ಜೆಕರ್ಯನು 8
ನಿಮ್ಮ ಭಾಷೆಯಲ್ಲಿ ಇನ್ನೂ ಯಾವುದೇ ಅನುವಾದವಿಲ್ಲ — ಇಂಗ್ಲಿಷ್ ತೋರಿಸಲಾಗುತ್ತಿದೆ
1ಸೇನಾಧೀಶ್ವರ ಯೆಹೋವನು ಈ ವಾಕ್ಯವನ್ನು ನನಗೆ ದಯಪಾಲಿಸಿದನು.
2ಸೇನಾಧೀಶ್ವರ ಯೆಹೋವನು ಇಂತೆನ್ನುತ್ತಾನೆ, “ಚೀಯೋನಿಗೆ ಅವಮಾನವಾಯಿತಲ್ಲಾ ಎಂದು ಬಹಳವಾಗಿ ಕುದಿಯುತ್ತೇನೆ. ಅತಿರೋಷಗೊಂಡು ಕುದಿಯುತ್ತೇನೆ.”
3ಯೆಹೋವನು ಇಂತೆನ್ನುತ್ತಾನೆ, “ನಾನು ಚೀಯೋನಿಗೆ ಹಿಂದಿರುಗಿದ್ದೇನೆ, ಯೆರೂಸಲೇಮಿನ ಮಧ್ಯದಲ್ಲಿ ವಾಸಿಸುವೆನು; ಆಗ ಯೆರೂಸಲೇಮ್ ಸತ್ಯದ ಪಟ್ಟಣವೆಂದು ಅನ್ನಿಸಿಕೊಳ್ಳುವುದು, ಸೇನಾಧೀಶ್ವರ ಯೆಹೋವನ ಪರ್ವತಕ್ಕೆ ಪರಿಶುದ್ಧ ಪರ್ವತವೆಂಬ ಹೆಸರು ಬರುವುದು.”
4ಸೇನಾಧೀಶ್ವರನಾದ ಯೆಹೋವನು ಇಂತೆನ್ನುತ್ತಾನೆ, “ಇನ್ನು ಮುಂದೆ ಯೆರೂಸಲೇಮಿನ ಚೌಕಗಳಲ್ಲಿ ಮುದುಕ ಮತ್ತು ಮುದುಕಿಯರು ಸೇರುವರು. ಅತಿ ವೃದ್ಧಾಪ್ಯದ ನಿಮಿತ್ತ ಪ್ರತಿಯೊಬ್ಬ ಮುದುಕನ ಕೈಯಲ್ಲಿ ಊರುಗೋಲಿರುವುದು.
5ಆ ಪಟ್ಟಣದ ಚೌಕಗಳಲ್ಲಿ ಆಟವಾಡುವ ಬಾಲಕ ಮತ್ತು ಬಾಲಕಿಯರು ತುಂಬಿಕೊಂಡಿರುವರು.”
6ಸೇನಾಧೀಶ್ವರನಾದ ಯೆಹೋವನು ಇಂತೆನ್ನುತ್ತಾನೆ, “ಆ ಕಾಲದ ಸ್ಥಿತಿಯು ಈ ಜನಶೇಷದವರ ದೃಷ್ಟಿಗೆ ಅತ್ಯಾಶ್ಚರ್ಯವಾದರೂ ನನ್ನ ದೃಷ್ಟಿಗೆ ಅತ್ಯಾಶ್ಚರ್ಯವೋ?” ಇದು ಸೇನಾಧೀಶ್ವರ ಯೆಹೋವನ ನುಡಿ.
7ಸೇನಾಧೀಶ್ವರನಾದ ಯೆಹೋವನು ಇಂತೆನ್ನುತ್ತಾನೆ, “ಇಗೋ, ನಾನು ನನ್ನ ಜನರನ್ನು ಪೂರ್ವದಿಕ್ಕಿನ ದೇಶದಿಂದಲೂ, ಪಶ್ಚಿಮದಿಕ್ಕಿನ ದೇಶದಿಂದಲೂ ಪಾರುಮಾಡಿ ಬರಗೊಳಿಸುವೆನು,
8ಅವರು ಯೆರೂಸಲೇಮಿನೊಳಗೆ ವಾಸಿಸುವರು; ಸತ್ಯಸಂಧತೆಯಿಂದಲೂ ಮತ್ತು ಸದ್ಧರ್ಮದಿಂದಲೂ ಅವರು ನನಗೆ ಪ್ರಜೆಯಾಗಿರುವರು. ಹಾಗೆಯೇ ನಾನು ಅವರಿಗೆ ದೇವರಾಗಿರುವೆನು.”
9ಸೇನಾಧೀಶ್ವರನಾದ ಯೆಹೋವನು ಇಂತೆನ್ನುತ್ತಾನೆ, “ದೇವಾಲಯವನ್ನು ಕಟ್ಟುವ ಉದ್ದೇಶದಿಂದ ಸೇನಾಧೀಶ್ವರ ಯೆಹೋವನ ಆ ಮಂದಿರದ ಅಸ್ತಿವಾರವನ್ನು ಹಾಕಿದ ಕಾಲದಲ್ಲಿಯೂ ಇದ್ದ ಪ್ರವಾದಿಗಳ ಬಾಯಿಂದ ಈ ಮಾತುಗಳನ್ನು ಈಗ ಕೇಳುವವರೇ, ನಿಮ್ಮ ಕೈಗಳು ಬಲಗೊಳ್ಳಲಿ!
10ಆ ಕಾಲಕ್ಕೆ ಮುಂಚೆ ಮನುಷ್ಯನಿಗಾಗಲಿ, ಪಶುವಿಗಾಗಲಿ ದುಡಿತದಿಂದ ಏನೂ ಜೀವನವಾಗುತ್ತಿರಲಿಲ್ಲ; ಹೋಗಿ ಬರುವವರಿಗೆ ಶತ್ರುಗಳ ದೆಸೆಯಿಂದ ಭಯವಿಲ್ಲದೆ ಇರಲಿಲ್ಲ; ಒಬ್ಬರನೊಬ್ಬರು ಎದುರಿಸುವಂತೆ ಎಲ್ಲರನ್ನೂ ಪ್ರೇರೇಪಿಸುತ್ತಿದ್ದರು.
11ಇಂದಿನಿಂದಲೋ ಈ ಜನಶೇಷದವರ ವಿಷಯದಲ್ಲಿ ನಾನು ಪೂರ್ವಕಾಲದಲ್ಲಿ ಇದ್ದಂತೆ ಇರುವುದಿಲ್ಲ” ಇದು ಸೇನಾಧೀಶ್ವರನಾದ ಯೆಹೋವನ ನುಡಿ.
12“ನೆಮ್ಮದಿಯ ಬೆಳೆಯಾಗುವುದು; ದ್ರಾಕ್ಷಾಲತೆಯು ಹಣ್ಣುಬಿಡುವುದು, ಭೂಮಿಯು ಧಾನ್ಯವನ್ನೀಯುವುದು, ಆಕಾಶವು ಇಬ್ಬನಿಯನ್ನು ಸುರಿಸುವುದು; ಈ ಜನಶೇಷದವರು ಇವುಗಳನ್ನೆಲ್ಲಾ ಅನುಭವಿಸುವಂತೆ ಅನುಗ್ರಹಿಸುವೆನು.
13ಯೆಹೂದ ಕುಲವೇ, ಇಸ್ರಾಯೇಲ್ ವಂಶವೇ, ನಿಮ್ಮ ಹೆಸರು ಹೇಗೆ ಜನಾಂಗಗಳಲ್ಲಿ ಶಾಪದ ಮಾತಾಗಿ ಸಲ್ಲುತ್ತಿತ್ತೋ, ಹಾಗೆಯೇ ನಾನು ನಿಮ್ಮನ್ನು ರಕ್ಷಿಸಿ ಆಶೀರ್ವದಿಸುವೆನು; ಹೆದರಬೇಡಿರಿ, ನಿಮ್ಮ ಕೈಗಳು ಬಲಗೊಳ್ಳಲಿ!”
14ಸೇನಾಧೀಶ್ವರನಾದ ಯೆಹೋವನು ಇಂತೆನ್ನುತ್ತಾನೆ, “ನಿಮ್ಮ ಪೂರ್ವಿಕರು ನನಗೆ ಸಿಟ್ಟೆಬ್ಬಿಸಿದಾಗ ನಿಮಗೆ ಕೇಡುಮಾಡಬೇಕೆಂದು ನಾನು ಕರುಣೆಯಿಲ್ಲದೆ ಸಂಕಲ್ಪಸಿದಂತೆ
15ಈ ಕಾಲದಲ್ಲಿಯೂ ಯೆರೂಸಲೇಮಿಗೂ, ಯೆಹೂದ ಕುಲಕ್ಕೂ ಮೇಲುಮಾಡಬೇಕೆಂದು ಹೊಸ ಸಂಕಲ್ಪ ಮಾಡಿಕೊಂಡಿದ್ದೇನೆ; ಹೆದರಬೇಡಿರಿ. ಇದು ಸೇನಾಧೀಶ್ವರನಾದ ಯೆಹೋವನ ನುಡಿ.
16“ನೀವು ಮಾಡಬೇಕಾದ ಕಾರ್ಯಗಳು ಇವೇ. ಪ್ರತಿಯೊಬ್ಬನೂ ತನ್ನ ನೆರೆಯವನ ಸಂಗಡ ನಿಜವನ್ನೇ ಆಡಲಿ; ನಿಮ್ಮ ಚಾವಡಿಗಳಲ್ಲಿ ಸತ್ಯವನ್ನೂ, ಸಮಾಧಾನವಾದ ನ್ಯಾಯವನ್ನೂ ಸ್ಥಾಪಿಸಿರಿ;
17ನಿಮ್ಮಲ್ಲಿ ಯಾವನೂ ತನ್ನ ಹೃದಯದಲ್ಲಿ ನೆರೆಯವನಿಗೆ ಕೇಡನ್ನು ಬಗೆಯದಿರಲಿ; ಸುಳ್ಳು ಸಾಕ್ಷಿಗೆ ಎಂದೂ ಸಂತೋಷಪಡಬೇಡಿರಿ; ನಾನು ಇವುಗಳನ್ನೆಲ್ಲಾ ದ್ವೇಷಿಸುವವನಾಗಿದ್ದೇನೆ; ಇದು ಯೆಹೋವನ ನುಡಿ.”
18“ಸೇನಾಧೀಶ್ವರ ಯೆಹೋವನು ಈ ವಾಕ್ಯವನ್ನು ನನಗೆ ದಯಪಾಲಿಸಿದನು.
19ಸೇನಾಧೀಶ್ವರನಾದ ಯೆಹೋವನು ಇಂತೆನ್ನುತ್ತಾನೆ, ‘ನಾಲ್ಕನೆಯ ತಿಂಗಳಿನ ಉಪವಾಸ, ಐದನೆಯ ತಿಂಗಳಿನ ಉಪವಾಸ, ಏಳನೆಯ ತಿಂಗಳಿನ ಉಪವಾಸ, ಹತ್ತನೆಯ ತಿಂಗಳಿನ ಉಪವಾಸ ಇವು ಯೆಹೂದ ವಂಶಕ್ಕೆ ವಿಶೇಷವಾದ ಹಬ್ಬಗಳಾಗಿ ಹರ್ಷೋಲ್ಲಾಸಗಳನ್ನು ಉಂಟುಮಾಡುವವು; ಹೀಗಿರಲು ಸತ್ಯವನ್ನೂ, ಸಮಾಧಾನವನ್ನೂ ಪ್ರೀತಿಸಿರಿ.’”
20ಸೇನಾಧೀಶ್ವರನಾದ ಯೆಹೋವನು ಇಂತೆನ್ನುತ್ತಾನೆ, “ಇನ್ನು ಮುಂದೆ ಜನಾಂಗಗಳೂ, ದೊಡ್ಡ ಪಟ್ಟಣಗಳ ನಿವಾಸಿಗಳೂ ಬರುವರು;
21ಒಂದು ಊರಿನವರು ಇನ್ನೊಂದು ಊರಿಗೆ ಹೋಗಿ, ‘ಯೆಹೋವನ ಪ್ರಸನ್ನತೆಯನ್ನು ಬೇಡುವುದಕ್ಕೂ, ಸೇನಾಧೀಶ್ವರ ಯೆಹೋವನನ್ನು ಆಶ್ರಯಿಸುವುದಕ್ಕೂ ಹೋಗೋಣ ಬನ್ನಿರಿ, ನಾವೂ ಹೋಗುತ್ತೇವೆ’ ಎಂದು ಹೇಳುವರು.
22ಹೀಗೆ ಬಹು ದೇಶಗಳವರೂ, ಬಲವಾದ ಜನಾಂಗಗಳವರೂ ಯೆರೂಸಲೇಮಿನಲ್ಲಿ ಸೇನಾಧೀಶ್ವರ ಯೆಹೋವನನ್ನು ಆಶ್ರಯಿಸುವುದಕ್ಕೂ ಯೆಹೋವನ ಪ್ರಸನ್ನತೆಯನ್ನು ಬೇಡುವುದಕ್ಕೂ ಬರುವರು.”
23ಸೇನಾಧೀಶ್ವರನಾದ ಯೆಹೋವನು ಇಂತೆನ್ನುತ್ತಾನೆ, “ಆ ಕಾಲದಲ್ಲಿ ಜನಾಂಗಗಳ ವಿವಿಧ ಭಾಷೆಗಳವರಾದ ಹತ್ತು ಜನರು ಯೆಹೂದ್ಯನೊಬ್ಬನ ಸೆರಗನ್ನು ಹಿಡಿದುಕೊಂಡು, ‘ನಾವು ನಿಮ್ಮೊಂದಿಗೆ ಬರುವೆವು, ಏಕೆಂದರೆ ದೇವರು ನಿಮ್ಮ ಸಂಗಡ ಇದ್ದಾನೆಂಬ ಸುದ್ದಿಯು ನಮ್ಮ ಕಿವಿಗೆ ಬಿದ್ದಿದೆ’” ಎಂದು ಹೇಳುವರು.
WEBREATH · 11:11
«He himself gives everyone life and breath and everything else» — Acts 17:25
Breath is one for all: everyone lives by it, whoever they are and whatever they believe. Every day at 11:11 local time people stop for sixty seconds, breathe, and thank GOD for the breath — each in their own words, each within themselves. In that minute we are One Breath.
WEBREATH — the Minute at 11:11, your own local time — we are One Breath