ತೀತನಿಗೆ 2
ನಿಮ್ಮ ಭಾಷೆಯಲ್ಲಿ ಇನ್ನೂ ಯಾವುದೇ ಅನುವಾದವಿಲ್ಲ — ಇಂಗ್ಲಿಷ್ ತೋರಿಸಲಾಗುತ್ತಿದೆ
1ನೀನಾದರೋ ಸ್ವಸ್ಥ ಬೋಧನೆಗೆ ಅನುಗುಣವಾಗಿ ಉಪದೇಶಮಾಡು.
2ವೃದ್ಧರು ಮದ್ಯಾಸಕ್ತಿಯಿಲ್ಲದವರೂ, ಗೌರವವುಳ್ಳವರೂ, ಜಿತೇಂದ್ರಿಯರೂ, ನಂಬಿಕೆ, ಪ್ರೀತಿ, ತಾಳ್ಮೆಯಲ್ಲಿ ಸ್ವಸ್ಥರು ಆಗಿರಬೇಕೆಂದು ಬೋಧಿಸು.
3ಹಾಗೆಯೇ, ವೃದ್ಧ ಸ್ತ್ರೀಯರು ಚಾಡಿಹೇಳುವವರೂ ಮದ್ಯಕ್ಕೆ ಅಧೀನರು ಆಗಿರದೆ ದೇವಭಕ್ತೆಯರಿಗೆ ಯೋಗ್ಯವಾದ ನಡತೆಯುಳ್ಳವರೂ, ಸದ್ಬೋಧಕಿಯರು ಆಗಿರಬೇಕು.
4ಇದಲ್ಲದೆ, ವೃದ್ಧ ಸ್ತ್ರೀಯರು ಪ್ರಾಯದ ಸ್ತ್ರೀಯರಿಗೆ ಮಾದರಿಯಾಗಿ, ತಮ್ಮ ಮೂಲಕ ದೇವರ ವಾಕ್ಯಕ್ಕೆ ದೂಷಣೆಯಾಗದಂತೆ ನಡೆದುಕೊಳ್ಳುವಂತೆ ತಿಳಿಸು. ಪ್ರಾಯದಸ್ತ್ರಿಯರು ಗಂಡಂದಿರನ್ನೂ, ಮಕ್ಕಳನ್ನೂ ಪ್ರೀತಿಸುವವರೂ, ವಿವೇಕವುಳ್ಳವರೂ, ಕ್ಷಮಾಶಿಲರೂ, ಪತಿವ್ರತೆಯರೂ
5ಸ್ವಂತಮನೆಗಾಗಿ ಕೆಲಸಮಾಡುವವರೂ, ಸುಶೀಲೆಯರೂ ಆಗಿ ತಮ್ಮ ಗಂಡಂದಿರಿಗೆ ವಿಧೇಯರಾಗಿರಬೇಕೆಂದು ಬುದ್ಧಿಹೇಳಬೇಕೆಂದು ನೀನು ವೃದ್ಧ ಸ್ತ್ರೀಯರಿಗೆ ಬೋಧಿಸು.
6ಹಾಗೆಯೇ ಯೌವನಸ್ಥರನ್ನು ಎಲ್ಲಾ ಸಂಗತಿಗಳಲ್ಲಿಯೂ ಸ್ವಸ್ಥ ಚಿತ್ತರಾಗಿರಬೇಕೆಂದು ಎಚ್ಚರಿಸು .
7ಸತ್ಕಾರ್ಯ ಮಾಡುವುದರಲ್ಲಿ ನೀನೇ ಮಾದರಿಯಾಗಿರು. ನೀನು ಮಾಡುವ ಉಪದೇಶದಲ್ಲಿ ಸತ್ಯವೂ ಗೌರವವೂ ಆಕ್ಷೇಪಣೆಗೆ ಅವಕಾಶವಿಲ್ಲದಂಥ ಸುಬುದ್ಧಿಯೂ ಇರಬೇಕು;
8ಆಗ ನಮಗೆ ಎದುರಾಳಿಗಳಾಗಿರುವವರು ನಮ್ಮ ವಿಷಯದಲ್ಲಿ ಕೆಟ್ಟದ್ದೇನೂ ಹೇಳುವುದಕ್ಕೆ ಆಸ್ಪದವಿಲ್ಲದೆ ನಾಚಿಕೊಳ್ಳುವರು.
9ಸೇವಕರು ತಮ್ಮ ಯಜಮಾನರಿಗೆ ವಿಧೇಯರಾಗಿದ್ದು ಅವರನ್ನು ಮೆಚ್ಚಿಸುವುದಕ್ಕೆ ಪ್ರಯತ್ನಪಡುತ್ತಾ ಎದುರುತ್ತರಕೊಡದೆ,
10ಯಾವುದನ್ನೂ ಕದ್ದಿಟ್ಟುಕೊಳ್ಳದೆ ಒಳ್ಳೆಯ ನಂಬಿಗಸ್ತರೆಂದು ಹೆಸರನ್ನು ಹೊಂದಲು, ನಮ್ಮ ರಕ್ಷಕನಾದ ದೇವರ ಉಪದೇಶಕ್ಕೆ ಎಲ್ಲಾ ವಿಷಯಗಳಲ್ಲಿ ಗೌರವ ತರುವಂತೆ ವರ್ತಿಸಬೇಕೆಂದು ಅವರಿಗೆ ಉಪದೇಶಿಸು.
11ಏಕೆಂದರೆ ಎಲ್ಲಾ ಮನುಷ್ಯರಿಗೆ ರಕ್ಷಣೆಯನ್ನುಂಟುಮಾಡುವ ದೇವರ ಕೃಪೆಯು ಪ್ರತ್ಯಕ್ಷವಾಯಿತು;
12ಅದು ಭಕ್ತಿಹೀನತೆಯನ್ನೂ, ಲೋಕದ ಆಸೆಗಳನ್ನೂ ತ್ಯಜಿಸಿ ಭಾಗ್ಯಕರವಾದ ನಿರೀಕ್ಷೆಯನ್ನು,
13ಅಂದರೆ ಮಹಾ ದೇವರ ಮತ್ತು ನಮ್ಮ ರಕ್ಷಕನಾದ ಯೇಸುಕ್ರಿಸ್ತನ ಮಹಿಮೆಪೂರ್ಣವಾದ ಪ್ರತ್ಯಕ್ಷತೆಯನ್ನು ಎದುರುನೋಡುತ್ತಾ ಇಹಲೋಕದಲ್ಲಿ ಸ್ವಸ್ಥಚಿತ್ತರಾಗಿಯೂ, ನೀತಿವಂತರಾಗಿಯೂ, ಭಕ್ತಿಯುಳ್ಳವರಾಗಿಯೂ ಜೀವಿಸಬೇಕೆಂದು ನಮಗೆ ಬೋಧಿಸುತ್ತದೆ.
14ಆತನು ನಮ್ಮನ್ನು ಸಕಲ ಅಧರ್ಮಗಳಿಂದ ಬಿಡುಗಡೆಮಾಡುವುದಕ್ಕೂ ಸತ್ಕ್ರಿಯೆಗಳಲ್ಲಿ ಆಸಕ್ತರಾದ ಸ್ವಕೀಯಜನರನ್ನು ತನಗಾಗಿ ಬೇರ್ಪಡಿಸಿ ಶುದ್ಧೀಕರಣ ಮಾಡುವುದಕ್ಕಾಗಿಯೂ ನಮಗೋಸ್ಕರ ತನ್ನನ್ನು ಒಪ್ಪಿಸಿಕೊಟ್ಟನು.
15ಈ ಕಾರ್ಯಗಳ ವಿಷಯದಲ್ಲಿ ಬೋಧಿಸುತ್ತಾ, ಎಚ್ಚರಿಸುತ್ತಾ, ಪೂರ್ಣ ಅಧಿಕಾರದಿಂದ ಖಂಡಿಸುತ್ತಾ ಇರು. ಯಾರೂ ನಿನ್ನನ್ನು ತಿರಸ್ಕರಿಸದ ಹಾಗೆ ನೋಡಿಕೋ.
WEBREATH · 11:11
«He himself gives everyone life and breath and everything else» — Acts 17:25
Breath is one for all: everyone lives by it, whoever they are and whatever they believe. Every day at 11:11 local time people stop for sixty seconds, breathe, and thank GOD for the breath — each in their own words, each within themselves. In that minute we are One Breath.
WEBREATH — the Minute at 11:11, your own local time — we are One Breath