ಪರಮಗೀತೆ 8
ನಿಮ್ಮ ಭಾಷೆಯಲ್ಲಿ ಇನ್ನೂ ಯಾವುದೇ ಅನುವಾದವಿಲ್ಲ — ಇಂಗ್ಲಿಷ್ ತೋರಿಸಲಾಗುತ್ತಿದೆ
1ನೀನು ನನ್ನ ತಾಯಿಯ ಹಾಲನ್ನು ಕುಡಿದ ನನ್ನ ಅಣ್ಣನ ಹಾಗಿದ್ದರೆ ಎಷ್ಟೋ ಚೆನ್ನಾಗಿತ್ತು! ನಾನು ನಿನ್ನನ್ನು ಹೊರಗೆ ಕಂಡೊಡನೆ ಮುದ್ದಿಟ್ಟರೂ ಯಾರೂ ಹೀನೈಸುತ್ತಿರಲಿಲ್ಲ.
2ನಿನ್ನನ್ನು ನನ್ನ ತಾಯಿಯ ಮನೆಗೆ ಕರೆದುಕೊಂಡು ಹೋಗುತ್ತಿದ್ದೆನು, ಅಲ್ಲಿ ಆಕೆಯು ನಿನಗೆ ಉಪದೇಶ ಮಾಡಬಹುದಾಗಿತ್ತು; ದ್ರಾಕ್ಷಿಯ ಮಿಶ್ರಪಾನವನ್ನು ಕೊಡುತ್ತಿದ್ದೆ, ನನ್ನ ದಾಳಿಂಬೆಯ ಸವಿರಸವನ್ನು ನಿನಗೆ ಕುಡಿಸುತ್ತಿದ್ದೆನು.
3ಆಗ ನಿನ್ನ ಎಡಗೈ ನನಗೆ ತಲೆದಿಂಬಾಗಿ ಬಲಗೈ ನನ್ನನ್ನು ತಬ್ಬುತ್ತಿತ್ತು.
4ಯೆರೂಸಲೇಮಿನ ಮಹಿಳೆಯರೇ, ಆತನು ತಾನಾಗಿ ಎಚ್ಚರಗೊಳ್ಳುವವರೆಗೆ ಯಾರೂ ನನ್ನ ಪ್ರಿಯನನ್ನು ಎಚ್ಚರಿಸದಿರಿ, ಆತನ ವಿಶ್ರಾಂತಿಗೆ ಯಾರೂ ಭಂಗ ಮಾಡದಿರಿ ಎಂದು ವನದ ಜಿಂಕೆ ಹರಿಣಗಳ ಮೇಲೆ ನಿಮ್ಮಿಂದ ಪ್ರಮಾಣಮಾಡಿಸುತ್ತೇನೆ.
5ನಲ್ಲನನ್ನು ಒರಗಿಕೊಂಡು ಅಡವಿಯಿಂದ ಬರುವ ಇವಳು ಯಾರು? ಎಬ್ಬಿಸಿದೆನಲ್ಲಾ ನಿನ್ನನ್ನು ಆ ಸೇಬಿನ ಮರದಡಿಯಲ್ಲಿ ಇಗೋ, ಅಲ್ಲಿ ನಿನ್ನ ತಾಯಿ ನಿನ್ನನ್ನು ಗರ್ಭಧರಿಸಿದ್ದು, ಅಲ್ಲೇ ನಿನ್ನನ್ನು ಪ್ರಸವವೇದನೆಯಿಂದ ಹೆತ್ತಳು.
6ನಿನ್ನ ಕೈಯಲ್ಲಿನ ಮುದ್ರೆಯ ಹಾಗೆ ನಿನ್ನ ಹೃದಯದ ಮೇಲೆ ನನ್ನನ್ನು ಧರಿಸಿಕೋ. ಪ್ರೀತಿ ಮೃತ್ಯುವಿನಷ್ಟು ಶಕ್ತಿಶಾಲಿ, ಪ್ರೀತಿದ್ರೋಹದಿಂದ ಹುಟ್ಟುವ ಮತ್ಸರವು ಪಾತಾಳದಷ್ಟು ಕ್ರೂರ, ಅದರ ಜ್ವಾಲೆಯು ಬೆಂಕಿಯ ಉರಿ, ಧಗಧಗಿಸುವ ಕೋಪಾಗ್ನಿ.
7ನಂದಿಸಲಾರವು ಪ್ರೀತಿಯನ್ನು ಜಲರಾಶಿಗಳು, ಮುಣುಗಿಸಲಾರವು ಅದನ್ನು ಪ್ರವಾಹಗಳು. ಪ್ರೀತಿಯನ್ನು ಗಳಿಸಲು ಮನೆಮಾರುಗಳನ್ನು ಮಾರಿದರೂ ಸಿಗುವುದು ಅವನಿಗೆ ತಿರಸ್ಕಾರ.
8ಸ್ತನಬಾರದ ತಂಗಿಯು ನಮಗುಂಟು; ಅವಳನ್ನು ವರಿಸಲು ಯಾರಾದರು ಬಂದರೆ ಅವಳ ಹಿತಕ್ಕೆ ಏನು ಮಾಡೋಣ?
9ಅವಳು ಕೋಟೆಯಾದರೆ ಅದರ ಮೇಲೆ ಬೆಳ್ಳಿಯ ಬುರುಜನ್ನು ಕಟ್ಟುವೆವು, ಬಾಗಿಲಾದರೆ ದೇವದಾರು ಹಲಗೆಗಳಿಂದ ಭದ್ರಪಡಿಸುವೆವು.
10ನಾನು ಕೋಟೆ; ನನ್ನ ಸ್ತನಗಳು ಅದರ ಬುರುಜುಗಳು, ಹೀಗಿದ್ದು ಅವನ ದೃಷ್ಟಿಯಲ್ಲಿ ನನಗೆ ದಯೆ ದೊರಕಿತ್ತು.
11ಸೊಲೊಮೋನನು ಬಾಲ್ಹಾಮೋನಿನಲ್ಲಿ ಇದ್ದ ತನ್ನ ದ್ರಾಕ್ಷಿ ತೋಟವನ್ನು ಗುತ್ತಿಗೆಗೆ ಕೊಟ್ಟನು, ಪ್ರತಿಯೊಬ್ಬ ಗುತ್ತಿಗೆದಾರ ತೆರಬೇಕಾಗಿತ್ತು ಸಾವಿರ ಬೆಳ್ಳಿ ನಾಣ್ಯಗಳನ್ನು .
12ಸೊಲೊಮೋನನೇ, ಆ ಸಾವಿರ ಬೆಳ್ಳಿ ನಾಣ್ಯ ನಿನಗಿರಲಿ, ಅದರ ಮೇಲ್ವಿಚಾರಕರಿಗೆ ಇನ್ನೂರು ನಾಣ್ಯ ಸೇರಲಿ; ನನ್ನದೇ ಆಗಿರುವ ನನ್ನ ತೋಟವು ನನ್ನ ವಶದಲ್ಲಿಯೇ ಇದೆ.
13ಉದ್ಯಾನದಲ್ಲಿ ವಾಸಿಸುವವಳೇ ಗೆಳೆಯರು ನಿನ್ನ ಧ್ವನಿ ಕೇಳಬೇಕೆಂದಿದ್ದಾರೆ, ನನಗೂ ಆ ಧ್ವನಿ ಕೇಳಿಸಲಿ.
14ಸುಗಂಧಸಸ್ಯದ ಪರ್ವತಗಳಲ್ಲಿ ಜಿಂಕೆಯಂತೆಯೂ, ಪ್ರಾಯದ ಹರಿಣದಂತೆಯೂ ತ್ವರೆಮಾಡಿ ಬಾ ನನ್ನಿನಿಯನೇ.
WEBREATH · 11:11
«He himself gives everyone life and breath and everything else» — Acts 17:25
Breath is one for all: everyone lives by it, whoever they are and whatever they believe. Every day at 11:11 local time people stop for sixty seconds, breathe, and thank GOD for the breath — each in their own words, each within themselves. In that minute we are One Breath.
WEBREATH — the Minute at 11:11, your own local time — we are One Breath