ಕ್ರಿಶ್ಚಿಯನ್ ಧರ್ಮ
ಹಿಂದೆ

ರೋಮಾಪುರದವರಿಗೆ 4

ನಿಮ್ಮ ಭಾಷೆಯಲ್ಲಿ ಇನ್ನೂ ಯಾವುದೇ ಅನುವಾದವಿಲ್ಲ — ಇಂಗ್ಲಿಷ್ ತೋರಿಸಲಾಗುತ್ತಿದೆ

1ಹಾಗಾದರೆ ವಂಶಾನುಕ್ರಮವಾಗಿ ನಮಗೆ ಮೂಲಪಿತೃವಾಗಿರುವ ಅಬ್ರಹಾಮನು ಈ ವಿಷಯದಲ್ಲಿ ಏನು ಪಡೆದುಕೊಂಡನೆಂದು ಹೇಳಬೇಕು?

2ಅಬ್ರಹಾಮನು ಪುಣ್ಯಕ್ರಿಯೆಯಿಂದಲೇ ನೀತಿವಂತನಾದ ಪಕ್ಷದಲ್ಲಿ ಹೊಗಳಿಕೊಳ್ಳುವುದಕ್ಕೆ ಅವನಿಗೆ ಆಸ್ಪದವಿರುವುದು; ಆದರೆ ದೇವರ ಮುಂದೆ ಹೊಗಳಿಕೊಳ್ಳುವುದಕ್ಕೆ ಆಸ್ಪದವಿರುವುದಿಲ್ಲ.

3ಇದರ ವಿಷಯದಲ್ಲಿ ಧರ್ಮಶಾಸ್ತ್ರವು ಹೇಳುವುದನ್ನು ಆಲೋಚಿಸಿರಿ, “ಅಬ್ರಹಾಮನು ದೇವರನ್ನು ನಂಬಿದನು; ಆ ನಂಬಿಕೆಯು ಅವನ ಲೆಕ್ಕಕ್ಕೆ ನೀತಿ ಎಂದು ಎಣಿಸಲ್ಪಟ್ಟಿತು” ಎಂದು ಹೇಳುತ್ತದೆ.

4ಕೆಲಸ ಮಾಡಿದವನಿಗೆ ಬರುವ ಕೂಲಿಯು ಕೃಪೆಯಿಂದ ದೊರಕುವಂಥದೆಂದು ಎಣಿಕೆಯಾಗುವುದಿಲ್ಲ; ಅದು ಅವನಿಗೆ ಸಲ್ಲತಕ್ಕದ್ದೇ ಎಂದು ಎಣಿಕೆಯಾಗುವುದು.

5ಆದರೆ ಯಾವನು ಪುಣ್ಯಕ್ರಿಯೆಗಳನ್ನು ಮಾಡಿದವನಾಗಿರದೆ ಪಾಪಾತ್ಮರನ್ನು ನೀತಿವಂತರೆಂದು ನಿರ್ಣಯಿಸುವಾತನಲ್ಲಿ ನಂಬಿಕೆಯಿಡುತ್ತಾನೋ ಅವನ ನಂಬಿಕೆಯೇ ನೀತಿ ಎಂದು ಎಣಿಸಲ್ಪಡುವುದು.

6ದೇವರು ಯಾವನನ್ನು ಪುಣ್ಯಕ್ರಿಯೆಗಳಿಲ್ಲದೆ ನೀತಿವಂತನೆಂದು ಎಣಿಸುತ್ತಾನೋ ಅವನು ಧನ್ಯನೆಂದು ದಾವೀದನು ಸಹ ಹೇಳುತ್ತಾನೆ. ಹೇಗೆಂದರೆ,

7“ಯಾರ ಅಪರಾಧಗಳು ಪರಿಹಾರವಾಗಿದೆಯೋ, ಯಾರ ಪಾಪಗಳು ಕ್ಷಮಿಸಲ್ಪಟ್ಟಿವೆಯೋ ಅವರೇ ಧನ್ಯರು.

8ಕರ್ತನು ಯಾವನ ಪಾಪವನ್ನು ಲೆಕ್ಕಕ್ಕೆ ತರುವುದಿಲ್ಲವೋ ಆ ಮನುಷ್ಯನೇ ಧನ್ಯನು.”

9ಈ ಶುಭವು ಸುನ್ನತಿಯಾದವರಿಗೆ ಮಾತ್ರವೋ? ಅಥವಾ ಸುನ್ನತಿಯಿಲ್ಲದವರಿಗೆ ಸಹ ಉಂಟೋ? “ಅಬ್ರಹಾಮನ ಲೆಕ್ಕಕ್ಕೆ ಅವನ ನಂಬಿಕೆಯೇ ನೀತಿಯೆಂದು ಎಣಿಸಲ್ಪಟ್ಟಿತು” ಎಂಬುದಾಗಿ ನಾವು ಹೇಳುತ್ತೇವೆ.

10ಅದು ಯಾವಾಗ ಎಣಿಸಲ್ಪಟ್ಟಿತು? ಅವನಿಗೆ ಸುನ್ನತಿಯಾದ ಮೇಲೆಯೋ? ಸುನ್ನತಿಯಾಗುವುದಕ್ಕೆ ಮೊದಲೋ? ಸುನ್ನತಿಯಾದ ಮೇಲೆ ಅಲ್ಲ, ಸುನ್ನತಿಯಾಗುವುದಕ್ಕೆ ಮೊದಲೇ ಎಣಿಸಲ್ಪಟ್ಟಿತು.

11ಅನಂತರ ಸುನ್ನತಿಯನ್ನು, ಮೊದಲೇ ಅವನಿಗಿದ್ದ ನಂಬಿಕೆಯ ಗುರುತಾಗಿಯೂ, ಮುದ್ರೆಯಾಗಿಯೂ ಹೊಂದಿದನು. ಹೀಗಿರುವುದರಿಂದ ಅವನು ನಂಬುವವರೆಲ್ಲರಿಗೂ, ಅವರು ಸುನ್ನತಿಯಿಲ್ಲದವರಾಗಿದಾಗ್ಯೂ ಮೂಲಪಿತೃವಾದನು; ಇದರಿಂದ ಅವರು ನೀತಿವಂತರೆಂದು ಎಣಿಸಲ್ಪಟ್ಟರು.

12ಇದಲ್ಲದೆ ಸುನ್ನತಿಯವರಲ್ಲಿ ಸುನ್ನತಿಹೊಂದಿದ್ದವರಿಗೆ ಮಾತ್ರವಲ್ಲದೆ, ನಮ್ಮ ಪಿತೃವಾಗಿರುವ ಅಬ್ರಹಾಮನಿಗೆ ಸುನ್ನತಿಯಾಗುವುದಕ್ಕೂ ಮೊದಲೇ ಇದ್ದ ನಂಬಿಕೆಯ ಕ್ರಮವನ್ನು ಅನುಸರಿಸಿ ನಡೆಯುತ್ತಾರೋ ಅವರಿಗೆ ಸಹ ಮೂಲ ತಂದೆಯಾಗಿದ್ದಾನೆ.

13ನೀನು ಲೋಕಕ್ಕೆ ಬಾಧ್ಯನಾಗುವಿ ಎಂಬ ವಾಗ್ದಾನವು ಅಬ್ರಹಾಮನಿಗಾಗಲಿ ಅವನ ಸಂತತಿಯವರಿಗಾಗಲಿ ಧರ್ಮಶಾಸ್ತ್ರದಿಂದ ಆದದ್ದಲ್ಲ; ನಂಬಿಕೆಯಿಂದ ಬರುವ ನೀತಿಯಾಗಿದೆ.

14ಧರ್ಮಶಾಸ್ತ್ರವನ್ನು ಅನುಸರಿಸುವವರು ಲೋಕಕ್ಕೆ ಬಾಧ್ಯರಾಗಿದ್ದರೆ ನಂಬಿಕೆಯು ವ್ಯರ್ಥವಾಯಿತು, ವಾಗ್ದಾನವು ನಿರರ್ಥಕವಾಯಿತು.

15ಯಾಕೆಂದರೆ ಧರ್ಮಶಾಸ್ತ್ರವು ಜನರನ್ನು ದೇವರ ಕೋಪಕ್ಕೆ ಗುರಿಮಾಡುವಂಥದ್ದು, ಆದರೆ ಧರ್ಮಶಾಸ್ತ್ರವಿಲ್ಲದ ಪಕ್ಷದಲ್ಲಿ ಅದರ ಉಲ್ಲಂಘನೆಯೂ ಇಲ್ಲ.

16ಆದಕಾರಣ ಆ ಬಾಧ್ಯತೆಯು ಕೃಪೆಯಿಂದಲೇ ದೊರೆಯುವಂಥದ್ದಾಗಿದೆ, ಅದು ನಂಬಿಕೆಯ ಮೂಲಕವೇ ಸಿಕ್ಕುತ್ತದೆ, ಹೀಗೆ ಆ ವಾಗ್ದಾನವು ನಮ್ಮೆಲ್ಲರ ತಂದೆಯಾದ ಅಬ್ರಹಾಮನ ಸಂತತಿಯವರೆಲ್ಲರಿಗೂ, ಅಂದರೆ ಧರ್ಮಶಾಸ್ತ್ರವನ್ನು ಆಧಾರ ಮಾಡಿಕೊಂಡವರಿಗೆ ಮಾತ್ರವಲ್ಲದೆ, ಅಬ್ರಹಾಮನಂಥ ನಂಬಿಕೆ ಇರುವವರೆಲ್ಲರಿಗೂ ಸಹ ಸ್ಥಿರವಾಗಿದೆ.

17“ನಾನು ನಿನ್ನನ್ನು ಅನೇಕ ಜನಾಂಗಗಳಿಗೆ ಪಿತನಾಗಿ ನೇಮಿಸಿದ್ದೇನೆಂದು” ಶಾಸ್ತ್ರದಲ್ಲಿ ಬರೆದಿದೆಯಲ್ಲ. ದೇವರು ಸತ್ತವರನ್ನು ಬದುಕಿಸುವವನಾಗಿಯೂ ಮತ್ತು ಅಸ್ತಿತ್ವದಲ್ಲಿ ಇಲ್ಲದ್ದನ್ನು ಅಸ್ತಿತ್ವಕ್ಕೆ ತರುವಂಥವನೂ ಆದ ದೇವರಲ್ಲಿ ಅಬ್ರಹಾಮನು ನಂಬಿಕೆಯಿಟ್ಟನು.

18“ನಿನ್ನ ಸಂತಾನವು ನಕ್ಷತ್ರಗಳಷ್ಟಾಗುವುದು” ಎಂಬುದಾಗಿ ತನಗೆ ಹೇಳಲ್ಪಟ್ಟ ಆ ನಿರೀಕ್ಷೆಗೆ ಆಸ್ಪದವಿಲ್ಲದಿರುವಾಗಲೂ ಅಬ್ರಹಾಮನು ತಾನು ಬಹು ಜನಾಂಗಗಳಿಗೆ ಪಿತನಾಗುವೆನೆಂದು ನಿರೀಕ್ಷೆಗೆ ವಿರುದ್ಧವಾಗಿ ನಿರೀಕ್ಷಿಸಿ ನಂಬಿದನು.

19ಅವನು ಹೆಚ್ಚು ಕಡಿಮೆ ನೂರು ವರ್ಷದವನಾಗಿದ್ದು ತನ್ನ ದೇಹವು ಆಗಲೇ ಮೃತಪ್ರಾಯವಾಯಿತೆಂದೂ ಸಾರಳಿಗೆ ಗರ್ಭಕಾಲ ಕಳೆದು ಹೋಯಿತೆಂದು ಪರಿಗಣಿಸಿದ್ದಾಗ್ಯೂ ಅವನ ನಂಬಿಕೆಯು ಕುಂದಲಿಲ್ಲ.

20ದೇವರು ಮಾಡಿದ ವಾಗ್ದಾನದ ವಿಷಯದಲ್ಲಿ ಅವನು ಅಪನಂಬಿಕೆಯಿಂದ ಚಂಚಲಚಿತ್ತನಾಗಲಿಲ್ಲ.

21ದೇವರನ್ನು ಘನಪಡಿಸುವವನಾಗಿ ಆತನು ತನ್ನ ವಾಗ್ದಾನವನ್ನು ನೆರವೇರಿಸುವುದಕ್ಕೆ ಸಮರ್ಥನೆಂದು ಪೂರ್ಣದೃಢತೆಯುಳ್ಳವನಾದನು.

22ಆದ್ದರಿಂದ ಆ ನಂಬಿಕೆಯು ಅವನ ಲೆಕ್ಕಕ್ಕೆ ನೀತಿಯೆಂದು ಎಣಿಸಲ್ಪಟ್ಟಿತು.

23ಆದರೆ ಅದು ಅವನ ಲೆಕ್ಕಕ್ಕೆ ನೀತಿಯೆಂದು ಎಣಿಸಲ್ಪಟ್ಟಿತೆಂಬುದು ಅವನಿಗೋಸ್ಕರ ಮಾತ್ರವಲ್ಲದೆ ನಮಗೋಸ್ಕರವೂ ಬರೆದಿರುವುದು.

24ನಮ್ಮ ಕರ್ತನಾದ ಯೇಸುವನ್ನು ಸತ್ತವರೊಳಗಿಂದ ಎಬ್ಬಿಸಿದ ದೇವರನ್ನು ನಂಬುವ ನಮಗೂ ಆ ನಂಬಿಕೆಯು ನೀತಿಯೆಂದು ಎಣಿಸಲ್ಪಡುವುದು.

25ದೇವರು ಯೇಸುವನ್ನು ನಮ್ಮ ಅಪರಾಧಗಳ ನಿಮಿತ್ತ ಮರಣಕ್ಕೆ ಒಪ್ಪಿಸಿಕೊಟ್ಟು ನಮಗೆ ನೀತಿವಂತರೆಂಬ ನಿರ್ಣಯವು ಉಂಟಾಗುವುದಕ್ಕಾಗಿಯೇ ಜೀವದಿಂದ ಎಬ್ಬಿಸಲ್ಪಟ್ಟನು.

ಮೂಲ: ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

WEBREATH · 11:11

«He himself gives everyone life and breath and everything else» — Acts 17:25

Breath is one for all: everyone lives by it, whoever they are and whatever they believe. Every day at 11:11 local time people stop for sixty seconds, breathe, and thank GOD for the breath — each in their own words, each within themselves. In that minute we are One Breath.

WEBREATH — the Minute at 11:11, your own local time — we are One Breath