91. ಆಶ್-ಶಮ್ಸ್
ನಿಮ್ಮ ಭಾಷೆಯಲ್ಲಿ ಇನ್ನೂ ಯಾವುದೇ ಅನುವಾದವಿಲ್ಲ — ಇಂಗ್ಲಿಷ್ ತೋರಿಸಲಾಗುತ್ತಿದೆ
1ಸೂರ್ಯನ ಹಾಗೂ ಅದರ ಬೆಳಕಿನಾಣೆ
2ಮತ್ತು ಅದರ (ಸೂರ್ಯನ) ಬೆನ್ನಿಗೇ ಉದಯಿಸುವ ಚಂದ್ರನಾಣೆ
3ಹಗಲಿನ ಹಾಗೂ ಅದನ್ನು ಬೆಳಗಿಸಿದವನಾಣೆ
4ಅದನ್ನು ಮರೆ ಮಾಚಿಬಿಡುವ ರಾತ್ರಿಯಾಣೆ
5ಆಕಾಶದ ಹಾಗೂ ಅದನ್ನು ನಿರ್ಮಿಸಿದವನಾಣೆ
6ಭೂಮಿಯ ಹಾಗೂ ಅದನ್ನು ಹರಡಿದವನಾಣೆ
7ಮನುಷ್ಯ ಚಿತ್ತದ ಹಾಗೂ ಅದನ್ನು ರೂಪಿಸಿದವನಾಣೆ
8ಆ ಬಳಿಕ ಅದಕ್ಕೆ ದುಷ್ಟತನದ ಹಾಗೂ ಧರ್ಮ ನಿಷ್ಠೆಯ ಅರಿವು ನೀಡಿದವನಾಣೆ
9ಅದನ್ನು ನಿರ್ಮಲವಾಗಿಟ್ಟವನು ವಿಜಯಿಯಾದನು
10ಅದನ್ನು ಮಲಿನ ಗೊಳಿಸಿದವನು ಸೋತನು
11ಸಮೂದ್ ಜನಾಂಗದವರು ತಮ್ಮ ಅಹಂಕಾರದ ಕಾರಣ (ದೂತರನ್ನು) ತಿರಸ್ಕರಿಸಿದರು
12ಅವರಲ್ಲಿನ ತೀರಾ ದುಷ್ಟನೊಬ್ಬನು ಎದ್ದು ನಿಂತನು
13ಆಗ ಅಲ್ಲಾಹನ ದೂತರು – ಅಲ್ಲಾಹನ ಒಂಟೆ ಮತ್ತು ಅವರ ನೀರು ಕುಡಿಯುವ ಸರದಿಯ ಕುರಿತು ಎಚ್ಚರವಿರಲಿ – ಎಂದರು
14ಆದರೆ ಅವರು ಅವರ (ದೂತರ) ಮಾತನ್ನು (ಸುಳ್ಳೆಂದು) ತಿರಸ್ಕರಿಸಿದರು ಹಾಗೂ ಅದರ (ಒಂಟೆಯ) ಕಾಲುಗಳನ್ನು ಕಡಿದು ಬಿಟ್ಟರು. ಆಗ ಅವರ ಪಾಪದ ಕಾರಣ ಅವರ ಒಡೆಯನು ಅವರ ಮೇಲೊಂದು ಶಿಕ್ಷೆಯನ್ನು ಎರಗಿಸಿದನು ಹಾಗೂ ಅವರನ್ನು ನೆಲಸಮ ಗೊಳಿಸಿಬಿಟ್ಟನು
15ಅದರ ಪರಿಣಾಮವೇನಾದೀತು ಎಂದು ಅವನು ಅಂಜಲಿಲ್ಲ
ಮೂಲ: Abdussalam Puthige
WEBREATH · 11:11
«If you are thankful, I will give you more» — Quran 14:7
Breath is one for all: everyone lives by it, whoever they are and whatever they believe. Every day at 11:11 local time people stop for sixty seconds, breathe, and thank GOD for the breath — each in their own words, each within themselves. In that minute we are One Breath.
WEBREATH — the Minute at 11:11, your own local time — we are One Breath