ಇಸ್ಲಾಂ
ಹಿಂದೆ

88. ಅಲ್-ಘಾಶಿಯಾ

ನಿಮ್ಮ ಭಾಷೆಯಲ್ಲಿ ಇನ್ನೂ ಯಾವುದೇ ಅನುವಾದವಿಲ್ಲ — ಇಂಗ್ಲಿಷ್ ತೋರಿಸಲಾಗುತ್ತಿದೆ

1ಎಲ್ಲವನ್ನೂ ಆವರಿಸುವ (ಲೋಕಾಂತ್ಯ) ದಿನದ ವಾರ್ತೆಯು ನಿಮಗೆ ತಲುಪಿದೆಯೇ

2ಅಂದು ಕೆಲವು ಮುಖಗಳು ಭೀತವಾಗಿರುವವು

3ತೀವ್ರವಾಗಿ ದಣಿದು ಸೋತಿರುವವು

4ಅವರು ಉರಿಯುವ ಬೆಂಕಿಯನ್ನು ಸೇರುವರು

5ಕುದಿಯುವ ಚಿಲುಮೆಯ ನೀರನ್ನು ಅವರಿಗೆ ಕುಡಿಸಲಾಗುವುದು

6ಮುಳ್ಳಿನ ಗಿಡದ ಹೊರತು ಬೇರೆ ಯಾವ ಆಹಾರವೂ ಅವರಿಗೆ ಸಿಗದು

7ಅದರಿಂದ ಅವರಿಗೆ ಪುಷ್ಟತೆಯೂ ಸಿಗದು ಮತ್ತು ಅವರ ಹಸಿವೂ ನೀಗದು

8ಕೆಲವು ಮುಖಗಳು ಅಂದು ಸಂಭ್ರಮಿಸುತ್ತಿರುವವು

9ತಮ್ಮ ಗಳಿಕೆಯಿಂದ ಅವರು ಸಂತೃಪ್ತರಾಗಿರುವರು

10ಅವರು ಉನ್ನತವಾದ ತೋಟಗಳಲ್ಲಿರುವರು

11ವ್ಯರ್ಥವಾದ ಯಾವುದನ್ನೂ ಅವರು ಅಲ್ಲಿ ಕೇಳಲಾರರು

12ಅಲ್ಲಿ ಚಿಲುಮೆಗಳು ಹರಿಯುತ್ತಿರುವವು

13ಅಲ್ಲಿ ಎತ್ತರದಲ್ಲಿ ಹಾಸಿರುವ ಪೀಠಗಳಿರುವವು

14ಸಾಲಾಗಿಟ್ಟ ಪಾನ ಪಾತ್ರೆಗಳಿರುವವು

15ಸಾಲುಸಾಲಾಗಿ ದಿಂಬುಗಳಿರುವವು

16ಮತ್ತು ನುಣುಪಾದ ಹಾಸುಗಳು ಇರುವವು

17ಅವರು ಹೆಣ್ಣೊಂಟೆಯತ್ತ ನೋಡುವುದಿಲ್ಲವೇ – ಅವುಗಳನ್ನು ಯಾವ ರೀತಿ ಸೃಷ್ಟಿಸಲಾಗಿದೆ ಎಂದು

18ಮತ್ತು ಆಕಾಶದೆಡೆಗೆ, (ನೋಡುವುದಿಲ್ಲವೇ,) ಅದನ್ನು ಯಾವ ರೀತಿ ಎತ್ತರಿಸಲಾಗಿದೆ ಎಂದು

19ಮತ್ತು ಪರ್ವತಗಳೆಡೆಗೆ, (ನೋಡುವುದಿಲ್ಲವೇ) ಅವುಗಳನ್ನು ಯಾವ ರೀತಿ ನೆಡಲಾಗಿದೆ ಎಂದು

20ಮತ್ತು ಭೂಮಿಯೆಡೆಗೆ, (ನೋಡುವುದಿಲ್ಲವೇ) ಅದನ್ನು ಯಾವ ರೀತಿ ಹಾಸಲಾಗಿದೆ ಎಂದು

21(ದೂತರೇ,) ನೀವು ಬೋಧಿಸಿರಿ, ಏಕೆಂದರೆ ನೀವು ಬೋಧಕರೇ ಆಗಿದ್ದೀರಿ

22ನೀವು ಅವರ ಕಾವಲುಗಾರರೇನಲ್ಲ

23ಇನ್ನು ಕಡೆಗಣಿಸಿದವನ ಮತ್ತು ಧಿಕ್ಕರಿಸಿದವನ ವಿಚಾರ –

24ಅಲ್ಲಾಹನು ಅವನನ್ನು ದೊಡ್ಡ ಶಿಕ್ಷೆಗೆ ಗುರಿಪಡಿಸುವನು

25ಅವರು ಖಂಡಿತ ನಮ್ಮೆಡೆಗೇ ಮರಳಿ ಬರಬೇಕಾಗಿದೆ

26ಮತ್ತು ಅವರ ವಿಚಾರಣೆಯ ಹೊಣೆಯು ನಮ್ಮ ಮೇಲಿದೆ

ಮೂಲ: Abdussalam Puthige

WEBREATH · 11:11

«If you are thankful, I will give you more» — Quran 14:7

Breath is one for all: everyone lives by it, whoever they are and whatever they believe. Every day at 11:11 local time people stop for sixty seconds, breathe, and thank GOD for the breath — each in their own words, each within themselves. In that minute we are One Breath.

WEBREATH — the Minute at 11:11, your own local time — we are One Breath