾಲ ಕಳೆಯದೆ ಹಗಲಿನಲ್ಲಿರ ತಕ್ಕ ಹಾಗೆ ಮಾನಸ್ಥರಾಗಿ ನಡೆದುಕೊಳ್ಳೋಣ.
14ದೇಹದ ಆಸೆಗಳನ್ನು ಪೂರೈಸುವುದಕ್ಕಾಗಿ ಚಿಂತಿಸದೇ ಕರ್ತನಾದ ಯೇಸು ಕ್ರಿಸ್ತನನ್ನು ಧರಿಸಿಕೊಳ್ಳಿರಿ.
WEBREATH · 11:11
«He himself gives everyone life and breath and everything else» — Acts 17:25
Breath is one for all: everyone lives by it, whoever they are and whatever they believe. Every day at 11:11 local time people stop for sixty seconds, breathe, and thank GOD for the breath — each in their own words, each within themselves. In that minute we are One Breath.
WEBREATH — the Minute at 11:11, your own local time — we are One Breath