ಇಸ್ಲಾಂ
ಹಿಂದೆ

70. ಅಲ್-ಮಾಆರಿಜ್

ನಿಮ್ಮ ಭಾಷೆಯಲ್ಲಿ ಇನ್ನೂ ಯಾವುದೇ ಅನುವಾದವಿಲ್ಲ — ಇಂಗ್ಲಿಷ್ ತೋರಿಸಲಾಗುತ್ತಿದೆ

1ನೀವು ಮಹೋನ್ನತನಾದ ನಿಮ್ಮ ಒಡೆಯನ ನಾಮದ ಪಾವಿತ್ರವನ್ನು ಜಪಿಸಿರಿ

2ಪ್ರಶ್ನಿಸುವವನೊಬ್ಬನು, (ಧಿಕ್ಕಾರಿಗಳ ಮೇಲೆ) ಖಂಡಿತ ಬಂದೆರಗಲಿರುವ ಶಿಕ್ಷೆಯ ಕುರಿತು ಪ್ರಶ್ನಿಸಿದ್ದಾನೆ

3ಧಿಕ್ಕಾರಿಗಳ ಮೇಲೆ ಅದು ಬಂದೆರಗುವುದನ್ನು ನಿವಾರಿಸಲು ಯಾರಿಂದಲೂ ಸಾಧ್ಯವಾಗದು

4ಅತ್ಯುನ್ನತ ಸ್ಥಾನಗಳ ಒಡೆಯನಾದ ಅಲ್ಲಾಹನ ಕಡೆಯಿಂದ (ಅದು ಬರಲಿದೆ)

5ಐವತ್ತು ಸಾವಿರ ವರ್ಷಗಳಷ್ಟು ಧೀರ್ಘವಾಗಿರುವ ಒಂದು ದಿನ, ಮಲಕ್‌ಗಳು ಮತ್ತು ರೂಹ್ (ಜಿಬ್ರೀಲ್) ಅವನೆಡೆಗೆ ಏರಿ ಹೋಗುತ್ತಾರೆ

6(ದೂತರೇ,) ಸದ್ಯ ನೀವು ಸಂಯಮ ತೋರಿರಿ. ಸಭ್ಯವಾದ ಸಂಯಮ

7ಅವರು ಅದನ್ನು (ವಿಚಾರಣೆಯ ದಿನವನ್ನು) ತುಂಬಾ ದೂರದಲ್ಲಿ ಕಾಣುತ್ತಿದ್ದಾರೆ

8ಆದರೆ ನಾವು ಅದನ್ನು ತೀರಾ ಹತ್ತಿರದಲ್ಲಿ ಕಾಣುತ್ತಿದ್ದೇವೆ

9ಆಕಾಶವು ಕರಗಿದ ತಾಮ್ರದಂತಾಗುವ ಆ ದಿನ

10ಪರ್ವತಗಳೆಲ್ಲಾ ಉಣ್ಣೆಯ ಚೂರುಗಳಂತಾಗಿ ಬಿಡುವವು

11(ಅಂದು) ಯಾವ ಮಿತ್ರನೂ ತನ್ನ ಮಿತ್ರನ ಕುರಿತು ವಿಚಾರಿಸಲಾರನು

12ನಿಜವಾಗಿ, ಅವರು ಪರಸ್ಪರರನ್ನು ನೋಡುತ್ತಿರುವರು

13ಅಂದು ಅಪರಾಧಿಯು ಶಿಕ್ಷೆಗೆ ಪರಿಹಾರವಾಗಿ ತನ್ನ ಪುತ್ರರನ್ನು ನೀಡಲು ಸಿದ್ದನಾಗುವನು

14(ಮಾತ್ರವಲ್ಲ,) ತನ್ನ ಪತ್ನಿ ಮತ್ತು ತನ್ನ ಸಹೋದರರನ್ನೂ ತನಗೆ ಆಶ್ರಯ ನೀಡಿದ ತನ್ನ ಕುಟುಂಬವನ್ನೂ

15ಮತ್ತು ಭೂಮಿಯಲ್ಲಿರುವ ಎಲ್ಲರನ್ನೂ (ಪರಿಹಾರವಾಗಿ ಕೊಟ್ಟು) ಶಿಕ್ಷೆಯಿಂದ ಪಾರಾಗಲು ಬಯಸುವನು

16ಖಂಡಿತ ಇಲ್ಲ. ಅದು, ಭುಗಿದೇಳುವ ಬೆಂಕಿಯಾಗಿರುವುದು

17ಚರ್ಮವನ್ನು ಸುಲಿದು ಬಿಡುವ ಬೆಂಕಿ

18ಸತ್ಯವನ್ನು ಕಡೆಗಣಿಸಿ ದೊಡ್ಡಸ್ತಿಕೆ ಮೆರೆದವನನ್ನು ಅದು (ನರಕವು) ಕರೆಯುವುದು

19ಸಂಪತ್ತನ್ನು ಸಂಗ್ರಹಿಸಿ ಮುಚ್ಚಿಟ್ಟವನನ್ನೂ (ಅದು ಕರೆಯುವುದು)

20ಖಂಡಿತವಾಗಿಯೂ ಮಾನವನನ್ನು ಚಂಚಲನಾಗಿ ಸೃಷ್ಟಿಸಲಾಗಿದೆ

21ಸಂಕಷ್ಟವೇನಾದರೂ ಎದುರಾದೊಡನೆ ಅವನು ಗಾಬರಿಗೊಳ್ಳುತ್ತಾನೆ

22ಸುಖ ಪ್ರಾಪ್ತವಾದಾಗ ಜಿಪುಣನಾಗಿ ಬಿಡುತ್ತಾನೆ

23ಆದರೆ ನಮಾಝ್ ಸಲ್ಲಿಸುವವರು ಮಾತ್ರ (ಹಾಗಿರುವುದಿಲ್ಲ)

24ಅವರು ಸದಾ ಕಟ್ಟುನಿಟ್ಟಾಗಿ ನಮಾಝನ್ನು ಪಾಲಿಸುತ್ತಾರೆ

25ಅವರ ಸಂಪತ್ತುಗಳಲ್ಲಿ ನಿರ್ದಿಷ್ಟವಾದ ಹಕ್ಕು ಇದೆ

26ಬೇಡುವವನಿಗೆ ಮತ್ತು ವಂಚಿತನಿಗೆ

27ಪ್ರತಿಫಲದ ದಿನವಿರುವುದು ಸತ್ಯ ಎಂದು ಅವರು ನಂಬುತ್ತಾರೆ

28ಅವರು ತಮ್ಮೊಡೆಯನ ಶಿಕ್ಷೆಗೆ ಅಂಜುತ್ತಾರೆ

29ಅವರ ಒಡೆಯನ ಶಿಕ್ಷೆ ಎಂತಹದ್ದೆಂದರೆ, ಆ ಕುರಿತು ನಿಶ್ಚಿಂತರಾಗಿರಲು ಸಾಧ್ಯವೇ ಇಲ್ಲ

30ಅವರು ತಮ್ಮ ಮಾನವನ್ನು ಕಾಪಾಡಿಕೊಳ್ಳುತ್ತಾರೆ

31ತಮ್ಮ ಪತ್ನಿಯರು ಮತ್ತು ದಾಸಿಯರ ವಿಷಯದಲ್ಲಿ ಮಾತ್ರ ಅವರು ಖಂಡನಾರ್ಹರಲ್ಲ

32ಅದರ ಆಚಿನದನ್ನು ಅಪೇಕ್ಷಿಸುವವರು – ಅವರೇ ಎಲ್ಲೆ ಮೀರುವವರು

33ಅವರು (ಸ್ವರ್ಗಕ್ಕೆ ಅರ್ಹರಾದ ಸಜ್ಜನರು) ತಮ್ಮನ್ನು ನಂಬಿ ಒಪ್ಪಿಸಲಾದ ಹೊಣೆಗಳನ್ನು ನಿಭಾಯಿಸುತ್ತಾರೆ ಮತ್ತು ತಮ್ಮ ಕರಾರುಗಳನ್ನು ಪಾಲಿಸುತ್ತಾರೆ

34ಅವರು ತಮ್ಮ ಸಾಕ್ಷಗಳಲ್ಲಿ ಸ್ಥಿರರಾಗಿರುತ್ತಾರೆ

35ಅವರು ತಮ್ಮ ನಮಾಝ್‌ಗಳ ಕುರಿತು ಎಚ್ಚರ ವಹಿಸುತ್ತಾರೆ

36ಅವರೇ, ಗೌರವಾನ್ವಿತರಾಗಿ ಸ್ವರ್ಗ ತೋಟಗಳಲ್ಲಿ ಇರುವವರು

37ಇದೇನಾಗಿದೆ ಧಿಕ್ಕಾರಿಗಳಿಗೆ? ಅವರೇಕೆ ನಿಮ್ಮೆಡೆಗೆ ಧಾವಿಸಿ ಬರುತ್ತಿದ್ದಾರೆ

38ಬಲಭಾಗದಿಂದಲೂ ಎಡಭಾಗದಿಂದಲೂ ಗುಂಪು ಗುಂಪಾಗಿ ಬರುತ್ತಿದ್ದಾರೆ

39ಅವರ ಪೈಕಿ ಪ್ರತಿಯೊಬ್ಬರೂ ಅನುಗ್ರಹ ತುಂಬಿದ ಸ್ವರ್ಗದೊಳಗೆ ಪ್ರವೇಶಿಸಲು ಆಶಿಸುತ್ತಿದ್ದಾರೆ

40ಖಂಡಿತ ಸಾಧ್ಯವಿಲ್ಲ. ಅವರಿಗೆ ತಿಳಿದಿರುವ ಒಂದು ವಸ್ತುವಿನಿಂದ ನಾವೇ ಅವರನ್ನು ಸೃಷ್ಟಿಸಿರುವೆವು

41ಖಂಡಿತ ಇಲ್ಲ. ನಾನು ಪೂರ್ವಗಳ ಮತ್ತು ಪಶ್ಚಿಮಗಳ ಒಡೆಯನ ಆಣೆ ಹಾಕಿ ಹೇಳುತ್ತಿದ್ದೇನೆ, ನಾವು ಖಂಡಿತ ಅದನ್ನು ಮಾಡಬಲ್ಲೆವು

42ಅವರ ಸ್ಥಾನದಲ್ಲಿ ನಾವು ಅವರಿಗಿಂತ ಉತ್ತಮರನ್ನು ತರಬಲ್ಲೆವು. ಯಾರೂ ನಮ್ಮನ್ನು ಸೋಲಿಸಲಾರರು

43ಅವರನ್ನು ಬಿಟ್ಟು ಬಿಡಿರಿ. ಅವರು, ತಮಗೆ ವಾಗ್ದಾನ ಮಾಡಲಾಗಿರುವ ದಿನವನ್ನು ಎದುರಿಸುವ ತನಕ, ನಿರರ್ಥಕ ಕೆಲಸಗಳಲ್ಲಿ ಮತ್ತು ಆಟ ವಿನೋದಗಳಲ್ಲಿ ನಿರತರಾಗಿರಲಿ

44ಅವರು, ತಮ್ಮ ಗೋರಿಗಳಿಂದ ಎದ್ದು ಹೊರ ಬರುವ ದಿನ, ಒಂದು ನಿರ್ದಿಷ್ಟ ಗುರಿಯೆಡೆಗೋ ಎಂಬಂತೆ ಆತುರರಾಗಿ ಧಾವಿಸುತ್ತಿರುವರು

ಮೂಲ: Abdussalam Puthige

WEBREATH · 11:11

«If you are thankful, I will give you more» — Quran 14:7

Breath is one for all: everyone lives by it, whoever they are and whatever they believe. Every day at 11:11 local time people stop for sixty seconds, breathe, and thank GOD for the breath — each in their own words, each within themselves. In that minute we are One Breath.

WEBREATH — the Minute at 11:11, your own local time — we are One Breath