ಇಸ್ಲಾಂ
ಹಿಂದೆ

78. ಆನ್-ನಬಾ

ನಿಮ್ಮ ಭಾಷೆಯಲ್ಲಿ ಇನ್ನೂ ಯಾವುದೇ ಅನುವಾದವಿಲ್ಲ — ಇಂಗ್ಲಿಷ್ ತೋರಿಸಲಾಗುತ್ತಿದೆ

1ಆ ಮಹಾ ವಾರ್ತೆಯ ಕುರಿತೇ

2ಆ ವಿಷಯದಲ್ಲಿ ಅವರ ನಿಲುವುಗಳು ತೀರಾ ಭಿನ್ನವಾಗಿವೆ

3ಹಾಗಲ್ಲ, ಅವರಿಗೆ ಬೇಗನೆ ತಿಳಿಯಲಿದೆ

4ಮತ್ತೆ, ಹಾಗಲ್ಲ, ಅವರಿಗೆ ಬೇಗನೆ ತಿಳಿಯಲಿದೆ

5ಭೂಮಿಯನ್ನು ನಾವು ಹಾಸಿಗೆಯಾಗಿಸಿಲ್ಲವೇ

6ಮತ್ತು ಪರ್ವತಗಳನ್ನು ಮೊಳೆಗಳಾಗಿಸಿಲ್ಲವೇ

7ಮತ್ತು ನಾವು ನಿಮ್ಮನ್ನು ಜೋಡಿಗಳಾಗಿ ಸೃಷ್ಟಿಸಿರುವೆವು

8ಮತ್ತು ನಾವು ನಿಮ್ಮ ನಿದ್ರೆಯನ್ನು (ನಿಮ್ಮ ಪಾಲಿಗೆ) ವಿಶ್ರಾಂತಿಯಾಗಿಸಿರುವೆವು

9ಮತ್ತು ನಾವು ರಾತ್ರಿಯನ್ನು ಮರೆಯಾಗಿಸಿರುವೆವು

10ಮತ್ತು ನಾವು ಹಗಲನ್ನು ಸಂಪಾದನೆಯ ಸಮಯವಾಗಿಸಿರುವೆವು

11ಮತ್ತು ನಿಮ್ಮ ಮೇಲೆ ಬಲಿಷ್ಠವಾದ ಏಳು ವಸ್ತು (ಆಕಾಶ)ಗಳನ್ನು ನಿರ್ಮಿಸಿರುವೆವು

12ಮತ್ತು ನಾವು ಸೂರ್ಯನನ್ನು ಒಂದು ಉಜ್ವಲ ಜ್ಯೋತಿಯಾಗಿಸಿರುವೆವು

13ಮತ್ತು ನಾವು ಮೋಡಗಳಿಂದ ಧಾರಾಕಾರ ನೀರನ್ನು ಸುರಿಸಿರುವೆವು

14ಆ ಮೂಲಕ ವಿವಿಧ ಬೆಳೆ ಹಾಗೂ ತರಕಾರಿಗಳನ್ನು ಬೆಳೆಸಲಿಕ್ಕಾಗಿ

15ಮತ್ತು ದಟ್ಟವಾದ ತೋಟಗಳನ್ನು ಬೆಳೆಸಲಿಕ್ಕಾಗಿ

16ತೀರ್ಪಿನ ದಿನವು ಈಗಾಗಲೇ ನಿಶ್ಚಿತವಾಗಿದೆ

17ಕಹಳೆಯನ್ನು ಊದುವ ದಿನ ನೀವು ದಂಡು ದಂಡುಗಳಾಗಿ ಬರುವಿರಿ

18ಆಕಾಶವನ್ನು ತೆರೆದು ಬಿಡಲಾಗುವುದು ಮತ್ತು ಅದರಲ್ಲಿ (ಎಲ್ಲೆಲ್ಲೂ) ಬಾಗಿಲುಗಳೇ ಇರುವವು

19ಮತ್ತು ಪರ್ವತಗಳನ್ನು ನಡೆಸಲಾಗುವುದು, ಅವು ಮರಳಿನಂತಾಗಿ ಬಿಡುವವು

20ಖಂಡಿತವಾಗಿಯೂ ನರಕವು ಹೊಂಚು ಹಾಕುತ್ತಿದೆ

21ಅದುವೇ ವಿದ್ರೋಹಿಗಳ ನೆಲೆಯಾಗುವುದು

22ಯುಗ ಯುಗಾಂತರ ಕಾಲ ಅವರು ಅದರಲ್ಲಿ ಬಿದ್ದು ಕೊಂಡಿರುವರು

23ಅಲ್ಲಿ ಅವರು ಯಾವುದೇ ತಂಪು ವಸ್ತುವಿನ ಅಥವಾ ಯಾವುದೇ ಪಾನೀಯದ ರುಚಿ ಕಾಣಲಾರರು

24ಅಲ್ಲಿ ಅವರಿಗೆ ಸಿಗುವುದು, ಕುದಿಯುವ ನೀರು ಮತ್ತು ಹರಿಯುವ ಕೀವು ಮಾತ್ರ

25ಇದು ಸೂಕ್ತ ಪ್ರತಿಫಲವಾಗಿದೆ

26ಅವರು (ಪರಲೋಕದ) ವಿಚಾರಣೆಯನ್ನು ನಿರೀಕ್ಷಿಸಿಯೇ ಇರಲಿಲ್ಲ

27ಅವರು ನಮ್ಮ ವಚನಗಳನ್ನು ಸುಳ್ಳೆಂದು ತಿರಸ್ಕರಿಸುತ್ತಿದ್ದರು

28ನಾವು ಎಲ್ಲವನ್ನೂ ಬರೆದು ಭದ್ರವಾಗಿಟ್ಟಿರುವೆವು

29ಇದೀಗ ಸವಿಯಿರಿ. ಇನ್ನು ನಿಮ್ಮ ಪಾಲಿಗೆ ಶಿಕ್ಷೆಯ ಹೊರತು ಬೇರೇನೂ ಹೆಚ್ಚದು

30ಧರ್ಮ ನಿಷ್ಠರಿಗೆ ಖಂಡಿತ ವಿಜಯ ಸಿಗಲಿದೆ

31ತೋಟಗಳು ಮತ್ತು ದ್ರಾಕ್ಷಿಗಳು

32ಮತ್ತು ಸಹ ವಯಸ್ಕ ಯುವತಿಯರು

33ತುಂಬಿ ತುಳುಕುವ ಪಾನ ಪಾತ್ರೆಗಳು (ಅವರಿಗಾಗಿ ಕಾದಿವೆ)

34ಅಲ್ಲಿ ಅವರು ಯಾವುದೇ ಅಸಭ್ಯ ಮಾತನ್ನಾಗಲೀ ಸುಳ್ಳನ್ನಾಗಲೀ ಕೇಳಲಾರರು

35ಇದು ಸತ್ಫಲವಾಗಿದೆ, ನಿಮ್ಮ ಒಡೆಯನ ಕಡೆಯಿಂದ. (ಅಲ್ಲದೆ ನಿಮಗಾಗಿ) ಧಾರಾಳ ಉಡುಗೊರೆಗಳಿವೆ

36ಅವನು ಆಕಾಶಗಳ ಹಾಗೂ ಭೂಮಿಯ ಮತ್ತು ಅವೆರಡರ ನಡುವೆ ಇರುವ ಎಲ್ಲವುಗಳ ಒಡೆಯನು, ಅವನು ಪರಮ ದಯಾಮಯನು. ಅವನೊಡನೆ ಮಾತನಾಡುವ ಅಧಿಕಾರ ಯಾರಿಗೂ ಇಲ್ಲ

37ರೂಹ್ (ಜಿಬ್‌ರೀಲ್) ಮತ್ತು ಇತರ ಮಲಕ್‌ಗಳು ಸಾಲಾಗಿ ನಿಲ್ಲುವ ಆ ದಿನ, ಆ ಪರಮ ದಯಾಮಯನ ಅಪ್ಪಣೆ ಪಡೆದವರು ಹಾಗೂ ಸರಿಯಾದುದನ್ನು ಹೇಳುವವರ ಹೊರತು ಯಾರಿಗೂ ಮಾತನಾಡಲು ಸಾಧ್ಯವಾಗದು

38ಆ ದಿನವು ನಿಜಕ್ಕೂ ಬರಲಿದೆ. ಇಷ್ಟ ಉಳ್ಳವನು ತನ್ನ ಒಡೆಯನ ಬಳಿ ಆಶ್ರಯವನ್ನು ಪಡೆದು ಕೊಳ್ಳಲಿ

39ನಾನಂತೂ ನಿಮ್ಮನ್ನು, ಶೀಘ್ರವೇ ಬರಲಿರುವ ಶಿಕ್ಷೆಯ ಕುರಿತು ಎಚ್ಚರಿಸುತ್ತಿರುವೆನು. ಅಂದು ಪ್ರತಿಯೊಬ್ಬನೂ ತನ್ನ ಕೈಗಳು ಮುಂದೆ ಕಳಿಸಿರುವುದನ್ನು (ಕರ್ಮವನ್ನು) ಕಾಣುವನು ಮತ್ತು ಧಿಕ್ಕಾರಿಯು, ‘‘ಅಯ್ಯೋ, ನಾನು ಮಣ್ಣಾಗಿದ್ದರೆ ಚೆನ್ನಾಗಿತ್ತು’’ ಎನ್ನುವನು

40ಮುಳುಗಿ ಏಳುವವರ ಆಣೆ

ಮೂಲ: Abdussalam Puthige

WEBREATH · 11:11

«If you are thankful, I will give you more» — Quran 14:7

Breath is one for all: everyone lives by it, whoever they are and whatever they believe. Every day at 11:11 local time people stop for sixty seconds, breathe, and thank GOD for the breath — each in their own words, each within themselves. In that minute we are One Breath.

WEBREATH — the Minute at 11:11, your own local time — we are One Breath