ಕ್ರಿಶ್ಚಿಯನ್ ಧರ್ಮ
ಹಿಂದೆ

ಚೆಫನ್ಯನು 2

ನಿಮ್ಮ ಭಾಷೆಯಲ್ಲಿ ಇನ್ನೂ ಯಾವುದೇ ಅನುವಾದವಿಲ್ಲ — ಇಂಗ್ಲಿಷ್ ತೋರಿಸಲಾಗುತ್ತಿದೆ

1ನಾಚಿಕೆಗೇಡಿ ಜನಾಂಗದವರೇ, ತೀರ್ಪು ಫಲಿಸುವುದರೊಳಗೆ, ಯೆಹೋವನ ಉಗ್ರಕೋಪವು ನಿಮ್ಮ ಮೇಲೆ ಬರುವುದಕ್ಕೆ ಮೊದಲೇ ಯೆಹೋವನ ಸಿಟ್ಟಿನ ದಿನವೂ ಉರಿದು ನಿಮ್ಮ ಮೇಲೆ ಬರುವುದಕ್ಕಿಂತ ಮೊದಲೇ, ನೀವೆಲ್ಲರೂ ಸೇರಿ ಬನ್ನಿರಿ, ಒಟ್ಟಾಗಿ ಕೂಡಿರಿ.

2ಆ ಕಾಲವು ಹೊಟ್ಟಿನಂತೆ ಹಾರಿಹೋಗುತ್ತದಲ್ಲಾ.

3ಯೆಹೋವನ ನಿಯಮವನ್ನು ಕೈಕೊಂಡು ನಡೆಯುವ ಲೋಕದ ದೀನರೇ, ನೀವೆಲ್ಲರೂ ಯೆಹೋವನ ನೀತಿಯನ್ನು ಅನುಸರಿಸಿರಿ, ಧರ್ಮವನ್ನು ಅಭ್ಯಾಸಿಸಿರಿ, ನಮ್ರತೆಯನ್ನು ಹೊಂದಿಕೊಳ್ಳಿರಿ; ಬಹುಶಃ ಯೆಹೋವನ ಸಿಟ್ಟಿನ ದಿನದಲ್ಲಿ ನೀವು ಮರೆಯಾಗುವಿರಿ.

4ಗಾಜ ಪಟ್ಟಣ ನಿರ್ಜನವಾಗುವುದು, ಅಷ್ಕೆಲೋನ್ ಹಾಳಾಗುವುದು, ಅಷ್ಡೋದ್ ನಿವಾಸಿಗಳನ್ನು ನಡು ಮಧ್ಯಾಹ್ನದಲ್ಲಿ ಆಕ್ರಮಿಸಿ ಓಡಿಸಿಬಿಡುವರು, ಎಕ್ರೋನ್ ನಗರ ನಿರ್ಮೂಲವಾಗುವುದು.

5ಅಯ್ಯೋ, ಕರಾವಳಿಯಲ್ಲಿ ವಾಸಿಸುವ ಕೆರೇತ್ಯ ಜನಾಂಗವೇ, ನಿನ್ನ ಗತಿಯನ್ನು ಏನು ಹೇಳಲಿ! ಕಾನಾನೇ, ಫಿಲಿಷ್ಟಿಯ ದೇಶವೇ, ಯೆಹೋವನ ನುಡಿಯು ನಿನಗೆ ವಿರುದ್ಧವಾಗಿದೆ; ನಿನ್ನಲ್ಲಿ ವಾಸಿಸುವ ಜನರೇ ನಿಲ್ಲದಂತೆ ನಿನ್ನನ್ನು ನಾಶಮಾಡುವೆನು.

6ಸಮುದ್ರ ತೀರದ ಆ ಪ್ರಾಂತ್ಯವು ಹುಲ್ಲುಗಾವಲಾಗಿ, ಕುರುಬರ ಗುಡಿಸಲಾಗಿ, ಹಿಂಡುಗಳ ದೊಡ್ಡಿಗಳು ಇವೇ ಅಲ್ಲಿರುವವು.

7ಆ ಕರಾವಳಿಯು ಉಳಿದ ಯೆಹೂದ್ಯರ ಪಾಲಾಗುವುದು; ದನಕುರಿಗಳನ್ನು ಅಲ್ಲೇ ಮೇಯಿಸುವರು; ಸಂಜೆಗೆ ಅಷ್ಕೆಲೋನಿನ ಮನೆಗಳಲ್ಲಿ ಮಲಗಿಕೊಳ್ಳುವರು; ಅವರ ದೇವರಾದ ಯೆಹೋವನು ಅವರನ್ನು ಪರಾಂಬರಿಸಿ ಅವರ ದುರವಸ್ಥೆಯನ್ನು ತಪ್ಪಿಸುವನು.

8ಮೋವಾಬ್ಯರೂ, ಅಮ್ಮೋನ್ಯರೂ ಅಹಂಕಾರದಿಂದ ನನ್ನ ಜನರ ಮೇರೆಯನ್ನು ಮೀರಿ, ಅವರನ್ನು ನಿಂದಿಸಿ, ಅವರ ಮೇಲೆ ಹೊರಿಸಿರುವ ದೂರುದೂಷಣೆಗಳು ನನ್ನ ಕಿವಿಗೆ ಬಿದ್ದಿವೆ.

9ಇಸ್ರಾಯೇಲರ ದೇವರಾದ ಸೇನಾಧೀಶ್ವರನಾದ ಯೆಹೋವನು ಇಂತೆನ್ನುತ್ತಾನೆ, “ನನ್ನ ಜೀವದಾಣೆ, ಸೊದೋಮಿನ ಗತಿಯೇ ಮೋವಾಬಿಗೂ ಆಗುವುದು. ಗೊಮೋರದ ದುರ್ದಶೆಯೇ ಅಮ್ಮೋನ್ಯರಿಗೆ ಸಂಭವಿಸುವುದು; ಆ ಪ್ರಾಂತ್ಯಗಳು ಮುಳ್ಳುಗಿಡಗಳಿಂದಲೂ, ಸೌಳುಗುಂಡಿಗಳಿಂದಲೂ ತುಂಬಿಕೊಂಡು ನಿತ್ಯ ನಾಶನಕ್ಕೆ ಈಡಾಗುವವು; ನನ್ನ ಜನರಲ್ಲಿ ಉಳಿದವರು ಅವುಗಳನ್ನು ಸೂರೆಮಾಡುವರು. ಅಳಿದುಳಿದ ನನ್ನ ಜನರಿಗೆ ಅವು ಸ್ವಾಸ್ತ್ಯವಾಗುವವು .”

10ಆ ಪ್ರಾಂತ್ಯಗಳವರು ಸೇನಾಧೀಶ್ವರನಾದ ಯೆಹೋವನ ಜನರನ್ನು ದೂಷಿಸಿ, ಅವರ ಮೇಲೆ ಉಬ್ಬಿಕೊಂಡು ಬಂದುದ್ದರಿಂದ ಅವರ ಅಹಂಕಾರದ ನಿಮಿತ್ತವೇ ಅವರಿಗೆ ಈ ಗತಿಯಾಗುವುದು!

11ಯೆಹೋವನು ಅವರಿಗೆ ಭಯಂಕರನಾಗುವನು; ಲೋಕದ ದೇವರುಗಳನ್ನೆಲ್ಲಾ ನಾಶಮಾಡುವನು; ಸಮಸ್ತ ಜನರು, ಪ್ರತಿಯೊಂದು ಪ್ರಾಂತ್ಯದ ನಿವಾಸಿಗಳು ಸಕಲ ಜನಾಂಗಗಳವರು ತಮ್ಮ ತಮ್ಮ ಸ್ಥಳಗಳಲ್ಲೇ ಆತನನ್ನು ಆರಾಧಿಸುವರು.

12ಕೂಷಿನವರೇ, ನೀವು ಸಹ ನನ್ನ ಖಡ್ಗದಿಂದ ಹತರಾಗುವಿರಿ.

13ಯೆಹೋವನು ಉತ್ತರಕ್ಕೆ ಕೈಚಾಚಿ ಅಶ್ಶೂರವನ್ನು ಧ್ವಂಸ ಮಾಡುವನು; ನಿನವೆಯನ್ನು ಹಾಳುಮಾಡಿ ನೀರಿಲ್ಲದ ಮರುಭೂಮಿಯಂತೆ ಒಣಗಿಸಿಬಿಡುವನು.

14ಜನಾಂಗಗಳ ಪಶುಗಳೆಲ್ಲಾ ಮಂದೆಮಂದೆಯಾಗಿ ಅದರ ಮಧ್ಯದಲ್ಲಿ ಮಲಗಿಕೊಳ್ಳುವವು; ಕೊಕ್ಕರೆಯೂ, ಮುಳ್ಳುಹಂದಿಯೂ ಹಟ್ಟಿಗಳಲ್ಲಿ ವಾಸಮಾಡಿಕೊಳ್ಳುವವು. ಗೂಬೆಯು ಕಿಟಕಿಗಳಲ್ಲಿ ಮನೆಕಂಬಗಳ ಮೇಲೆ ಚಿಲಿಪಿಲಿ ಗಾನವು ತಂಗುವವು; ಕಾಗೆಗಳ ಕೂಗು ಹೊಸ್ತಿಲುಗಳಲ್ಲಿ ಕೇಳುವುದು; ದೇವದಾರು ಹಲಿಗೆಯ ಹೊದಿಕೆಯು ಕೀಳಲ್ಪಡುವುದು.

15ಈ ನಿನವೆಯು ಮೊದಲು ಉಲ್ಲಾಸದ ನಗರಿಯಾಗಿ ನೆಮ್ಮದಿಯಿಂದ ನೆಲೆಗೊಂಡಿದ್ದು ತನ್ನ ಹೃದಯದೊಳಗೆ, “ನಾನೇ ಇರುವವಳು, ನನ್ನ ಹೊರತು ಇನ್ನು ಯಾರೂ ಇಲ್ಲ” ಅಂದುಕೊಳ್ಳುತ್ತಿತ್ತು; ಅಯ್ಯೋ, ಎಷ್ಟೋ ಹಾಳಾಗಿ ಹೋಗಿ ಮೃಗಗಳು ತಂಗುವ ಕೊಟ್ಟಿಗೆಯ ಬೀಡಾಗಿದೆ! ಅದರ ಮುಂದೆ ಹಾದುಹೋಗುವವರೆಲ್ಲರು ಸಿಳ್ಳು ಹಾಕಿ ಅಪಹಾಸ್ಯ ಮಾಡುತ್ತಾರೆ.

ಮೂಲ: ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

WEBREATH · 11:11

«He himself gives everyone life and breath and everything else» — Acts 17:25

Breath is one for all: everyone lives by it, whoever they are and whatever they believe. Every day at 11:11 local time people stop for sixty seconds, breathe, and thank GOD for the breath — each in their own words, each within themselves. In that minute we are One Breath.

WEBREATH — the Minute at 11:11, your own local time — we are One Breath