ಕ್ರಿಶ್ಚಿಯನ್ ಧರ್ಮ
ಹಿಂದೆ

ರೋಮಾಪುರದವರಿಗೆ 5

ನಿಮ್ಮ ಭಾಷೆಯಲ್ಲಿ ಇನ್ನೂ ಯಾವುದೇ ಅನುವಾದವಿಲ್ಲ — ಇಂಗ್ಲಿಷ್ ತೋರಿಸಲಾಗುತ್ತಿದೆ

1ಹೀಗಿರಲಾಗಿ ನಾವು ನಂಬಿಕೆಯಿಂದ ನೀತಿವಂತರಾದ ಕಾರಣ ನಮ್ಮ ಕರ್ತನಾದ ಯೇಸು ಕ್ರಿಸ್ತನ ಮೂಲಕ ದೇವರೊಂದಿಗೆ ನಮಗೆ ಸಮಾಧಾನವುಂಟು.

2ಈಗ ನಾವು ನೆಲೆಗೊಂಡಿರುವ ದೇವರ ಕೃಪಾಶ್ರಯಕ್ಕೆ ಆತನ ಮುಖಾಂತರವೇ ನಂಬಿಕೆಯಿಂದ ಸೇರಿದವರಾಗಿದ್ದೇವೆ ಮತ್ತು ದೇವರ ಮಹಿಮೆಯ ನಿರೀಕ್ಷೆಯಲ್ಲಿ ಉಲ್ಲಾಸಪಡುತ್ತೇವೆ.

3ಇದು ಮಾತ್ರವಲ್ಲದೆ ನಮಗೆ ಉಂಟಾಗುವ ಕಷ್ಟಸಂಕಟಗಳಲ್ಲಿಯೂ ಉಲ್ಲಾಸವಾಗಿದ್ದೇವೆ.

4ಏಕೆಂದರೆ ಕಷ್ಟಸಂಕಟಗಳು ತಾಳ್ಮೆಯನ್ನು, ತಾಳ್ಮೆಯೂ ಸದ್ಗುಣವನ್ನು, ಸದ್ಗುಣವು ನಿರೀಕ್ಷೆಯನ್ನು ಉಂಟುಮಾಡುತ್ತದೆಂದು ಬಲ್ಲೆವು.

5ಈ ನಿರೀಕ್ಷೆಯು ನಮ್ಮನ್ನು ಆಶಾಭಂಗಪಡಿಸುವುದಿಲ್ಲ, ಏಕೆಂದರೆ, ನಮಗೆ ಕೊಟ್ಟಿರುವ ಪವಿತ್ರಾತ್ಮನ ಮೂಲಕವಾಗಿ ದೇವರ ಪ್ರೀತಿಯು ನಮ್ಮ ಹೃದಯಗಳಲ್ಲಿ ಸುರಿಸಿದ್ದಾನೆ.

6ನಾವು ಬಲಹೀನರಾಗಿದ್ದಾಗಲೇ ಕ್ರಿಸ್ತನು ನಿಯಮಿತ ಕಾಲದಲ್ಲಿ ಭಕ್ತಿಹೀನರಿಗೋಸ್ಕರ ಪ್ರಾಣಕೊಟ್ಟನು.

7ನೀತಿವಂತರಿಗೋಸ್ಕರ ಯಾರಾದರೂ ಪ್ರಾಣಕೊಡುವುದು ಅಪರೂಪ. ನಿಜವಾಗಿಯೂ ಒಳ್ಳೆಯವನಿಗಾಗಿ ಪ್ರಾಣಕೊಡುವುದಕ್ಕೆ ಯಾವನಾದರೂ ಧೈರ್ಯಮಾಡಿದರೂ ಮಾಡಬಹುದು.

8ಆದರೆ ನಾವು ಪಾಪಿಗಳಾಗಿದ್ದಾಗಲೇ ಕ್ರಿಸ್ತನು ನಮಗೋಸ್ಕರ ಪ್ರಾಣಕೊಟ್ಟದ್ದರಲ್ಲಿ ದೇವರು ನಮ್ಮ ಮೇಲೆ ತನಗಿರುವ ಪ್ರೀತಿಯನ್ನು ದೃಢಪಡಿಸಿದ್ದಾನೆ.

9ಈಗ ನಾವು ಆತನ ರಕ್ತದಿಂದ ನೀತಿವಂತರಾಗಿರಲಾಗಿ ಆತನ ಮೂಲಕವಾಗಿ ದೇವರ ಕೋಪದಿಂದ ಖಂಡಿತವಾಗಿಯೂ ರಕ್ಷಣೆಯಾಗುವುದು ಅಷ್ಟೇ ನಿಶ್ಚಯವಲ್ಲವೇ?

10ನಾವು ದೇವರಿಗೆ ಶತ್ರುಗಳಾಗಿದ್ದಾಗಲೇ ನಮಗೆ ಆತನ ಮಗನ ಮರಣದ ಮೂಲಕ ಆತನೊಂದಿಗೆ ಸಂಧಾನವಾಯಿತು ಆತನ ಕೂಡ ಸಂಧಾನವಾದ ನಮಗೆ ಮಗನ ಜೀವದಿಂದ ರಕ್ಷಣೆಯಾಗುವುದು ಅಷ್ಟೇ ನಿಶ್ಚಯವಲ್ಲವೇ?

11ಇಷ್ಟು ಮಾತ್ರವಲ್ಲದೆ ನಾವು ನಮ್ಮ ಕರ್ತನಾದ ಯೇಸು ಕ್ರಿಸ್ತನ ಮೂಲಕ ಸಂಧಾನವಾದದ್ದರಿಂದ ಆತನ ಮುಖಾಂತರ ದೇವರಲ್ಲಿ ಉಲ್ಲಾಸಪಡುತ್ತೇವೆ.

12ಈ ವಿಷಯ ಹೇಗೆಂದರೆ ಒಬ್ಬ ಮನುಷ್ಯನಾದ ಆದಾಮನಿಂದಲೇ ಪಾಪವೂ ಲೋಕದೊಳಗೆ ಪ್ರವೇಶಿಸಿತು ಮತ್ತು ಮರಣವು ಪಾಪದ ನಿಮಿತ್ತ, ಹಾಗು, ಮರಣವು ಎಲ್ಲರು ಪಾಪಮಾಡಿದ್ದರಿಂದ ಎಲ್ಲರಿಗೂ ಪ್ರಾಪ್ತಿಯಾಯಿತು.

13ಧರ್ಮಶಾಸ್ತ್ರವು ಕೊಡುವುದಕ್ಕೆ ಮುಂಚೆಯೇ ಪಾಪವು ಲೋಕದಲ್ಲಿತ್ತು. ಆದರೆ ಧರ್ಮಶಾಸ್ತ್ರವಿಲ್ಲದಿರುವಾಗ ಪಾಪವು ಗಣನೆಗೆ ಬರುವುದಿಲ್ಲ.

14ಆದರೂ ಆದಾಮನ ಕಾಲದಿಂದ ಮೋಶೆಯ ಕಾಲದವರೆಗೂ ಮರಣದ ಆಳ್ವಿಕೆಯು ನಡೆಯುತ್ತಿತ್ತು. ಆದಾಮನು ದೇವರ ಆಜ್ಞೆಯನ್ನು ಮೀರಿ ಮಾಡಿದ ಪಾಪಕ್ಕೆ ಸಮಾನವಾದ ಪಾಪವನ್ನು ಮಾಡದೆ ಇದ್ದವರ ಮೇಲೆಯೂ ಅದು ನಡೆಯುತ್ತಿತ್ತು. ಆ ಆದಾಮನು ಬರಬೇಕಾದ ಒಬ್ಬಾತನಾದ ಕ್ರಿಸ್ತನಿಗೆ ಪ್ರತಿರೂಪನಾಗಿದ್ದಾನೆ.

15ಆದರೆ ಆ ಅಪರಾಧದ ಸಂಗತಿಗೂ ದೇವರ ಕೃಪಾದಾನದ ಸಂಗತಿಗೂ ಬಹಳ ವ್ಯತ್ಯಾಸವುಂಟು. ಹೇಗೆಂದರೆ ಆ ಒಬ್ಬನ ಅಪರಾಧದಿಂದ ಬಹುಮಂದಿ ಸತ್ತರು ಹೀಗಿರಲಾಗಿ ದೇವರ ಕೃಪೆಯು ಯೇಸು ಕ್ರಿಸ್ತನೆಂಬ ಈ ಒಬ್ಬ ಪುರುಷನ ಕೃಪೆಯಿಂದ ಸಿಕ್ಕುವ ವರವೂ ಅನೇಕರಿಗೆ ಹೇರಳವಾಗಿ ಸಿದ್ಧವಾಗಿರುವುದು ನಿಶ್ಚಯವಲ್ಲವೇ.

16ದೇವರ ವರವು ಒಬ್ಬ ಮನುಷ್ಯನ ಪಾಪದ ಫಲದಂತಿರುವುದಿಲ್ಲ, ಒಬ್ಬ ಮನುಷ್ಯನ ಪಾಪದ ದೆಸೆಯಿಂದ ಅಪರಾಧಿಗಳಾಗಿದ್ದಾರೆಂದು ನಿರ್ಣಯಿಸಲ್ಪಟ್ಟಿತು. ಆದರೆ ದೇವರ ಕೃಪಾದಾನವು ಅನೇಕರ ಪಾಪಗಳನ್ನು ವಿಮೋಚಿಸಿ ಅವರನ್ನು ನೀತಿವಂತರೆಂದು ನಿರ್ಣಯಿಸುವುದಕ್ಕೆ ಕಾರಣವಾಯಿತು.

17ಒಬ್ಬನು ಮಾಡಿದ ಅಪರಾಧದಿಂದ ಮರಣವು ಉಂಟಾಗಿ ಆ ಒಬ್ಬನ ದೆಸೆಯಿಂದಲೇ ಮರಣವು ಆಳುವುದಾದರೆ ದೇವರು ಧಾರಾಳವಾಗಿ ಅನುಗ್ರಹಿಸುವ ಕೃಪಾದಾನವನ್ನೂ, ನೀತಿಯೆಂಬ ವರವನ್ನೂ ಹೊಂದಿದವರು ಯೇಸು ಕ್ರಿಸ್ತನೆಂಬ ಈ ಒಬ್ಬ ಪುರುಷನ ಮೂಲಕ ಜೀವಭರಿತರಾಗಿ ಆಳುವುದು ಮತ್ತೂ ನಿಶ್ಚಯವಲ್ಲವೇ.

18ಹೀಗಿರಲಾಗಿ ಆದಾಮನ ಒಂದೇ ಅಪರಾಧದ ಮೂಲಕ ಎಲ್ಲಾ ಮನುಷ್ಯರಿಗೆ ಮರಣವೆಂಬ ನಿರ್ಣಯವು ಹೇಗೆ ಉಂಟಾಯಿತೋ ಹಾಗೆಯೇ ಕ್ರಿಸ್ತನ ಒಂದೇ ಸತ್ಕಾರ್ಯದಿಂದ ಎಲ್ಲಾ ಮನುಷ್ಯರಿಗೆ ನೀತಿವಂತರೆಂಬ ನಿರ್ಣಯವು ಉಂಟಾಗಿ ಜೀವವು ಫಲಿಸಿತು.

19ಒಬ್ಬನ ಅವಿಧೇಯತ್ವದಿಂದ ಎಲ್ಲರೂ ಹೇಗೆ ಪಾಪಿಗಳಾದರೋ ಹಾಗೆಯೇ ಒಬ್ಬನ ವಿಧೇಯತ್ವದಿಂದ ಎಲ್ಲರೂ ನೀತಿವಂತರಾಗುವರು.

20ಅಪರಾಧಗಳು ಹೆಚ್ಚಾಗುತ್ತಾ ಬಂದೆಂತಲ್ಲಾ ಧರ್ಮಶಾಸ್ತ್ರವು ಅದರೊಂದಿಗೆ ಪ್ರವೇಶಿಸಿತು. ಆದರೆ ಪಾಪವು ಹೆಚ್ಚಾದಾಗಲ್ಲೇ ಕೃಪೆಯು ಎಷ್ಟೋ ಹೆಚ್ಚಾಗಿ ಪ್ರಬಲವಾಯಿತು.

21ಹೀಗೆ ಪಾಪವು ಮರಣವನ್ನುಂಟು ಮಾಡುತ್ತಾ ಅಧಿಕಾರವನ್ನು ನಡಿಸಿದ ಹಾಗೆಯೇ ದೇವರ ಕೃಪೆಯು ನಮ್ಮ ಕರ್ತನಾದ ಯೇಸು ಕ್ರಿಸ್ತನ ಮೂಲಕ ನೀತಿಯಿಂದ ನಿತ್ಯಜೀವವನ್ನುಂಟುಮಾಡುತ್ತಾ ಆಳುವಂತಾಯಿತು.

ಮೂಲ: ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

WEBREATH · 11:11

«He himself gives everyone life and breath and everything else» — Acts 17:25

Breath is one for all: everyone lives by it, whoever they are and whatever they believe. Every day at 11:11 local time people stop for sixty seconds, breathe, and thank GOD for the breath — each in their own words, each within themselves. In that minute we are One Breath.

WEBREATH — the Minute at 11:11, your own local time — we are One Breath