ಪರಮಗೀತೆ 3
ನಿಮ್ಮ ಭಾಷೆಯಲ್ಲಿ ಇನ್ನೂ ಯಾವುದೇ ಅನುವಾದವಿಲ್ಲ — ಇಂಗ್ಲಿಷ್ ತೋರಿಸಲಾಗುತ್ತಿದೆ
1ರಾತ್ರಿಯಲ್ಲಿ ಹಾಸಿಗೆಯ ಮೇಲೆ ನನ್ನ ಪ್ರಾಣಪ್ರಿಯನನ್ನು ಹುಡುಕಿದೆನು, ಎಷ್ಟು ಹುಡುಕಿದರೂ ಸಿಕ್ಕಲಿಲ್ಲ.
2ನಾನು, “ಎದ್ದು ಊರಿನಲ್ಲಿ ತಿರುಗುವೆನು, ಬೀದಿಗಳಲ್ಲಿಯೂ, ಚೌಕಗಳಲ್ಲಿಯೂ ನನ್ನ ಪ್ರಾಣಪ್ರಿಯನನ್ನು ಹುಡುಕುವೆನು” ಅಂದುಕೊಂಡೆನು, ಎಷ್ಟು ಹುಡುಕಿದರೂ ಸಿಕ್ಕಲಿಲ್ಲ.
3ಊರಿನಲ್ಲಿ ತಿರುಗುವ ಕಾವಲುಗಾರರ ಕೈಗೆ ಸಿಕ್ಕಿದೆನು, “ನನ್ನ ಪ್ರಾಣಪ್ರಿಯನನ್ನು ಕಂಡಿರಾ?” ಎಂದು ಅವರನ್ನು ವಿಚಾರಿಸಿದೆನು.
4ಅವರನ್ನು ಬಿಟ್ಟ ತುಸು ಹೊತ್ತಿನೊಳಗೆ ನನ್ನ ಪ್ರಾಣಪ್ರಿಯನನ್ನು ಕಂಡುಕೊಂಡು ತಾಯಿಯ ಮನೆಗೆ, ನನ್ನನ್ನು ಹೆತ್ತವಳ ಕೋಣೆಗೆ ಸೇರುವ ತನಕ, ಬಿಡದೆ ಹಿಡಿದುಕೊಂಡೇ ಹೋದೆನು.
5ಯೆರೂಸಲೇಮಿನ ಮಹಿಳೆಯರೇ, ಆತನು ತಾನಾಗಿ ಎಚ್ಚರಗೊಳ್ಳುವವರೆಗೆ ಯಾರೂ ನನ್ನ ಪ್ರಿಯನನ್ನು ಎಚ್ಚರಿಸದಿರಿ, ಆತನ ವಿಶ್ರಾಂತಿಗೆ ಯಾರೂ ಭಂಗ ಮಾಡದಿರಿ ಎಂದು ವನದ ಜಿಂಕೆ ಹರಿಣಗಳ ಮೇಲೆ ನಿಮ್ಮಿಂದ ಪ್ರಮಾಣಮಾಡಿಸುತ್ತೇನೆ.
6ವರ್ತಕರು ಮಾರುವ ಸಕಲ ಸುಗಂಧತೈಲಗಳಿಂದ, ರಸಗಂಧ, ಸಾಂಬ್ರಾಣಿಧೂಪ ಮುಂತಾದ ದ್ರವ್ಯಗಳಿಂದ ಧೂಮಸ್ತಂಭಗಳೋಪಾದಿಯಲ್ಲಿ ಹೊರಹೊಮ್ಮುತ್ತಿರುವ, ಅರಣ್ಯಮಾರ್ಗವಾಗಿ ಬರುತ್ತಿರುವ ಈ ಮೆರವಣಿಗೆ ಯಾರದು?
7ಅದೋ, ನೋಡು ಸೊಲೊಮೋನನ ಪಲ್ಲಕ್ಕಿ, ಇಸ್ರಾಯೇಲಿನ ಶೂರರಲ್ಲಿ ಅರುವತ್ತು ಜನರು ಅದರ ಸುತ್ತಲಿದ್ದಾರೆ.
8ಯುದ್ಧಪ್ರವೀಣರಾದ ಇವರೆಲ್ಲರೂ ಕೈಯಲ್ಲಿ ಕತ್ತಿಯನ್ನು ಹಿಡಿದಿದ್ದಾರೆ. ರಾತ್ರಿಯ ಅಪಾಯದ ನಿಮಿತ್ತ ಪ್ರತಿಯೊಬ್ಬನೂ ಸೊಂಟಕ್ಕೆ ಕತ್ತಿ ಕಟ್ಟಿಕೊಂಡಿದ್ದಾನೆ.
9ಆ ಪಲ್ಲಕ್ಕಿಯನ್ನು ರಾಜನಾದ ಸೊಲೊಮೋನನು ಲೆಬನೋನಿನ ಮರದಿಂದ ಮಾಡಿಸಿದ್ದಾನೆ.
10ಅದರ ಕಂಬಗಳನ್ನು ಬೆಳ್ಳಿಯಿಂದಲೂ, ಕುಳಿತು ಒರಗಿಕೊಳ್ಳುವ ಆಸನವನ್ನು ಬಂಗಾರದಿಂದಲೂ, ಆಸನವನ್ನು ಧೂಮ್ರವರ್ಣದ ವಸ್ತ್ರದಿಂದ ಮಾಡಿಸಿದನು. ಅದರ ಮಧ್ಯಭಾಗವನ್ನು ಯೆರೂಸಲೇಮಿನ ಪುತ್ರಿಯರು ತಮ್ಮ ಪ್ರೀತಿಗೆ ಗುರುತಾಗಿ ಕಸೂತಿಯಿಂದ ಅಲಂಕರಿಸಿದರು.
11ಚೀಯೋನಿನ ಮಹಿಳೆಯರೇ, ಹೊರಟು ಬನ್ನಿ ರಾಜನಾದ ಸೊಲೊಮೋನನನ್ನು ನೋಡ ಬನ್ನಿ. ಅವನು ವಿವಾಹ ದಿನದ ಉತ್ಸವದಂದು ಆತನ ತಾಯಿ ಆತನಿಗೆ ತೊಡಿಸಿದ ಕಿರೀಟವನ್ನು ಆತ ಧರಿಸಿರುವುದನ್ನು ನೋಡಬನ್ನಿ!
WEBREATH · 11:11
«He himself gives everyone life and breath and everything else» — Acts 17:25
Breath is one for all: everyone lives by it, whoever they are and whatever they believe. Every day at 11:11 local time people stop for sixty seconds, breathe, and thank GOD for the breath — each in their own words, each within themselves. In that minute we are One Breath.
WEBREATH — the Minute at 11:11, your own local time — we are One Breath