ಜೆಕರ್ಯನು 13
ನಿಮ್ಮ ಭಾಷೆಯಲ್ಲಿ ಇನ್ನೂ ಯಾವುದೇ ಅನುವಾದವಿಲ್ಲ — ಇಂಗ್ಲಿಷ್ ತೋರಿಸಲಾಗುತ್ತಿದೆ
1ಆ ದಿನದಲ್ಲಿ ಪಾಪವನ್ನೂ, ಅಶುಚಿಯನ್ನೂ ಪರಿಹರಿಸತಕ್ಕ ಒಂದು ಬುಗ್ಗೆಯು ದಾವೀದ ವಂಶದವರಿಗೂ, ಯೆರೂಸಲೇಮಿನವರಿಗೂ ತೆರೆದಿರುವುದು.
2ಸೇನಾಧೀಶ್ವರನಾದ ಯೆಹೋವನು ಇಂತೆನ್ನುತ್ತಾನೆ, “ಆ ದಿನದಲ್ಲಿ ನಾನು ವಿಗ್ರಹಗಳನ್ನು ದೇಶದೊಳಗಿಂದ ನಿರ್ನಾಮಮಾಡುವೆನು, ಅವು ಇನ್ನು ಯಾರ ನೆನಪಿಗೂ ಬರುವುದಿಲ್ಲ; ಅಲ್ಲದೆ ಸುಳ್ಳು ಪ್ರವಾದಿಗಳನ್ನೂ, ದುರಾತ್ಮವನ್ನೂ ದೇಶದೊಳಗಿಂದ ತೊಲಗಿಸಿಬಿಡುವೆನು.
3ಆಗ ಯಾವನಾದರೂ ಮತ್ತೆ ಪ್ರವಾದನೆಮಾಡಿದರೆ ಅವನ ಹೆತ್ತ ತಾಯಿತಂದೆಗಳು ಅವನಿಗೆ, ‘ನೀನು ಉಳಿಯಬೇಡ; ಯೆಹೋವನ ಹೆಸರೆತ್ತಿ ಸುಳ್ಳಾಡುತ್ತಿ’ ಎಂದು ಹೇಳಿ ಆ ಹೆತ್ತ ತಾಯಿತಂದೆಗಳೇ ಅವನ ಪ್ರವಾದನೆಯ ನಿಮಿತ್ತ ಅವನನ್ನು ಇರಿದುಬಿಡುವರು.
4“ಆ ದಿನದಲ್ಲಿ ಯಾವ ಪ್ರವಾದಿಯೇ ಆಗಲಿ ಪ್ರವಾದನೆ ಮಾಡಬೇಕೆಂದಿರುವಾಗ ತನಗಾದ ದರ್ಶನವನ್ನು ಪ್ರಕಟಿಸಲು ನಾಚಿಕೆಪಡುವನು; ಯಾವನೂ ಮೋಸಕ್ಕಾಗಿ ಕಂಬಳಿಯನ್ನು ಹೊದ್ದುಕೊಳ್ಳನು;
5ಒಬ್ಬನು, ‘ನಾನು ಪ್ರವಾದಿಯಲ್ಲ, ಹೊಲದ ಕೆಲಸದವನು; ಚಿಕ್ಕ ವಯಸ್ಸಿನಿಂದಲೂ ರೈತನಾಗಿದ್ದೇನೆ. ’ ಎಂದು ಹೇಳಲು,
6ಮತ್ತೊಬ್ಬನು ಅವನನ್ನು, ‘ನಿನ್ನ ಎದೆಯ ಮೇಲಿರುವ ಈ ಗಾಯಗಳು ಏನು?’ ಎಂದು ಕೇಳಿದರೆ ಅವನು, ‘ಮಿತ್ರರ ಮನೆಯಲ್ಲಿ ನನಗಾದ ಗಾಯಗಳು’” ಎಂದು ಉತ್ತರ ಕೊಡುವನು.
7ಸೇನಾಧೀಶ್ವರನಾದ ಯೆಹೋವನು ಇಂತೆನ್ನುತ್ತಾನೆ, “ಖಡ್ಗವೇ, ನಾನು ನೇಮಿಸಿದ ಕುರುಬನೂ, ನನ್ನ ಸಂಗಡಿಗನೂ ಆಗಿರುವವನ ವಿರುದ್ಧ ಎಚ್ಚರಗೊಳ್ಳು; ಕುರುಬನನ್ನು ಹೊಡೆ, ಕುರಿಗಳು ಚದುರಿಹೋಗುವವು; ಮರಿಗಳ ಮೇಲೂ ಕೈಮಾಡಬೇಕೆಂದಿದ್ದೇನೆ.
8“ದೇಶದೊಳಗೆಲ್ಲಾ ಮೂರರಲ್ಲಿ ಎರಡು ಭಾಗದವರು ಹತರಾಗಿ ಸಾಯುವರು, ಮೂರನೆಯ ಭಾಗದವರು ಅಲ್ಲಿ ಉಳಿಯುವರು” ಇದು ಯೆಹೋವನ ನುಡಿ.
9“ಆ ಮೂರನೆಯ ಭಾಗದವರನ್ನು ನಾನು ಬೆಂಕಿಗೆ ಹಾಕಿ ಬೆಳ್ಳಿಯಂತೆ ಶೋಧಿಸುವೆನು, ಬಂಗಾರದ ಹಾಗೆ ಶುದ್ಧಿ ಮಾಡುವೆನು; ಅವರು ನನ್ನ ಹೆಸರೆತ್ತಿ ಪ್ರಾರ್ಥಿಸುವರು, ನಾನು ಆಲಿಸುವೆನು; ನಾನು, ‘ಇವರು ನನ್ನ ಜನರು’ ಅಂದುಕೊಳ್ಳುವೆನು. ಅವರು, ‘ನಮ್ಮ ದೇವರಾದ ಯೆಹೋವನೇ’ ಅನ್ನುವರು.”
WEBREATH · 11:11
«He himself gives everyone life and breath and everything else» — Acts 17:25
Breath is one for all: everyone lives by it, whoever they are and whatever they believe. Every day at 11:11 local time people stop for sixty seconds, breathe, and thank GOD for the breath — each in their own words, each within themselves. In that minute we are One Breath.
WEBREATH — the Minute at 11:11, your own local time — we are One Breath