ಇಸ್ಲಾಂ
ಹಿಂದೆ

54. ಅಲ್-ಕಮರ್

ನಿಮ್ಮ ಭಾಷೆಯಲ್ಲಿ ಇನ್ನೂ ಯಾವುದೇ ಅನುವಾದವಿಲ್ಲ — ಇಂಗ್ಲಿಷ್ ತೋರಿಸಲಾಗುತ್ತಿದೆ

1ಇನ್ನಾದರೂ, ನೀವು ಅಲ್ಲಾಹನಿಗೆ ಸಾಷ್ಟಾಂಗ ವಂದಿಸಿರಿ ಮತ್ತು ಅವನನ್ನೇ ಆರಾಧಿಸಿರಿ

2(ಲೋಕಾಂತ್ಯದ) ಆ ಕ್ಷಣವು ಸಮೀಪಿಸಿತು ಮತ್ತು ಚಂದ್ರವು ಸೀಳಿಹೋಯಿತು

3ಅವರು ಯಾವುದಾದರೂ ಪುರಾವೆಯನ್ನು ಕಂಡಾಗ ಮುಖ ತಿರುಗಿಸಿಕೊಳ್ಳುತ್ತಾರೆ ಮತ್ತು ಇದು ತೀರ ತಾತ್ಕಾಲಿಕ ಜಾದೂಗಾರಿಕೆ ಎನ್ನುತ್ತಾರೆ

4ಅವರು (ಸತ್ಯವನ್ನು) ತಿರಸ್ಕರಿಸಿದರು ಮತ್ತು ಸ್ವೇಚ್ಛೆಯನ್ನು ಅನುಸರಿಸಿದರು. ನಿಜವಾಗಿ, ಎಲ್ಲ ವಿಷಯಗಳಿಗೂ ಒಂದು ಕಾಲ ನಿಶ್ಚಿತವಾಗಿರುತ್ತದೆ

5ಖಂಡಿತ, ಪಾಠದಾಯಕ ಮಾಹಿತಿಗಳು ಅವರ ಬಳಿಗೆ ಬಂದಿವೆ

6ಪರಿಪೂರ್ಣ ಜಾಣ್ಮೆಯ (ಉಪದೇಶವು ತಲುಪಿದೆ). ಆದರೆ ಎಚ್ಚರಿಸುವವರಿಂದ ಅವರಿಗೇನೂ ಲಾಭವಾಗಿಲ್ಲ

7(ದೂತರೇ,) ನೀವು ಅವರನ್ನು ಕಡೆಗಣಿಸಿಬಿಡಿರಿ. (ಶೀಘ್ರದಲ್ಲೇ) ಕರೆಯುವವನೊಬ್ಬನು ತೀರಾ ಅಪ್ರಿಯವಾದುದರ ಕಡೆಗೆ (ಅವರನ್ನು) ಕರೆಯುವನು

8ಆಗ ಅವರ ದೃಷ್ಟಿಗಳು ತಗ್ಗಿರುವವು. ಅವರು ಚದುರಿದ ಮಿಡತೆಗಳೋ ಎಂಬಂತೆ ಗೋರಿಗಳಿಂದ ಎದ್ದು ಬರುವರು

9ಕೂಗುವಾತನೆಡೆಗೆ ಅವರು ಧಾವಿಸುತ್ತಿರುವರು. ಅಂದು ಧಿಕ್ಕಾರಿಯು ಹೇಳುವನು; ಇದು ತುಂಬಾ ಕಠಿಣ ದಿನ

10ಅವರಿಗಿಂತ ಹಿಂದೆ ನೂಹ್‌ರ ಜನಾಂಗವು (ಸತ್ಯವನ್ನು) ತಿರಸ್ಕರಿಸಿತ್ತು. ಅವರು, ನಮ್ಮ ದಾಸರನ್ನು ತಿರಸ್ಕರಿಸಿದ್ದರು ಮತ್ತು ಅವರನ್ನು ಹುಚ್ಚನೆಂದು ಕರೆದರು ಹಾಗೂ ಅವರಿಗೆ ಬೆದರಿಕೆ ಒಡ್ಡಿದರು

11ಕೊನೆಗೆ ಅವರು (ನೂಹರು), ನಾನಿದೋ ಸೋತು ಹೋಗಿದ್ದೇನೆ. ಇದೀಗ ನೀನೇ ಪ್ರತೀಕಾರ ತೀರಿಸು ಎಂದು ತಮ್ಮ ಒಡೆಯನಿಗೆ ಮೊರೆ ಇಟ್ಟರು

12ನಾವು, ಧಾರಾಳವಾಗಿ ಸುರಿಯುವ ಮಳೆಯ ಮೂಲಕ ಆಕಾಶದ ಬಾಗಿಲುಗಳನ್ನು ತೆರೆದುಬಿಟ್ಟೆವು

13ಮತ್ತು ನಾವು ಭೂಮಿಯಿಂದ ಚಿಲುಮೆಗಳನ್ನು ಹರಿಸಿಬಿಟ್ಟೆವು. ಕೊನೆಗೆ, ಮೊದಲೇ ನಿರ್ಧಾರವಾಗಿದ್ದ ಒಂದು ಕಾರ್ಯಕ್ಕಾಗಿ ನೀರು ಸಂಗ್ರಹವಾಯಿತು

14ಮತ್ತು ನಾವು ಅವರನ್ನು (ನೂಹರನ್ನು), ಹಲಗೆಗಳು ಹಾಗೂ ಮೊಳೆಗಳಿದ್ದ ವಸ್ತುವಿಗೆ (ಹಡಗಿಗೆ) ಹತ್ತಿಸಿದೆವು

15ಅದು ನಮ್ಮ ಕಣ್ಣ ಮುಂದೆಯೇ (ನಮ್ಮ ಕಾವಲಿನಲ್ಲಿ) ಚಲಿಸುತ್ತಿತ್ತು. (ಹೀಗಿತ್ತು) ಧಿಕ್ಕರಿಸಲ್ಪಟ್ಟವನ ಪರವಾಗಿ ತೀರಿಸಲಾದ ಪ್ರತೀಕಾರ

16ಮತ್ತು ನಾವು ಅದನ್ನು ಒಂದು ಪುರಾವೆಯಾಗಿ ಉಳಿಸಿದೆವು. ಪಾಠ ಕಲಿಯುವವರು ಯಾರಾದರೂ ಇದ್ದಾರೆಯೇ

17(ನೋಡಿರಿ,) ಹೇಗಿತ್ತು ನನ್ನ ಶಿಕ್ಷೆ ಹಾಗೂ ಎಚ್ಚರಿಕೆ

18ನಾವು ಉಪದೇಶಕ್ಕಾಗಿ ಕುರ್‌ಆನನ್ನು ಸರಳಗೊಳಿಸಿರುವೆವು. ಯಾರಾದರೂ ಇದ್ದಾರೆಯೇ, ಉಪದೇಶ ಸ್ವೀಕರಿಸುವವರು

19ಆದ್ ಜನಾಂಗದವರೂ (ಸತ್ಯವನ್ನು) ತಿರಸ್ಕರಿಸಿದ್ದರು. (ಅವರ ವಿಷಯದಲ್ಲೂ) ಹೇಗಿತ್ತು ನನ್ನ ಶಿಕ್ಷೆ ಹಾಗೂ ಎಚ್ಚರಿಕೆ

20ಒಂದು ಅಶುಭ ದಿನದಂದು, ನಾವು ಅವರ ವಿರುದ್ಧ ಪ್ರಚಂಡ ಬಿರುಗಾಳಿಯನ್ನು ಕಳಿಸಿದೆವು. ಅದು ಬೀಸುತ್ತಲೇ ಇತ್ತು

21ಅದು ಜನರನ್ನು, ಉರುಳಿ ಬಿದ್ದ ಖರ್ಜೂರ ಗಿಡದ ಬುಡಗಳೆಂಬಂತೆ ಕಿತ್ತೆಸೆಯುತ್ತಿತ್ತು

22ಹೇಗಿತ್ತು, ನನ್ನ ಶಿಕ್ಷೆ ಹಾಗೂ ಎಚ್ಚರಿಕೆ

23ಉಪದೇಶಕ್ಕಾಗಿ, ನಾವು ಕುರ್‌ಆನನ್ನು ಸರಳಗೊಳಿಸಿರುವೆವು. ಯಾರಾದರೂ ಇದ್ದಾರೆಯೇ, ಉಪದೇಶ ಸ್ವೀಕರಿಸುವವರು

24ಸಮೂದ್ ಜನಾಂಗದವರು, ಎಚ್ಚರಿಸುವವರನ್ನು ತಿರಸ್ಕರಿಸಿದರು

25ಅವರು ಹೇಳಿದರು; ನಾವೇನು, ನಮ್ಮೊಳಗಿನ ಒಬ್ಬ ಮಾನವನನ್ನು ಹಿಂಬಾಲಿಸಬೇಕೇ? ಹಾಗೆ ಮಾಡಿದರೆ ನಾವು ದಾರಿಗೆಟ್ಟವರು ಹಾಗೂ ಹುಚ್ಚರಾಗಿ ಬಿಡುವೆವು

26ನಮ್ಮ ಪೈಕಿ ಅವನಿಗೆ ದಿವ್ಯ ಬೋಧನೆಯನ್ನು ಇಳಿಸಿಕೊಡಲಾಗಿದೆಯೇ? ಅವನಂತು ಸುಳ್ಳುಗಾರ ಹಾಗೂ ತನ್ನನ್ನೇ ಹೊಗಳುವವನಾಗಿದ್ದಾನೆ

27ಸುಳ್ಳುಗಾರ ಮತ್ತು ತನ್ನನ್ನೇ ಹೊಗಳುವವನು ಯಾರೆಂಬುದು ಅವರಿಗೆ ನಾಳೆ ತಿಳಿಯಲಿದೆ

28ನಾವು ಅವರ ಪಾಲಿಗೆ ಪರೀಕ್ಷೆಯಾಗಿ ಒಂದು ಹೆಣ್ಣೊಂಟೆಯನ್ನು ಕಳಿಸುವೆವು (ಸಾಲಿಹರೇ,) ನೀವು ಅವರನ್ನು ನೋಡುತ್ತಲಿರಿ ಹಾಗೂ ಸಹನಶೀಲರಾಗಿರಿ

29ಮತ್ತು ನೀರನ್ನು ಅವರ ನಡುವೆ ಹಂಚಲಾಗಿದೆ. ಪ್ರತಿಯೊಬ್ಬರೂ ನೀರು ಕುಡಿಯುವ ತಮ್ಮ ಸರದಿಯ ವೇಳೆ ಹಾಜರಿರಬೇಕು ಎಂದು ಅವರಿಗೆ ತಿಳಿಸಿರಿ (ಎನ್ನಲಾಯಿತು)

30ಅವರು (ಊರವರು) ತಮ್ಮ ಸಂಗಾತಿಯನ್ನು ಕರೆದರು. ಅವನು ಅತಿಕ್ರಮಕ್ಕಿಳಿದನು ಹಾಗೂ ಅವನು (ಒಂಟೆಯನ್ನು) ಕಡಿದು ಬಿಟ್ಟನು

31ಕೊನೆಗೆ, ಹೇಗಿತ್ತು ನನ್ನ ಶಿಕ್ಷೆ ಮತ್ತು ನನ್ನ ಎಚ್ಚರಿಕೆ (ಎಂಬುದನ್ನು ನೋಡಿರಿ)

32ನಾವು ಅವರ ಮೇಲೆ ಒಂದೇ ಒಂದು ಅಬ್ಬರದ ಸಿಡಿಲನ್ನು ಎರಗಿಸಿಬಿಟ್ಟೆವು. ಅಷ್ಟಕ್ಕೇ ಅವರು ಒಣ ಹುಲ್ಲಿನಂತಾಗಿ ಬಿಟ್ಟರು

33ನಾವು ಉಪದೇಶಕ್ಕಾಗಿ ಕುರ್‌ಆನನ್ನು ಸರಳಗೊಳಿಸಿರುವೆವು. ಉಪದೇಶ ಸ್ವೀಕರಿಸುವವನು ಯಾರಾದರೂ ಇದ್ದಾನೆಯೇ

34ಲೂತ್‌ರ ಜನಾಂಗದವರು, ಎಚ್ಚರಿಸುವವರನ್ನು ತಿರಸ್ಕರಿಸಿದರು

35ನಾವು ಅವರ ಮೇಲೆ ಕಲ್ಲುಗಳನ್ನು ಸುರಿಸುವ ಬಿರುಗಾಳಿಯನ್ನು ಎರಗಿಸಿದೆವು – ಲೂತ್‌ರ ಮನೆಯವರ ಹೊರತು. ಅವರನ್ನು ನಾವು ಮುಂಜಾವಿನ ಸಮಯದಲ್ಲೇ ರಕ್ಷಿಸಿದೆವು

36ಅದು ನಮ್ಮ ವತಿಯಿಂದ (ನೀಡಲಾದ) ಕೊಡುಗೆಯಾಗಿತ್ತು. ಕೃತಜ್ಞನಾದವನನ್ನು ನಾವು ಇದೇ ರೀತಿ ಪುರಸ್ಕರಿಸುತ್ತೇವೆ

37ಅವರು (ಲೂತರು) ನಮ್ಮ ಶಿಕ್ಷೆಯ ಕುರಿತು ಅವರನ್ನು (ತಮ್ಮ ಜನಾಂಗದವರನ್ನು) ಎಚ್ಚರಿಸಿದ್ದರು. ಆದರೆ ಅವರು ಆ ಎಚ್ಚರಿಕೆಯ ಕುರಿತು ಜಗಳಾಡ ತೊಡಗಿದರು

38ಮತ್ತು ಅವರು, ಅವರ (ಲೂತರ) ಅತಿಥಿಗಳನ್ನು ಅವರಿಂದ ಕಸಿದುಕೊಳ್ಳ ಬಯಸಿದರು. ಆಗ ನಾವು ಅವರ ಕಣ್ಣುಗಳನ್ನು ಅಳಿಸಿಬಿಟ್ಟೆವು – ಸವಿಯಿರಿ ನನ್ನ ಶಿಕ್ಷೆಯನ್ನು ಹಾಗೂ ಎಚ್ಚರಿಕೆಯನ್ನು

39ಮುಂಜಾನೆಯೇ ಅವರ ಮೇಲೆ ಶಾಶ್ವತ ಶಿಕ್ಷೆಯೊಂದು ಎರಗಿಬಿಟ್ಟಿತು

40ಸವಿಯಿರಿ ನನ್ನ ಶಿಕ್ಷೆಯನ್ನು ಹಾಗೂ ಎಚ್ಚರಿಕೆಯನ್ನು

41ನಾವು ಕುರ್‌ಆನನ್ನು ಉಪದೇಶಕ್ಕಾಗಿ ಸರಳಗೊಳಿಸಿರುವೆವು. ಯಾರಾದರೂ ಇದ್ದಾನೆಯೇ, ಉಪದೇಶ ಸ್ವೀಕರಿಸುವವನು

42ಮತ್ತು ಫಿರ್‌ಔನನ ಜನಾಂಗದವರ ಬಳಿಗೂ ಎಚ್ಚರಿಸುವವರು ಬಂದಿದ್ದರು

43ಅವರು ನಮ್ಮ ಎಲ್ಲ ಪುರಾವೆಗಳನ್ನೂ ತಿರಸ್ಕರಿಸಿದರು. ಕೊನೆಗೆ ನಾವು ಅವರನ್ನು ಹಿಡಿದೆವು. ಅದು ಭಾರೀ ಪ್ರಬಲನೂ ಬಲಿಷ್ಠನೂ ಆಗಿರುವವನ ಹಿಡಿತವಾಗಿತ್ತು

44ನಿಮ್ಮಲ್ಲಿನ ಧಿಕ್ಕಾರಿಗಳೇನು ಅವರಿಗಿಂತ ಉತ್ತಮರೇ? ಅಥವಾ (ಗತಕಾಲದ) ದಿವ್ಯ ಗ್ರಂಥಗಳಲ್ಲಿ ನಿಮಗೇನಾದರೂ ಕ್ಷಮಾ ಪತ್ರ ನೀಡಲಾಗಿದೆಯೇ

45ನಾವು ಪ್ರತೀಕಾರ ತೀರಿಸಬಲ್ಲ (ಶಕ್ತಿಶಾಲಿ) ಪಡೆಯಾಗಿದ್ದೇವೆ ಎಂದು ಅವರು ಹೇಳಿಕೊಳ್ಳುತ್ತಿದ್ದಾರೆಯೇ

46ಬಹು ಬೇಗನೇ ಆ ಪಡೆ ಸೋತು ಹೋಗಲಿದೆ ಮತ್ತು ಅವರು ಬೆನ್ನು ತಿರುಗಿಸಿ ಓಡಲಿದ್ದಾರೆ

47ಅವರಿಗೆ (ಪುನರುತ್ಥಾನದ) ಆ ಕ್ಷಣದ ವಾಗ್ದಾನ ಮಾಡಲಾಗಿದೆ ಮತ್ತು ಆ ಕ್ಷಣವು ತುಂಬಾ ಕಠಿಣ ಹಾಗೂ ಅಸಹನೀಯವಾಗಿರುವುದು

48ಖಂಡಿತವಾಗಿಯೂ ಅಪರಾಧಿಗಳು ದಾರಿಗೆಟ್ಟಿದ್ದಾರೆ ಹಾಗೂ ಸಂಪೂರ್ಣ ಅಜ್ಞಾನದ ಸ್ಥಿತಿಯಲ್ಲಿದ್ದಾರೆ

49ಅವರ ಮುಖಗಳನ್ನು ನೆಲಕ್ಕೆ ಒರಗಿಸಿ ಅವರನ್ನು ಎಳೆಯುತ್ತಾ ನರಕಕ್ಕೆ ಸಾಗಿಸಲಾಗುವ ದಿನ ‘‘ಸವಿಯಿರಿ ಬೆಂಕಿಯ ಉರಿಯನ್ನು’’ (ಎಂದು ಅವರೊಡನೆ ಹೇಳಲಾಗುವುದು)

50ನಾವು ಪ್ರತಿಯೊಂದು ವಸ್ತುವನ್ನೂ ನಿರ್ದಿಷ್ಟ ಪ್ರಮಾಣದಲ್ಲಿ ಸೃಷ್ಟಿಸಿರುವೆವು

51ಮತ್ತು ನಮ್ಮ ಆದೇಶವು ಕಣ್ಮುಚ್ಚಿ ತೆರೆಯುವಷ್ಟು ಕ್ಷಿಪ್ರವಾದ ಕೇವಲ ಒಂದು ಸೂಚನೆಯಾಗಿರುತ್ತದೆ

52ನಾವು ನಿಮ್ಮ ಸಹವರ್ತಿಗಳನ್ನು ನಾಶ ಮಾಡಿರುವೆವು. ಯಾರಾದರೂ ಇದ್ದಾನೆಯೇ, ಉಪದೇಶ ಸ್ವೀಕರಿಸುವವನು

53ಅವರು ಮಾಡಿದ್ದೆಲ್ಲವೂ ಗ್ರಂಥಗಳಲ್ಲಿ ದಾಖಲಾಗಿದೆ

54ಸಣ್ಣ ಹಾಗೂ ದೊಡ್ಡ ಎಲ್ಲ ವಿಷಯಗಳೂ ಲಿಖಿತವಾಗಿವೆ

55ಧರ್ಮನಿಷ್ಠರು ಖಂಡಿತ ಭವ್ಯ ತೋಟಗಳಲ್ಲಿ ಹಾಗೂ ನದಿಗಳಲ್ಲಿರುವರು

ಮೂಲ: Abdussalam Puthige

WEBREATH · 11:11

«If you are thankful, I will give you more» — Quran 14:7

Breath is one for all: everyone lives by it, whoever they are and whatever they believe. Every day at 11:11 local time people stop for sixty seconds, breathe, and thank GOD for the breath — each in their own words, each within themselves. In that minute we are One Breath.

WEBREATH — the Minute at 11:11, your own local time — we are One Breath