63. ಅಲ್-ಮುನಾಫಿಕೂನ್
ನಿಮ್ಮ ಭಾಷೆಯಲ್ಲಿ ಇನ್ನೂ ಯಾವುದೇ ಅನುವಾದವಿಲ್ಲ — ಇಂಗ್ಲಿಷ್ ತೋರಿಸಲಾಗುತ್ತಿದೆ
1(ದೂತರೇ,) ಅವರು (ಕೆಲವರು) ಯಾವುದಾದರೂ ವ್ಯಾಪಾರ ಅಥವಾ ಮನರಂಜಕ ವಸ್ತುವನ್ನು ಕಂಡಾಗ ನಿಮ್ಮನ್ನು ನಿಂತಲ್ಲೇ ಬಿಟ್ಟು ಅವುಗಳೆಡೆಗೆ ಧಾವಿಸಿ ಬಿಡುತ್ತಾರೆ. ಹೇಳಿರಿ ಅಲ್ಲಾಹನ ಬಳಿ ಏನಿದೆಯೋ ಅದು ಸಕಲ ಮನರಂಜನೆ ಮತ್ತು ಸರ್ವ ವ್ಯಾಪಾರಗಳಿಗಿಂತಲೂ ಉತ್ತಮವಾಗಿದೆ ಮತ್ತು ಅಲ್ಲಾಹನು ಅತ್ಯುತ್ತಮ ಅನ್ನದಾತನಾಗಿದ್ದಾನೆ
2(ದೂತರೇ,) ಕಪಟಿಗಳು ನಿಮ್ಮ ಬಳಿಗೆ ಬಂದಾಗ, ‘‘ನೀವು ಖಂಡಿತ ಅಲ್ಲಾಹನ ದೂತರೆಂದು ನಾವು ಸಾಕ್ಷಿ ಹೇಳುತ್ತೇವೆ’’ ಎನ್ನುತ್ತಾರೆ. ನೀವು ತನ್ನ ದೂತರೆಂಬುದನ್ನು ಅಲ್ಲಾಹನು ಚೆನ್ನಾಗಿ ಬಲ್ಲನು. ಮತ್ತು, ಈ ಕಪಟಿಗಳು ಖಂಡಿತ ಸುಳ್ಳುಗಾರರೆಂಬುದಕ್ಕೆ ಅಲ್ಲಾಹನು ಸಾಕ್ಷಿಯಾಗಿದ್ದಾನೆ
3ಅವರು ತಮ್ಮ ಪ್ರತಿಜ್ಞೆಗಳನ್ನು ಗುರಾಣಿಗಳಾಗಿ ಬಳಸಿಕೊಳ್ಳುತ್ತಾರೆ. ಮತ್ತು ಅವರು ಅಲ್ಲಾಹನ ಮಾರ್ಗದಿಂದ ಜನರನ್ನು ತಡೆಯುತ್ತಾರೆ. ಅವರು ಮಾಡುತ್ತಿರುವ ಕೃತ್ಯಗಳು ತೀರಾ ಕೆಟ್ಟವು
4ಇದೇಕೆಂದರೆ ಅವರು ವಿಶ್ವಾಸಿಗಳಾದ ಬಳಿಕ ಮತ್ತೆ ಧಿಕ್ಕಾರಿಗಳಾದರು. ಆದ್ದರಿಂದ ಅವರ ಮನಸ್ಸುಗಳಿಗೆ ಮುದ್ರೆ ಜಡಿಯಲಾಯಿತು. ಈಗ ಅವರಿಗೆ ಏನೂ ಅರ್ಥವಾಗುವುದಿಲ್ಲ
5ನೀವು ಅವರನ್ನು ಕಂಡಾಗ ಅವರ ಶರೀರಗಳು ನಿಮಗೆ ಚಂದಗಾಣುತ್ತವೆ. ಅವರು ಮಾತನಾಡಿದರೆಂದರೆ ನೀವು ಅವರ ಮಾತನ್ನು ಕೇಳುತ್ತಲೇ ಇರುತ್ತೀರಿ. ಆದರೆ ಅವರ ಸ್ಥಿತಿಯು ಗೋಡೆಗೆ ಒರಗಿಸಿದ ಹಲಗೆಯಂತೆ, ತೀರಾ ಬರಡಾಗಿದೆ. ಯಾವುದಾದರೂ ದೊಡ್ಡ ಶಬ್ದವು ಕೇಳಿಸಿದೊಡನೆ, ಅವರು ಅದನ್ನು, ತಮ್ಮ ವಿರುದ್ಧ (ಏನೋ ಆಪತ್ತು ಎರಗಲಿದೆ) ಎಂದು ಭಾವಿಸುತ್ತಾರೆ. ಅವರು ಶತ್ರುಗಳು. ಅವರ ಕುರಿತು ಎಚ್ಚರವಾಗಿರಿ. ಅಲ್ಲಾಹನು ಅವರನ್ನು ನಾಶ ಮಾಡಲಿ. ಅವರು ಅದೆಲ್ಲಿ ಅಲೆಯುತ್ತಿದ್ದಾರೆ
6(ದೂತರೇ,) ‘‘ಬನ್ನಿ, ಅಲ್ಲಾಹನ ದೂತರು ನಿಮಗಾಗಿ (ಅಲ್ಲಾಹನಲ್ಲಿ) ಕ್ಷಮೆಯಾಚಿಸಲಿ’’ ಎಂದು ಹೇಳಿದಾಗ ಅವರು ಮುಖ ತಿರುಗಿಸಿ ಕೊಳ್ಳುತ್ತಾರೆ ಮತ್ತು ಅವರು ಅಹಂಕಾರ ಮೆರೆಯುತ್ತಾ, ತಪ್ಪಿಸಿಕೊಳ್ಳುವುದನ್ನು ನೀವು ಕಾಣುತ್ತೀರಿ
7ನೀವು ಅವರ ಕ್ಷಮೆಗಾಗಿ ಪ್ರಾರ್ಥಿಸಿದರೂ ಒಂದೇ ಪ್ರಾರ್ಥಿಸದಿದ್ದರೂ ಒಂದೇ. ಅಲ್ಲಾಹನಂತು ಅವರನ್ನು ಕ್ಷಮಿಸಲಾರನು. ಅಲ್ಲಾಹನು ಅವಿಧೇಯರಿಗೆ ಸನ್ಮಾರ್ಗವನ್ನು ತೋರುವುದಿಲ್ಲ
8‘‘ದೇವ ದೂತರ ಜೊತೆ ಇರುವವರಿಗಾಗಿ ಏನನ್ನೂ ಖರ್ಚು ಮಾಡಬೇಡಿ. ಅವರು (ತಾವಾಗಿಯೇ) ಹೊರಟು ಹೋಗುವರು’’ ಎಂದವರು ಅವರೇ. ಆಕಾಶಗಳ ಮತ್ತು ಭೂಮಿಯ ಭಂಡಾರಗಳೆಲ್ಲವೂ ಅಲ್ಲಾಹನಿಗೇ ಸೇರಿವೆ. ಆದರೆ ಕಪಟಿಗಳಿಗೆ ಇದು ಅರ್ಥವಾಗುವುದಿಲ್ಲ
9‘‘ನಾವು ಮದೀನಾದೆಡೆಗೆ ಮರಳಿದಾಗ, ನಮ್ಮಲ್ಲಿನ ಗೌರವಾನ್ವಿತರು ಹೀನರನ್ನು ಅಲ್ಲಿಂದ ಹೊರ ಹಾಕುವರು’’ ಎಂದು ಅವರು ಹೇಳುತ್ತಾರೆ. ನಿಜವಾಗಿ ಗೌರವವೆಲ್ಲವೂ ಅಲ್ಲಾಹನಿಗೆ, ಅವನ ದೂತರಿಗೆ ಮತ್ತು ವಿಶ್ವಾಸಿಗಳಿಗೆ ಸೇರಿದೆ. ಆದರೆ ಕಪಟಿಗಳಿಗೆ ಇದು ತಿಳಿದಿಲ್ಲ
10ವಿಶ್ವಾಸಿಗಳೇ, ನಿಮ್ಮ ಸಂಪತ್ತುಗಳು ಮತ್ತು ನಿಮ್ಮ ಸಂತಾನಗಳು ನಿಮ್ಮನ್ನು ಅಲ್ಲಾಹನ ನೆನಪಿನಿಂದ ದೂರ ಗೊಳಿಸದಿರಲಿ. ಹಾಗೆ ಮಾಡಿದವರೇ ನಿಜವಾಗಿ ನಷ್ಟ ಅನುಭವಿಸುವವರು
11ನಿಮ್ಮಲ್ಲಿ ಯಾರಿಗಾದರೂ ಮರಣವು ಬರುವ ಮನ್ನವೇ, ನಾವು ನಿಮಗೇನನ್ನು ನೀಡಿರುವೆವೋ ಅದರಿಂದ ಖರ್ಚು ಮಾಡಿರಿ. (ಮರಣವು ಒಂದು ಬಿಟ್ಟಾಗ) ಅವನು, ‘‘ನನ್ನೊಡೆಯಾ, ನೀನು ನನಗೆ ಒಂದಿಷ್ಟು ಹೆಚ್ಚು ಕಾಲಾವಕಾಶವನ್ನೇಕೆ ಕೊಟ್ಟಿಲ್ಲ? (ಕೊಟ್ಟಿದ್ದರೆ) ನಾನು ದಾನ ಧರ್ಮ ಮಾಡುತ್ತಿದ್ದೆ ಮತ್ತು ಸಜ್ಜನರ ಸಾಲಿಗೆ ಸೇರುತ್ತಿದ್ದೆ’’ ಎನ್ನುವನು
ಮೂಲ: Abdussalam Puthige
WEBREATH · 11:11
«If you are thankful, I will give you more» — Quran 14:7
Breath is one for all: everyone lives by it, whoever they are and whatever they believe. Every day at 11:11 local time people stop for sixty seconds, breathe, and thank GOD for the breath — each in their own words, each within themselves. In that minute we are One Breath.
WEBREATH — the Minute at 11:11, your own local time — we are One Breath