66. ಅಟ್-ತಹ್ರೀಮ್
ನಿಮ್ಮ ಭಾಷೆಯಲ್ಲಿ ಇನ್ನೂ ಯಾವುದೇ ಅನುವಾದವಿಲ್ಲ — ಇಂಗ್ಲಿಷ್ ತೋರಿಸಲಾಗುತ್ತಿದೆ
1ಏಳು ಆಕಾಶಗಳನ್ನು ಮತ್ತು ಅದೇ ಪ್ರಕಾರ ಭೂಮಿಯನ್ನು ಸೃಷ್ಟಿಸಿದವನು ಅಲ್ಲಾಹನೇ. ಅವುಗಳ ನಡುವೆ ಅವನ ಆದೇಶಗಳು ಇಳಿಯುತ್ತಲೇ ಇರುತ್ತವೆ – ಅಲ್ಲಾಹನು ಸರ್ವ ಶಕ್ತನೆಂಬುದನ್ನು ಮತ್ತು ಅಲ್ಲಾಹನು ತನ್ನ ಜ್ಞಾನದ ಮೂಲಕ ಎಲ್ಲವನ್ನೂ ಆವರಿಸಿ ಕೊಂಡಿರುವನು ಎಂಬುದನ್ನು ನೀವು ಅರಿಯುವಂತಾಗಲಿಕ್ಕಾಗಿ
2ಪ್ರವಾದಿ ವರ್ಯರೇ, ಅಲ್ಲಾಹನು ನಿಮಗೆ ಸಮ್ಮತಿಸಿರುವ ವಸ್ತುವನ್ನು (ಜೇನನ್ನು) ನೀವೇಕೆ ನಿಮ್ಮ ಮೇಲೆ ನಿಷೇಧಿಸಿ ಕೊಂಡಿರಿ? ನೀವು ನಿಮ್ಮ ಪತ್ನಿಯರನ್ನು ಮೆಚ್ಚಿಸಲು ಹೊರಟಿರಿ. ಅಲ್ಲಾಹನು ಕ್ಷಮಾಶೀಲನೂ ಕರುಣಾಮಯಿಯೂ ಆಗಿರುವನು
3(ವಿಶ್ವಾಸಿಗಳೇ,) ಅಲ್ಲಾಹನು ನಿಮ್ಮ ಪ್ರಮಾಣಗಳ ಕುರಿತಂತೆ (ವಚನ ಭಂಗಕ್ಕೆ) ಪ್ರಾಯಶ್ಚಿತ್ತವನ್ನು ನಿಶ್ಚಯಿಸಿರುವನು. ಅಲ್ಲಾಹನೇ ನಿಮ್ಮ ಕಾರ್ಯ ಸಾಧಕನು ಮತ್ತು ಅವನು ಎಲ್ಲವನ್ನೂ ಬಲ್ಲವನೂ ಯುಕ್ತಿವಂತನೂ ಆಗಿರುವನು
4ಪ್ರವಾದಿವರ್ಯರು ತಮ್ಮ ಒಬ್ಬ ಪತ್ನಿಗೆ ಗುಟ್ಟಾಗಿಒಂದು ವಿಷಯವನ್ನು ತಿಳಿಸಿದ್ದರು. ಆಕೆ ಅದನ್ನು (ಇನ್ನೊಬ್ಬಪತ್ನಿಗೆ) ತಿಳಿಸಿ ಬಿಟ್ಟರು. ಮತ್ತು ಈ ಸಮಾಚಾರವನ್ನು ಅಲ್ಲಾಹನು ಅವರಿಗೆ(ಪ್ರವಾದಿಗೆ) ಬಹಿರಂಗ ಪಡಿಸಿದನು. ಅವರು(ಪ್ರವಾದಿಯು) ಈ ಸಮಾಚಾರವನ್ನು (ಆಕೆಗೆ)ಭಾಗಶಃತಿಳಿಸಿದರು ಮತ್ತು ಭಾಗಶಃ ಕಡೆಗಣಿಸಿದರು. ಅವರು ಈ ವಿಷಯವನ್ನು ಆಕೆಗೆ ತಿಳಿಸಿದಾಗ,‘‘ಇದನ್ನೆಲ್ಲಾ ನಿಮಗೆ ಯಾರು ತಿಳಿಸಿದರು?’’ ಎಂದು ಆಕೆ ಕೇಳಿದರು. ಅವರು, ‘‘ಎಲ್ಲವನ್ನೂ ಬಲ್ಲವನು ಹಾಗೂ ಎಲ್ಲದರ ಅರಿವುಳ್ಳವನು ನನಗೆ ಇದನ್ನು ತಿಳಿಸಿರುವನು’’ಎಂದರು
5ಇದೀಗ ನೀವಿಬ್ಬರೂ (ಪತ್ನಿಯರು) ಅಲ್ಲಾಹನೆದುರು ಪಶ್ಚಾತ್ತಾಪ ಪಡುವುದು ಒಳ್ಳೆಯದು. ನಿಮ್ಮ ಮನಸ್ಸುಗಳು ವಾಲಿಕೊಂಡಿವೆ. ನೀವಿಬ್ಬರೂ ಅವರಿಗೆ (ಪ್ರವಾದಿಗೆ) ಎದುರಾಗಿ ಪರಸ್ಪರ ನೆರವಿಗೆ ಇಳಿದಿದ್ದರೆ (ನಿಮಗೆ ತಿಳಿದಿರಲಿ;) ಅಲ್ಲಾಹನು ಅವರ ರಕ್ಷಕನಾಗಿದ್ದಾನೆ ಮತ್ತು ಜಿಬ್ರೀಲ್ ಹಾಗೂ ಸಕಲ ಸಜ್ಜನ ವಿಶ್ವಾಸಿಗಳು ಮತ್ತು ಮಲಕ್ಗಳು ಅವರ ಸಹಾಯಕರಾಗಿದ್ದಾರೆ
6ಅವರು (ಪ್ರವಾದಿ) ನಿಮ್ಮನ್ನು ವಿಚ್ಛೇದಿಸಿದರೆ, ಅವರ ಒಡೆಯನು ಅವರಿಗೆ ನಿಮಗಿಂತ ಉತ್ತಮರಾದವರನ್ನು ನೀಡಬಹುದು. ಅವರು ಮುಸ್ಲಿಮರೂ, ವಿಶ್ವಾಸಿನಿಯರೂ, ವಿಧೇಯರೂ, ಪಶ್ಚಾತ್ತಾಪ ಪಡುವವರೂ, ಆರಾಧನಾ ನಿರತರೂ, ಉಪವಾಸಿಗರೂ ಆಗಿರುವ ವಿವಾಹಾನುಭವ ಉಳ್ಳವರು ಅಥವಾ ಕನ್ಯೆಯರಾಗಿರುವರು
7ವಿಶ್ವಾಸಿಗಳೇ, ನೀವು ಸ್ವತಃ ನಿಮ್ಮನ್ನೂ ನಿಮ್ಮ ಕುಟುಂಬದವರನ್ನೂ ನರಕಾಗ್ನಿಯಿಂದ ರಕ್ಷಿಸಿರಿ. ಮಾನವರು ಮತ್ತು ಕಲ್ಲುಗಳು ಅದರ ಇಂಧನಗಳಾಗಿರುವವು. ಕಠೋರರೂ ಬಲಿಷ್ಠರೂ ಆಗಿರುವ ಮಲಕ್ಗಳು ಅದರ ಮೇಲ್ವಿಚಾರಕರಾಗಿರುವರು. ಅವರು ಅಲ್ಲಾಹನು ತಮಗೆ ನೀಡುವ ಯಾವ ಆದೇಶವನ್ನೂ ಮೀರಲಾರರು ಮತ್ತು ಅವರು ತಮಗೆ ಆದೇಶಿಸಿಲಾದುದನ್ನೇ ಮಾಡುವರು
8ಧಿಕ್ಕಾರಿಗಳೇ, ಇಂದು ನೆಪಗಳನ್ನು ಹೂಡ ಬೇಡಿ. ನೀವು ಏನನ್ನು ಮಾಡಿದ್ದಿರೊ ಅದರ ಪ್ರತಿಫಲವನ್ನಷ್ಟೇ ನಿಮಗೆ ನೀಡಲಾಗುತ್ತಿದೆ
9ವಿಶ್ವಾಸಿಗಳೇ, ನಿರ್ಮಲ ಮನಸ್ಸಿನೊಂದಿಗೆ ಅಲ್ಲಾಹನ ಮುಂದೆ ಪಶ್ಚಾತ್ತಾಪ ಪಡಿರಿ. ನಿಮ್ಮ ಒಡೆಯನು ನಿಮ್ಮಿಂದ ನಿಮ್ಮ ಪಾಪಗಳನ್ನು ನಿವಾರಿಸಬಹುದು ಮತ್ತು ನಿಮ್ಮನ್ನು ತಳದಲ್ಲಿ ನದಿಗಳು ಹರಿಯುವ ಸ್ವರ್ಗದೊಳಗೆ ಸೇರಿಸಬಹುದು. ಅಂದು ಅಲ್ಲಾಹನು ಪ್ರವಾದಿಯನ್ನಾಗಲೀ ಅವರ ಜೊತೆಗಿರುವ ವಿಶ್ವಾಸಿಗಳನ್ನಾಗಲೀ ಅಪಮಾನಿಸಲಾರನು. ಅವರ ಪ್ರಕಾಶವು ಅವರ ಮುಂಭಾಗದಲ್ಲೂ ಬಲ ಭಾಗದಲ್ಲೂ ಚಲಿಸುತ್ತಿರುವುದು. ಅವರು ಹೇಳುವರು; ‘‘ನಮ್ಮೊಡೆಯಾ, ನಮ್ಮ ಬೆಳಕನ್ನು ಸಂಪೂರ್ಣ ಗೊಳಿಸು ಮತ್ತು ನಮ್ಮನ್ನು ಕ್ಷಮಿಸು. ನೀನು ಎಲ್ಲವನ್ನೂ ಮಾಡ ಬಲ್ಲೆ’’
10ಪ್ರವಾದಿವರ್ಯರೇ, ಧಿಕ್ಕಾರಿಗಳು ಮತ್ತು ಕಪಟಿಗಳ ವಿರುದ್ಧ ಹೋರಾಡಿರಿ ಮತ್ತು ಅವರ ವಿರುದ್ಧ ಕಠಿಣ ನಿಲುವು ತಾಳಿರಿ. ನರಕವೇ ಅವರ ನೆಲೆಯಾಗಿರುವುದು ಮತ್ತು ಅದು ತೀರಾ ನಿಕೃಷ್ಟ ನೆಲೆಯಾಗಿದೆ
11ಅಲ್ಲಾಹನು ಧಿಕ್ಕಾರಿಗಳಿಗಾಗಿ, ನೂಹರ ಪತ್ನಿ ಮತ್ತು ಲೂತರ ಪತ್ನಿಯ ಉದಾಹರಣೆಯನ್ನು ಮುಂದಿಟ್ಟಿರುವನು; ಅವರಿಬ್ಬರೂ ನಮ್ಮ ಇಬ್ಬರು ಸಜ್ಜನ ದಾಸರ ಅಧೀನದಲ್ಲಿದ್ದರು. ಆದರೆ ಅವರು ಅವರನ್ನು (ತಮ್ಮ ಪತಿಯರನ್ನು) ವಂಚಿಸಿದರು. ಕೊನೆಗೆ ಅಲ್ಲಾಹನೆದುರು ಅವರಿಂದ (ತಮ್ಮ ಪತಿಯರಿಂದ) ಅವರಿಗೆಯಾವ ಲಾಭವೂ ಆಗಲಿಲ್ಲ. ‘‘ನರಕದೊಳಗೆ ಸೇರಿ ಕೊಂಡವರ ಜೊತೆ ನೀವೂ ಸೇರಿಕೊಳ್ಳಿರಿ’’ ಎಂದು ಅವರೊಡನೆ ಹೇಳಲಾಯಿತು
12ಮತ್ತು ಅಲ್ಲಾಹನು ವಿಶ್ವಾಸಿಗಳಿಗಾಗಿ, ಫಿರ್ಔನನ ಪತ್ನಿಯ ಮಾದರಿಯನ್ನು ಮುಂದಿಡುತ್ತಾನೆ. ಆಕೆ ಹೇಳಿದರು; ‘‘ನನ್ನೊಡೆಯಾ, ಸ್ವರ್ಗದಲ್ಲಿ ನೀನು ನನಗಾಗಿ ನಿನ್ನ ಬಳಿ ಒಂದು ನಿವಾಸವನ್ನು ಒದಗಿಸು ಮತ್ತು ಫಿರ್ಔನ್ ಹಾಗೂ ಅವನ ದುಷ್ಕರ್ಮಗಳಿಂದ ನನ್ನನ್ನು ರಕ್ಷಿಸು. ಮತ್ತು ನೀನು ನನ್ನನ್ನು ಅಕ್ರಮಿಗಳಿಂದ ವಿಮೋಚಿಸು’’
ಮೂಲ: Abdussalam Puthige
WEBREATH · 11:11
«If you are thankful, I will give you more» — Quran 14:7
Breath is one for all: everyone lives by it, whoever they are and whatever they believe. Every day at 11:11 local time people stop for sixty seconds, breathe, and thank GOD for the breath — each in their own words, each within themselves. In that minute we are One Breath.
WEBREATH — the Minute at 11:11, your own local time — we are One Breath